Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:26 - ಕನ್ನಡ ಸತ್ಯವೇದವು J.V. (BSI)

26 ಅವರು ಇಂಥದನ್ನು ಮಾಡಿದ್ದರಿಂದ ದೇವರು ಅವರನ್ನು ಕೇವಲ ತುಚ್ಫವಾದ ಕಾಮಾಭಿಲಾಷೆಗೆ ಒಪ್ಪಿಸಿದನು. ಹೇಗಂದರೆ ಅವರ ಹೆಂಗಸರು ಸ್ವಾಭಾವಿಕವಾದ ಭೋಗವನ್ನು ಬಿಟ್ಟು ಸ್ವಭಾವಕ್ಕೆ ವಿರುದ್ಧವಾದ ಭೋಗವನ್ನು ಅನುಸರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವರು ಇಂಥದ್ದನ್ನು ಮಾಡಿದ್ದರಿಂದ ದೇವರು ಅವರನ್ನು ಕೇವಲ ಲಜ್ಜಾಸ್ಪದವಾದ ಕಾಮಾಭಿಲಾಷೆಗಳಿಗೆ ಒಪ್ಪಿಸಿಬಿಟ್ಟನು. ಅವರ ಹೆಂಗಸರು ಸ್ವಾಭಾವಿಕವಾದ ಭೋಗವನ್ನು ತೊರೆದು ಸ್ವಭಾವಕ್ಕೆ ವಿರುದ್ಧವಾದ ಕಾಮಕೃತ್ಯಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಮಾನವರು ಈ ರೀತಿ ವರ್ತಿಸಿದ್ದರಿಂದಲೇ ದೇವರು ಅವರನ್ನು ತುಚ್ಛವಾದ ಕಾಮಾಭಿಲಾಷೆಗಳಿಗೆ ಬಿಟ್ಟುಬಿಟ್ಟರು. ಅವರ ಸ್ತ್ರೀಯರು, ಸ್ವಾಭಾವಿಕವಾದ ಭೋಗವನ್ನು ತೊರೆದು ಸ್ವಭಾವಕ್ಕೆ ವಿರುದ್ಧವಾದ ಕಾಮಕೃತ್ಯಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅವರು ಆ ರೀತಿ ವರ್ತಿಸಿದ್ದರಿಂದಲೇ, ದೇವರು ಅವರನ್ನು ನಾಚಿಕೆಕರವಾದ ಕಾಮಾಭಿಲಾಷೆಗೆ ಬಿಟ್ಟುಕೊಟ್ಟನು. ಅವರ ಸ್ತ್ರೀಯರು ಪುರಷರೊಂದಿಗೆ ಪಡೆಯುತ್ತಿದ್ದ ಸಹಜವಾದ ಲೈಂಗಿಕ ಸಂಪರ್ಕವನ್ನು ನಿಲ್ಲಿಸಿ, ಸಲಿಂಗಕಾಮಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವರು ಇಂಥದ್ದನ್ನು ಮಾಡಿದ್ದರಿಂದ ದೇವರು ಅವರನ್ನು ಕೇವಲ ಲಜ್ಜಾಸ್ಪದವಾದ ಕಾಮಾಭಿಲಾಷೆಗೆ ಒಪ್ಪಿಸಿಬಿಟ್ಟರು. ಹೇಗೆಂದರೆ ಅವರ ಸ್ತ್ರೀಯರು ಸಹ ಸ್ವಾಭಾವಿಕವಾದ ಭೋಗವನ್ನು ಬಿಟ್ಟು, ಅಸ್ವಾಭಾವಿಕವಾದದ್ದನ್ನು ಅನುಸರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಹೆ ಸಗ್ಳೆ ಕರಲ್ಲ್ಯಾಸಾಟಿ ದೆವಾನ್ ತೆಂಕಾ ತೆಂಚ್ಯಾ ಅಬ್ರು‍ಗೆಡಿಪಾನಾಚ್ಯಾ ಚಾಲಿಚ್ಯಾ ತಾಬೆತ್ ದಿವ್ನ್ ಸೊಡ್ಲ್ಯಾನಾಯ್. ಬಾಯ್ಕಾಮನ್ಸಾನಿ ಸೈತ್ ತೆಂಚೊ ಸ್ವಾಭಾವಿಕ್ ರಿತಿನ್ ಆಂಗಾಚೊ ಸಮಂದ್ ಕರ್‍ತಲೊ ಸೊಡುನ್ ಸ್ವಬಾವಾಕ್ ಸಮಾ ನಸಲ್ಲ್ಯಾ ರಿತಿನ್ ಆಂಗಾಚೊ ಸಮಂದ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:26
14 ತಿಳಿವುಗಳ ಹೋಲಿಕೆ  

ಸೊದೋಮ ಗೊಮೋರ ಪಟ್ಟಣಗಳವರೂ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಸ್ವಭಾವವಿರುದ್ಧವಾದ ಭೋಗವನ್ನನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ [ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ] ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.


ಆದಕಾರಣ ಅವರು ಮನಸ್ಸಿನ ದುರಾಶೆಗಳಂತೆ ನಡೆದು ತಮ್ಮ ದೇಹಗಳನ್ನು ಮಾನಹೀನಮಾಡಿಕೊಳ್ಳಲಿ ಎಂದು ದೇವರು ಅವರನ್ನು ಹೊಲಸಾದ ನಡತೆಗೆ ಒಪ್ಪಿಸಿದನು.


ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ, ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾವಿುಗಳು


ಅವರು ತಮ್ಮ ದುಃಸ್ಥಿತಿಗಾಗಿ ಸ್ವಲ್ಪವೂ ಚಿಂತಿಸದೆ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡಿಸುವವರಾಗಿದ್ದಾರೆ.


ಈ ರಾತ್ರಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ತೆಗೆದುಕೊಂಡು ಬಾ; ಅವರೊಡನೆ ನಮಗೆ ಸಂಗಮವಾಗಬೇಕೆಂದು ಕೂಗಿ ಹೇಳಿದರು.


ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ನೀಚಜನರು ಬಂದು ಆ ಮನೆಯನ್ನು ಸುತ್ತಿಕೊಂಡು ಕದಗಳನ್ನು ಬಡಿದು ಮನೆಯ ಯಜಮಾನನಾದ ಮುದುಕನಿಗೆ - ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ತೆಗೆದುಕೊಂಡು ಬಾ; ಅವನೊಡನೆ ನಮಗೆ ಸಂಗಮವಾಗಬೇಕು ಎಂದು ಕೂಗಿದರು.


ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಮಾತಾಡುವದಾದರೂ ನಾಚಿಕೆಗೆ ಕಾರಣವಾಗಿದೆ.


ಇದಲ್ಲದೆ ದೇವರ ಜ್ಞಾನವು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅನಿಷ್ಟಭಾವಕ್ಕೆ ಒಪ್ಪಿಸಿದನು.


ಆದರೆ ಈ ಜನರು ತಮಗೆ ಗೊತ್ತಿಲ್ಲದ ಎಲ್ಲವನ್ನೂ ದೂಷಿಸುತ್ತಾರೆ, ಮತ್ತು ತಾವು ವಿವೇಕಶೂನ್ಯಪಶುಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.


ಆದದರಿಂದ - ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಸಡಿಲ ಬಿಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು