Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:4 - ಕನ್ನಡ ಸತ್ಯವೇದವು J.V. (BSI)

4 ಪವಿತ್ರವಾದ ಆತ್ಮವುಳ್ಳವನಾಗಿದ್ದು ಸತ್ತಮೇಲೆ ಜೀವಿತನಾಗಿ ಎದ್ದು ಬಂದ ಮಹತ್ಕಾರ್ಯದಿಂದ ದೇವಕುಮಾರನೆಂದು ನಿರ್ಣಯಿಸಲ್ಪಟ್ಟವನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೇವರು ಮುಂಚಿತವಾಗಿ ಪವಿತ್ರ ಗ್ರಂಥಗಳಲ್ಲಿ ತನ್ನ ಪ್ರವಾದಿಗಳ ಮೂಲಕ ತಿಳಿಸಲ್ಪಟ್ಟ ವಾಗ್ದಾನ ಮಾಡಿದ ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ಕುರಿತಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಸತ್ತವರೊಳಗಿಂದ ಪುನರುತ್ಥಾನಗೊಂಡು ಪರಿಶುದ್ಧತೆಯ ಆತ್ಮದ ಪ್ರಕಾರ ದೇವಪುತ್ರರೆಂದು ಪ್ರಬಲವಾಗಿ ನಿರ್ಣಯಿಸಲಾದವರೂ ಆಗಿದ್ದಾರೆ. ಇವರೇ ನಮ್ಮ ಕರ್ತ ಯೇಸು ಕ್ರಿಸ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೆಚ್ಯಾ ದೈವಿಕ್ ಪವಿತ್ರ್ ಪಾನಾನ್, ತೊ ಮರಲ್ಲ್ಯಾತ್ನಾ ಝಿತ್ತೊ ಹೊವ್ನ್ ಉಟಲ್ಲ್ಯಾ ವೈನಾ ತೊ ದೆವಾಚೊ ಲೆಕ್ ಮನುನ್ ಮೊಟ್ಯಾ ರಿತಿನ್ ದಾಕ್ವುನ್ ದಿವ್ನ್ ಹೊಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:4
20 ತಿಳಿವುಗಳ ಹೋಲಿಕೆ  

ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವಕರ್ಮಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವವರಾಗುವಂತೆ ನಮ್ಮ ಮನಸ್ಸನ್ನು ಶುದ್ಧೀಕರಿಸುವದಲ್ಲವೇ.


ಆತನು ಬಲಹೀನಾವಸ್ಥೆಯಲ್ಲಿದ್ದದರಿಂದ ಶಿಲುಬೆಗೆ ಹಾಕಲ್ಪಟ್ಟನು ನಿಜ; ಆದರೂ ದೇವರ ಬಲದಿಂದ ಬದುಕುತ್ತಾನೆ. ನಾವು ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ; ಆದರೂ ಆತನೊಂದಿಗೆ ದೇವರ ಬಲದಿಂದ ಬದುಕುವವರಾಗಿದ್ದೇವೆ; ಇದು ನಿಮಗೆ ತೋರಿಬರುವದು.


ಯಾಕಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ; ಮನುಷ್ಯರು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತಾಡಿದರು.


ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬದನ್ನು ಅವರು ಪರಿಶೋಧನೆ ಮಾಡಿದರು.


ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದದ್ದು. ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ,


ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.


ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.


ಆತನನ್ನು ದೇವರು ಮರಣವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಯಾಕಂದರೆ ಮರಣವು ಆತನನ್ನು ಹಿಡುಕೊಂಡಿರುವದು ಅಸಾಧ್ಯವಾಗಿತ್ತು.


ಆಗ ನಾನು ಅವನಿಗೆ ನಮಸ್ಕಾರಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು - ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೇ ನಮಸ್ಕಾರಮಾಡು ಅಂದನು. ಯೇಸುವಿನ ವಿಷಯವಾದ ಸಾಕ್ಷಿಯು ಪ್ರವಾದನೆಯ ಆತ್ಮವೇ.


ಸತ್ತವನಾದೆನು, ಮತ್ತು ಇಗೋ ಯುಗಯುಗಾಂತರಗಳಲ್ಲಿಯೂ ಬದುಕುವವನಾಗಿದ್ದೇನೆ; ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಅವೆ.


ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸವನ್ನು ಗೊತ್ತುಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.


ಆಗ ಆ ಶೋಧಕನು ಆತನ ಬಳಿಗೆ ಬಂದು - ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಎಂದು ಹೇಳಲು ಆತನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು