ರೋಮಾಪುರದವರಿಗೆ 10:18 - ಕನ್ನಡ ಸತ್ಯವೇದವು J.V. (BSI)18 ಆದರೂ ಅವರ ಕಿವಿಗೆ ಬೀಳಲಿಲ್ಲವೇನು ಎಂದು ಕೇಳುತ್ತೇನೆ. ಬಿದ್ದದ್ದು ನಿಶ್ಚಯ. ಸಾರುವವರ ಧ್ವನಿಯು ಭೂವಿುಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. “ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಈಗ ನನ್ನದೊಂದು ಪ್ರಶ್ನೆ: “ಇಸ್ರಯೇಲರಿಗೆ ಶುಭಸಂದೇಶವನ್ನು ಕೇಳುವ ಸಂದರ್ಭ ಇರಲಿಲ್ಲವೆ?” ನಿಶ್ಚಯವಾಗಿ ಇತ್ತು. ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಸಾರುವವರ ಧ್ವನಿ ಜಗದಲ್ಲೆಲ್ಲಾ ಹರಡಿತು. ಅವರ ನುಡಿ ಭೂಮಿಯ ತುತ್ತತುದಿಯನ್ನು ಮುಟ್ಟಿತು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದರೆ, “ಜನರು ಸುವಾರ್ತೆಯನ್ನು ಕೇಳಲಿಲ್ಲವೇ?” ಎಂದು ನಾನು ಪ್ರಶ್ನಿಸುತ್ತೇನೆ. ಹೌದು, ಅವರು ಕೇಳಿದರು ಪವಿತ್ರ ಗ್ರಂಥ ಹೇಳುವಂತೆ: “ಅವರ ಸ್ವರಗಳು ಲೋಕದಲ್ಲೆಲ್ಲಾ ಪ್ರಸಾರಗೊಂಡವು. ಅವರ ಮಾತುಗಳು ಪ್ರಪಂಚದ ಎಲ್ಲಾ ಕಡೆಗಳಿಗೂ ಹೋದವು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದರೆ ಇಸ್ರಾಯೇಲರು ಎಂದೂ ಸುವಾರ್ತೆಯನ್ನು ಕೇಳಲಿಲ್ಲವೋ ಎಂದು ನಾನು ಪ್ರಶ್ನಿಸುತ್ತೇನೆ? ಅವರು ನಿಶ್ಚಯವಾಗಿ ಕೇಳಿದ್ದಾರೆ. ಪವಿತ್ರ ವೇದದಲ್ಲಿ ಹೇಳಿರುವಂತೆ: “ಅವರ ಸ್ವರವು ಭೂಮಿಯ ಎಲ್ಲಾ ಕಡೆಗಳಲ್ಲಿ ಹೋಗಿರುತ್ತದೆ, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿವೆ.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಖರೆ ಮಿಯಾ ಇಚಾರ್ತಾ: ತೆನಿ ಬಾತ್ಮಿ ಆಯ್ಕಿನಸಲ್ಲೆ ಖರೆ ಹಾಯ್? ಹೊಯ್ ತೆನಿ ಖರೆ ಹೊತ್ತೆ ಕರ್‍ಲ್ಯಾನಿ. ಕಶ್ಯಾಕ್ ಮಟ್ಲ್ಯಾರ್ ಪವಿತ್ರ್ ಪುಸ್ತಕ್ ಮನ್ತಾ, ತೆಂಚ್ಯಾ ಧನಾಚೊ ಅವಾಜ್ ಸಗ್ಳ್ಯಾ ಜಗಾವರ್ತಿ ಜಾವ್ನ್ ಪಾವ್ಲೊ: ತೆಂಚ್ಯಾ ಗೊಸ್ಟಿಯಾ ಜಿಮ್ನಿಚ್ಯಾ ಆಕ್ರಿ ಪತರ್ ಜಾವ್ನ್ ಪಾವ್ಲ್ಯಾತ್: ಅಧ್ಯಾಯವನ್ನು ನೋಡಿ |