Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:22 - ಕನ್ನಡ ಸತ್ಯವೇದವು J.V. (BSI)

22 ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ತಾವೇ ಜ್ಞಾನಿಗಳೆಂದುಕೊಚ್ಚಿಕೊಳ್ಳುತ್ತ ಅವರು ನಿಜವಾಗಿಯೂ ಮೂರ್ಖರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಜನರು ತಮ್ಮನ್ನು ಜ್ಞಾನಿಗಳೆಂದು ಹೇಳಿಕೊಂಡು ಮೂರ್ಖರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ತಾವು ಜ್ಞಾನಿಗಳೆಂದು ಹೇಳಿಕೊಂಡರೂ ಮೂಢರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತೆನಿ ಮನ್ತ್ಯಾತ್ ಅಪ್ನಿ ಶಾನೆ ಮನುನ್, ಖರೆ ತೆನಿ ಪಿಶೆ ಹಾತ್;

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:22
11 ತಿಳಿವುಗಳ ಹೋಲಿಕೆ  

ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬದಾಗಿ ಎಣಿಸಿಕೊಳ್ಳದಂತೆ ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ; ಅದೇನಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವದು;


ತಾನೇ ಜ್ಞಾನಿಯೆಂದೆಣಿಸಿಕೊಳ್ಳುವವನನ್ನು ನೋಡು; ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.


ಬರೀ ಗಾಳಿ ಮೋಡಗಳು ಹೇಗೋ ದಾನಕೊಡುತ್ತೇನೆಂದು ಸುಳ್ಳಾಡಿ ಜಂಬಮಾಡುವವನೂ ಹಾಗೆಯೇ.


ಎಲ್ಲರೂ ತಿಳುವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿವಿುತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.


ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವದು. ಹಾಗಾದರೆ ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟೆನ್ನಬೇಕು!


ನೀನು ಮಾಡಿದ ಕೇಡಿಗೆ ಭಯಪಡದೆ ನನ್ನನ್ನು ಯಾರೂ ನೋಡರು ಎಂದುಕೊಂಡಿದ್ದೀ; ನಿನ್ನ ಜ್ಞಾನವಿವೇಕಗಳು ನಿನ್ನನ್ನು ಸೊಟ್ಟಗೆ ತಿರುಗಿಸಿದ್ದರಿಂದ ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲವೆಂದು ಯೋಚಿಸಿಕೊಂಡಿದ್ದೀ.


ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು, ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.


ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲರಿಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು