Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:15 - ಕನ್ನಡ ಸತ್ಯವೇದವು J.V. (BSI)

15 ಯಾಕಂದರೆ ಇಸ್ರಾಯೇಲ್ಯರನ್ನು ತಳ್ಳುವದರಿಂದ ಲೋಕವು ದೇವರ ಸಂಗಡ ಸಮಾಧಾನವಾಗುವದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದುಬಂದಂತಾಗುವದಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯಾಕೆಂದರೆ ಇಸ್ರಾಯೇಲ್ಯರನ್ನು ನಿರಾಕರಿಸುವುದರಿಂದ ಲೋಕವು ದೇವರ ಸಂಗಡ ಸಂಧಾನವಾಗುವುದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವುದರಿಂದ ಏನಾಗುವುದು? ಸತ್ತವರು ಜೀವಿತರಾಗಿ ಎದ್ದುಬಂದತಾಗುವುದಿಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇಸ್ರಯೇಲರು ತಿರಸ್ಕೃತರಾದ್ದರಿಂದ ಜಗತ್ತು ದೇವರೊಡನೆ ಸಂಧಾನವಾಗಲು ಸಾಧ್ಯವಾಯಿತಾದರೆ ಅವರು ಸ್ವೀಕೃತರಾಗುವಾಗ ಇನ್ನೇನು ತಾನೆ ಸಂಭವಿಸದು! ಸತ್ತವರು ಜೀವಕ್ಕೆ ಎದ್ದುಬಂದಂತಾಗುವುದಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇಸ್ರೇಲರು ತಿರಸ್ಕೃತರಾದ್ದರಿಂದ ಜಗತ್ತು ದೇವರೊಡನೆ ಸಂಧಾನವಾಗಲು ಸಾಧ್ಯವಾಯಿತಾದರೆ ಅವರು ಸ್ವೀಕೃತರಾದಾಗ ಇನ್ನೇನು ತಾನೆ ಸಂಭವಿಸದು! ಸತ್ತವರು ಜೀವ ಪಡೆದುಕೊಂಡಂತಾಗುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಏಕೆಂದರೆ ಇಸ್ರಾಯೇಲರನ್ನು ತ್ಯಜಿಸುವುದರಿಂದ ಜಗತ್ತು ದೇವರೊಡನೆ ಸಂಧಾನವಾಗುವುದಾದರೆ, ಅವರನ್ನು ಸ್ವೀಕರಿಸುವುದು, ಸತ್ತವರು ಜೀವಿತರಾಗಿ ಎದ್ದು ಬಂದಂತಾಗಿರುವುದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಕಶ್ಯಾಕ್ ಮಟ್ಲ್ಯಾರ್, ಜುದೆವ್ ಲೊಕಾ ತಿರಸ್ಕಾರ್ ಕರುನ್ ಹೊಲ್ಲ್ಯಾ ತನ್ನಾ ಹುರಲ್ಲಿ ಸಗ್ಳಿ ಲೊಕಾ ದೆವಾಚಿ ದುಸ್ಮಾನಾ ಹೊತ್ತಿ ದೊಸ್ತಾ ಹೊವ್ನ್ ಬದಲ್ಲಿ, ಅಶೆ ರ್‍ಹಾತಾನಾ, ತೆಂಕಾ ಸ್ವಿಕಾರ್ ಕರುನ್ ಹೊಲ್ಲ್ಯಾ ತನ್ನಾ ಕಾಯ್ ಕಾಯ್ ಹೊತಾ ಅಸಿಲ್? ಹೆ ಮರಲ್ಲ್ಯಾಕ್ನಿ ಜಿವ್ ಗಾವಲ್ಲೆ ಸರ್ಕೆ ಹೊತಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:15
14 ತಿಳಿವುಗಳ ಹೋಲಿಕೆ  

ಆದರೆ ಉಲ್ಲಾಸಪಡುವದೂ ಸಂತೋಷಗೊಳ್ಳುವದೂ ನ್ಯಾಯವಾದದ್ದೇ; ಯಾಕಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿದನು.


ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿದನು. ಆಗ ಅವರು ಉಲ್ಲಾಸಪಡುವದಕ್ಕೆ ತೊಡಗಿದರು.


ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಹೊಗಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು.


ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ನಂಬಿಕೆಯಲ್ಲಿ ದೃಢವಿಲ್ಲದವರನ್ನೂ ಸೇರಿಸಿಕೊಳ್ಳಿರಿ. ಆದರೆ ಸಂದೇಹಾಸ್ಪದವಾದ ಕಾರ್ಯಗಳನ್ನು ಅವರ ಮುಂದೆ ಚರ್ಚಿಸಬೇಡಿರಿ.


ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವನನ್ನು ದೋಷಿಯೆಂದು ಎಣಿಸಬಾರದು. ದೇವರು ಇಬ್ಬರನ್ನೂ ಸೇರಿಸಿಕೊಂಡಿದ್ದಾನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು