Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:14 - ಕನ್ನಡ ಸತ್ಯವೇದವು J.V. (BSI)

14 ಹೀಗೆ ಒಂದು ವೇಳೆ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಸಹ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದರಿಂದಾಗಿ ಸ್ವಜನರಲ್ಲಿ ಅಸೂಯೆಯನ್ನು ಕೆರಳಿಸಿ ಅವರಲ್ಲಿ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದರೂ ಈ ಸೇವೆಯ ಮೂಲಕ ನನ್ನ ಸ್ವಜನರಲ್ಲಿ ಪ್ರೇಮಾಸೂಯೆಯನ್ನು ಮೂಡಿಸಿ ಅವರಲ್ಲಿ ಬಹುಶಃ ಕೆಲವರನ್ನಾದರೂ ಉದ್ಧಾರದ ಮಾರ್ಗಕ್ಕೆ ತರಲು ಸಾಧ್ಯವಾದೀತೆಂದು ನಂಬುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ನನ್ನ ಸ್ವಂತ ಜನರಲ್ಲಿ (ಯೆಹೂದ್ಯರಲ್ಲಿ) ಅಸೂಯೆಯನ್ನು ಉಂಟುಮಾಡಿ ಅವರಲ್ಲಿ ಕೆಲವರಾದರೂ ರಕ್ಷಣೆ ಹೊಂದುವಂತೆ ಮಾಡಬಲ್ಲೆನೆಂಬ ನಿರೀಕ್ಷೆ ನನಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹೇಗೂ ನಾನು ನನ್ನ ಸ್ವಂತ ಜನರಾದ ಯೆಹೂದ್ಯರಲ್ಲಿ ಮತ್ಸರವನ್ನು ಉದ್ರೇಕಿಸಿ ಅವರಲ್ಲಿ ಕೆಲವರನ್ನಾದರೂ ರಕ್ಷಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಹೆಚ್ಯಾ ವೈನಾ ಮಿಯಾ ಮಾಜ್ಯಾ ಸ್ವತಾಚ್ಯಾ ಕುಳಿಚ್ಯಾ ಲೊಕಾಂಚ್ಯಾ ಪೊಟಾತ್ನಿ ಝಳ್ ಪಡಿಸರ್ಕೆ ಕರ್‍ತಾ, ಅನಿ ಅಶೆ ತೆಂಚ್ಯಾತ್ಲ್ಯಾ ಉಲ್ಲ್ಯಾಕ್ನಿ ಹುರ್‍ವುನ್ ಘೆವ್ಕ್ ಮಾಜ್ಯಾನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:14
19 ತಿಳಿವುಗಳ ಹೋಲಿಕೆ  

ಎಲೌ ಸ್ತ್ರೀಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಎಲೈ ಪುರುಷನೇ, ನಿನ್ನ ಹೆಂಡತಿಯನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು?


ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು; ಹೀಗಿರುವದರಿಂದ ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.


ನಾವು ಮಾಡಿದ ಪುಣ್ಯಕ್ರಿಯೆಗಳ ನಿವಿುತ್ತದಿಂದಲ್ಲ ಆತನ ಕರುಣೆಯಲ್ಲಿಯೇ ಪುನರ್ಜನ್ಮವನ್ನು ಸೂಚಿಸುವ ಸ್ನಾನದ ಮೂಲಕವಾಗಿಯೂ ಪವಿತ್ರಾತ್ಮನು ನಮ್ಮಲ್ಲಿ ನೂತನಸ್ವಭಾವವನ್ನು ಉಂಟುಮಾಡುವದರ ಮೂಲಕವಾಗಿಯೂ ಆತನು ನಮ್ಮನ್ನು ರಕ್ಷಿಸಿದನು.


ಆದಕಾರಣ ದೇವರಾರಿಸಿಕೊಂಡವರು ನನ್ನ ಕೂಡ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.


ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬದು ಆತನ ಚಿತ್ತವಾಗಿದೆ.


ಹೇಗಂದರೆ ಲೋಕವು ಜ್ಞಾನವೆನಿಸುವ ಮಾರ್ಗದಿಂದ ದೇವರನ್ನು ತಿಳುಕೊಳ್ಳದೆ ಹೋದದ್ದು ದೇವರ ಜ್ಞಾನದ ಸಂಕಲ್ಪವೆ; ಹೀಗಾದ ಮೇಲೆ ಹುಚ್ಚು ಮಾತು ಎಣಿಸಿಕೊಂಡಿರುವ ನಮ್ಮ ಪ್ರಸಂಗದಿಂದಲೇ ನಂಬುವವರನ್ನು ರಕ್ಷಿಸುವದು ದೇವರಿಗೆ ಒಳ್ಳೇದೆಂದು ತೋಚಿತು.


ಹಾಗಾದರೆ ಅವರು ಬಿದ್ದೇ ಹೋಗುವಂತೆ ಎಡವಿದರೇನು ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಹುರುಡು ಹುಟ್ಟಿಸುತ್ತಾನೆ.


ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದವನು ಅವನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಿರಿ.


ಶರೀರಸಂಬಂಧವಾಗಿ ಸ್ವಜನರಾಗಿರುವ ನನ್ನ ಸಹೋದರರಿಗೋಸ್ಕರ ನಾನೇ ಸಾಧ್ಯವಾದರೆ ಕ್ರಿಸ್ತನನ್ನು ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.


ಅವನು ನನಗೆ ಪ್ರಾಣದಂತಿದ್ದರೂ ಅವನನ್ನು ನಿನ್ನ ಬಳಿಗೆ ಹಿಂದಕ್ಕೆ ಕಳುಹಿಸಿಕೊಟ್ಟಿದ್ದೇನೆ.


ಲಾಬಾನನು ಅವನಿಗೆ - ನಿಜವಾಗಿ ನೀನು ನನ್ನ ರಕ್ತ ಸಂಬಂಧಿಯಾಗಿದ್ದೀ ಎಂದು ಹೇಳಿದನು. ಅವನು ಒಂದು ತಿಂಗಳಿನವರೆಗೂ ಲಾಬಾನನ ಬಳಿಯಲ್ಲಿ ವಾಸಮಾಡಿದನು.


ನೀವು ನನ್ನ ರಕ್ತಸಂಬಂಧಿಗಳಾದ ಸಹೋದರರಾಗಿರುತ್ತೀರಲ್ಲಾ; ಆದದರಿಂದ ನನ್ನನ್ನು ಕರಕೊಂಡು ಹೋಗುವದರಲ್ಲಿ ನೀವು ಹಿಂದುಳಿದಿರುವದು ಒಳ್ಳೇದಲ್ಲ ಎಂಬದಾಗಿಯೂ


ಆದರೆ ಇಸ್ರಾಯೇಲ್ಯರು ಆ ವಾರ್ತೆಯನ್ನು ತಿಳುಕೊಳ್ಳಲಿಲ್ಲವೇನು ಎಂದು ಕೇಳುತ್ತೇನೆ. ಈ ವಿಷಯದಲ್ಲಿ - ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಹುರುಡುಹುಟ್ಟಿಸುವೆನು; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು ಎಂದು ಮೊದಲು ಮೋಶೆಯು ಹೇಳುತ್ತಾನೆ.


ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೆ ಮನುಷ್ಯರೆಲ್ಲರೂ ರಕ್ಷಣೆಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ ಎಲ್ಲರನ್ನೂ ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.


ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.


ಆತನು ನಮ್ಮಲ್ಲಿ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವದಕ್ಕೆ ಕರೆದನು.


ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಡುವ ಊಳಿಗದ ಆತ್ಮಗಳಲ್ಲವೋ?


ಈ ಅತ್ಯಂತ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು; ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು