ರೋಮಾಪುರದವರಿಗೆ 11:12 - ಕನ್ನಡ ಸತ್ಯವೇದವು J.V. (BSI)12 ಅವರು ಬಿದ್ದುಹೋದದ್ದು ಸರ್ವಲೋಕದ ಭಾಗ್ಯಕ್ಕೂ ಅವರು ಸೋತು ಹೋದದ್ದು ಅನ್ಯಜನಗಳ ಭಾಗ್ಯಕ್ಕೂ ಮಾರ್ಗವಾಗಿರಲಾಗಿ ಅವರ ಪೂರ್ಣ ಪುನಃಸ್ಥಾಪನೆಯು ಎಷ್ಟೋ ಹೆಚ್ಚಾಗಿ ಭಾಗ್ಯಕ್ಕೆ ಕಾರಣವಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವರು ಬಿದ್ದುಹೋದದ್ದು ಸರ್ವಲೋಕದ ಸೌಭಾಗ್ಯಕ್ಕೂ, ಅವರು ಸೋತುಹೋದದ್ದು ಅನ್ಯಜನಗಳ ಸಂಪತ್ತಿಗೂ ಮಾರ್ಗವಾಗಿರಲಾಗಿ ಅವರ ಪೂರ್ಣ ಪುನಃಸ್ಥಾಪನೆಯು ಪ್ರಪಂಚಕ್ಕೆ ಎಷ್ಟೋ ಹೆಚ್ಚಾದ ಭಾಗ್ಯಕ್ಕೆ ಕಾರಣವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅವರ ಅಪರಾಧ ಜಗತ್ತಿಗೆಲ್ಲ ಸೌಭಾಗ್ಯವನ್ನೂ ಅವರ ಅಪಜಯವು ಇತರರಿಗೆಲ್ಲಾ ಆಶೀರ್ವಾದವನ್ನೂ ತರಲು ಕಾರಣವಾದರೆ, ಅವರ ಸಂಪೂರ್ಣ ಪರಿವರ್ತನೆ ಮತ್ತೆಷ್ಟೋ ಕಲ್ಯಾಣವನ್ನು ಉಂಟುಮಾಡಬೇಕಲ್ಲವೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೂದ್ಯರ ಅಪರಾಧವು ಜಗತ್ತಿಗೆ ಅಧಿಕವಾದ ಆಶೀರ್ವಾದಗಳನ್ನೂ ಅವರ ಅಪಜಯವು ಯೆಹೂದ್ಯರಲ್ಲದ ಜನರಿಗೆ ಅಧಿಕವಾದ ಆಶೀರ್ವಾದಗಳನ್ನೂ ತರಲು ಕಾರಣವಾದರೆ, ದೇವರ ಇಚ್ಛೆಗನುಸಾರವಾಗಿ ಯೆಹೂದ್ಯರೆಲ್ಲರು ಪರಿವರ್ತನೆ ಹೊಂದಿದಾಗ ಜಗತ್ತು ಮತ್ತಷ್ಟು ಅಗಾಧವಾದ ಆಶೀರ್ವಾದಗಳನ್ನು ಹೊಂದುವುದು ನಿಶ್ಚಯವಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದರೆ ಅವರ ಅಪರಾಧವು ಜಗತ್ತಿಗೆ ಐಶ್ವರ್ಯವನ್ನು ಉಂಟುಮಾಡಿತು. ಅವರ ನಷ್ಟವೇ ಯೆಹೂದ್ಯರಲ್ಲದವರಿಗೆ ಐಶ್ವರ್ಯವನ್ನು ಉಂಟುಮಾಡುವುದಾದರೆ, ಅವರ ಪರಿಪೂರ್ಣತೆಯು ಇನ್ನೂ ಎಷ್ಟೋ ಹೆಚ್ಚಾದ ಐಶ್ವರ್ಯವನ್ನು ಉಂಟುಮಾಡಬಹುದಲ್ಲವೇ! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಜುದೆವ್ ಲೊಕಾಂಚ್ಯಾ ಪಾಪಾನ್ ಜಗಾ ವರ್ತಿ ಮೊಟಿ ಆರ್ಶಿವಾದಾ ಘೆವ್ನ್ ಯೆಲ್ಯಾನ್, ಅನಿ ತೆಂಚ್ಯಾ ಆತ್ಮಿಕ್ ಗರಿಬ್ಕಿನ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ವರ್‍ತಿ ಮೊಟೊ ಆಶಿರ್ವಾದ್ ಹಾನ್ಲಿನ್. ತಸೆಜಾಲ್ಯಾರ್ ಸಗ್ಳ್ಯಾ ಜುದೆವ್ ಲೊಕಾಕ್ನಿ ಧರ್ಲ್ಯಾರ್ ತಿ ಆಶಿರ್ವಾದಾ ಕವ್ಡಿ ಮೊಟಿ ರ್‍ಹಾತಿಲ್! ಅಧ್ಯಾಯವನ್ನು ನೋಡಿ |