ರೋಮಾಪುರದವರಿಗೆ 1:8 - ಕನ್ನಡ ಸತ್ಯವೇದವು J.V. (BSI)8 ಮೊದಲನೇದು, ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಮಾಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮೊದಲು ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಮಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮೊಟ್ಟಮೊದಲನೆಯದಾಗಿ, ನಿಮ್ಮೆಲ್ಲರ ಪರವಾಗಿ ಯೇಸುಕ್ರಿಸ್ತರ ಮುಖಾಂತರ ನಾನು ನನ್ನ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಏಕೆಂದರೆ, ನಿಮ್ಮ ವಿಶ್ವಾಸ ಹಾಗು ವಿಧೇಯತೆ ಇಡೀ ಜಗತ್ತಿನಲ್ಲಿ ಪ್ರಖ್ಯಾತವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಮೊದಲನೆಯದಾಗಿ, ನಾನು ನಿಮ್ಮೆಲ್ಲರ ವಿಷಯದಲ್ಲಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. ಏಕೆಂದರೆ ನಿಮ್ಮ ನಂಬಿಕೆಯು ಲೋಕದಲೆಲ್ಲಾ ಪ್ರಖ್ಯಾತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಮೊದಲನೆಯದಾಗಿ, ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಕ್ರಿಸ್ತ ಯೇಸುವಿನ ಮೂಲಕ ನನ್ನ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಪಯ್ಲೆ ಮಿಯಾ ಕ್ರಿಸ್ತಾ ವೈನಾ ತುಮ್ಚ್ಯಾಸಾಟ್ನಿ ಮಾಜ್ಯಾ ದೆವಾಕ್ ಧನ್ಯವಾದ್ ದಿತಾ, ಕಶ್ಯಾಕ್ ಮಟ್ಲ್ಯಾರ್ ಸಗ್ಳೊ ಜಗುಚ್ ತುಮ್ಚ್ಯಾ ವಿಶ್ವಾಸಾಚ್ಯಾ ವಿಶಯಾತ್ ಆಯ್ಕುಕ್ ಲಾಗ್ಲಾ. ಅಧ್ಯಾಯವನ್ನು ನೋಡಿ |
ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆಯ ವಿಷಯವಾಗಿಯೂ ದೇವಜನರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿಯೂ ನಾವು ಕೇಳಿ ಪರಲೋಕದಲ್ಲಿ ನಿಮಗೋಸ್ಕರ ಸಿದ್ಧವಾಗಿರುವ ಮಹಾಪದವಿಯನ್ನು ನೆನಸುತ್ತಾ ನಾವು ಪ್ರಾರ್ಥನೆಮಾಡುವಾಗೆಲ್ಲಾ ನಿಮ್ಮ ನಿವಿುತ್ತವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾಗಿರುವ ದೇವರಿಗೆ ಸ್ತೋತ್ರಮಾಡುತ್ತೇವೆ. ನೀವು ಆ ಪದವಿಯನ್ನು ಕುರಿತು ನಿಮ್ಮ ಬಳಿಗೆ ಬಂದಿರುವ ಸುವಾರ್ತೆಯ ಸತ್ಯವಾಕ್ಯದಿಂದ ಮೊದಲೇ ಕೇಳಿದಿರಿ.
ನಾವು ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆಯನ್ನೂ ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಂಡು ನಮ್ಮ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆಮಾಡುವಾಗ ನಿಮ್ಮೆಲ್ಲರ ವಿಷಯದಲ್ಲಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.