Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:10 - ಕನ್ನಡ ಸತ್ಯವೇದವು J.V. (BSI)

10 ಹೃದಯದಿಂದ ನಂಬುವದರ ಮೂಲಕ ನೀತಿಯು ದೊರಕುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹೃದಯದಿಂದ ನಂಬುವುದರ ಮೂಲಕ ನೀತಿಯು ದೊರಕುತ್ತದೆ. ಬಾಯಿಂದ ಅರಿಕೆಮಾಡುವುದರ ಮೂಲಕ ರಕ್ಷಣೆಯಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೌದು, ಹೃದಯಪೂರ್ವಕವಾಗಿ ವಿಶ್ವಾಸಿಸುವವನು ದೇವರೊಡನೆ ಸತ್ಸಂಬಂಧವನ್ನು ಪಡೆಯುತ್ತಾನೆ; ಬಾಯಿಂದ ನಿವೇದಿಸುವವನು ಜೀವೋದ್ಧಾರ ಹೊಂದುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಹೌದು, ನಾವು ನಮ್ಮ ಹೃದಯಗಳಲ್ಲಿ ನಂಬುವುದರ ಮೂಲಕ ನೀತಿವಂತರಾಗುತ್ತೇವೆ. “ನಂಬುತ್ತೇವೆ” ಎಂದು ಬಾಯಾರೆ ಹೇಳುವುದರ ಮೂಲಕ ರಕ್ಷಣೆ ಹೊಂದುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀನು ನಿನ್ನ ಹೃದಯದಿಂದ ನಂಬಿ ನೀತಿವಂತನೆಂದು ಎಣಿಸಿಕೊಳ್ಳುವಿ ಮತ್ತು ನಿನ್ನ ಬಾಯಿಂದ ನಿನ್ನ ವಿಶ್ವಾಸವನ್ನು ಅರಿಕೆ ಮಾಡಿದಾಗ ರಕ್ಷಣೆ ಹೊಂದುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಕಶ್ಯಾಕ್ ಮಟ್ಲ್ಯಾರ್ ಅಮ್ಚ್ಯಾ ವಿಶ್ವಾಸಾಚ್ಯಾ ವೈನಾಚ್ ಅಮಿ ದೆವಾಚ್ಯಾ ವಾಂಗ್ಡಾ ಖರ್ಯಾ ವಾಟೆನ್ ಚಲ್ತಲೆ ಮನುನ್ ಥವಲ್ಲೆ ಹಾಯ್, ಅಮಿ ಖರೆ ಹೊತ್ತೆ ವಳ್ಕುನ್ ಘೆಟಲ್ಲ್ಯಾನುಚ್ ಅಮ್ಕಾ ಬಚಾವ್ ಕರ್‍ಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:10
13 ತಿಳಿವುಗಳ ಹೋಲಿಕೆ  

ಯೇಸು ದೇವರ ಮಗನಾಗಿದ್ದಾನೆಂದು ಯಾವನು ಒಪ್ಪಿಕೊಂಡು ಹೇಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.


ಅದೇನಂದರೆ ನೀನು ಯೇಸುವನ್ನೇ ಕರ್ತನೆಂದು ಬಾಯಿಂದ ಅರಿಕೆಮಾಡಿಕೊಂಡು ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನೆಂದು ಹೃದಯದಿಂದ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ.


ಆದರೂ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದರಿಂದ ನಾವು ಸಹ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿಸಲ್ಪಡುವದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು; ಯಾಕಂದರೆ ಯಾವನಾದರೂ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲ.


ಆದಕಾರಣ ನೀನಪರಾಧಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ತಿಳಿನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಬಳಿಗೆ ಬರೋಣ.


ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ಒಳ್ಳೆಯ ಹೃದಯದಲ್ಲಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ; ಇವರೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವವರು.


ಸಹೋದರರೇ, ನೋಡಿಕೊಳ್ಳಿರಿ, ಜೀವಸ್ವರೂಪನಾದ ದೇವರನ್ನು ಬಿಟ್ಟುಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.


ಇದರಲ್ಲಿ ನನ್ನ ಉದ್ದೇಶವೇನಂದರೆ - ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ನೇಮನಿಷ್ಠೆಗಳ ಫಲವಾಗಿರುವ ಸ್ವನೀತಿಯನ್ನಾಶ್ರಯಿಸದೆ ಕ್ರಿಸ್ತನನ್ನು ನಂಬುವದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿ ಕಾಣಿಸಿಕೊಳ್ಳಬೇಕೆಂಬದೇ.


ಹದವಾದ ಇಬ್ಬಾಯಿಕತ್ತಿಯನ್ನು ಹಿಡಿದಾತನು ಹೇಳುವದೇನಂದರೆ - ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು; ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ; ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನೂ ಸಾಕ್ಷಿಯೂ ಆದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿಯಾದರೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಮರೆಮಾಡಲಿಲ್ಲ.


ಯೇಸು ಅವನಿಗೆ - ನಿನ್ನ ಕೈಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ? ನಂಬುವವನಿಗೆ ಎಲ್ಲಾ ಆಗುವದು ಎಂದು ಹೇಳಿದನು.


ಆತನ ಮೇಲೆ ನಂಬಿಕೆಯಿಡುವ ಯಾವನಾದರೂ ಆಶಾಭಂಗಪಡುವದಿಲ್ಲವೆಂದು ಶಾಸ್ತ್ರವು ಹೇಳುತ್ತದೆಯಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು