ರೋಮಾಪುರದವರಿಗೆ 11:17 - ಕನ್ನಡ ಸತ್ಯವೇದವು J.V. (BSI)17 ಆದರೆ ಕೆಲವು ಕೊಂಬೆಗಳು ಮುರಿದುಹಾಕಲ್ಪಡಲು ಕಾಡೆಣ್ಣೇಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದರೆ ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡೆಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಅಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಈಗ ಉತ್ತಮ ತಳಿಯ ಓಲಿವ್ ಮರದಿಂದ ಕೆಲವು ರೆಂಬೆಗಳನ್ನು ಕಡಿದುಹಾಕಿ ಆ ತಾವಿನಲ್ಲಿ ಕಾಡು ಓಲಿವ್ ಮರದ ರೆಂಬೆಯನ್ನು ಕಸಿಮಾಡಲಾಗಿದೆ. ಅನ್ಯಜನಾದ ನೀನು ಆ ಕಾಡುಮರದ ರೆಂಬೆಯಂತಿರುವೆ; ಕಸಿಮಾಡಿರುವುದರಿಂದ ರಸವತ್ತಾದ ಆ ಬೇರಿನಿಂದ ಈಗ ಪೋಷಣೆ ಪಡೆಯುತ್ತಿರುವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಇದು, ಆಲಿವ್ ಮರದ ಕೆಲವು ಕೊಂಬೆಗಳು ಮುರಿಯಲ್ಪಟ್ಟಾಗ, ಕಾಡುಆಲಿವ್ ಮರದ ಕೊಂಬೆಯೊಂದು ಮೊದಲಿನ ಆಲಿವ್ ಮರಕ್ಕೆ ಸೇರಿಕೊಂಡಂತಿದೆ. ಯೆಹೂದ್ಯರಲ್ಲದ ನೀವು ಕಾಡುಕೊಂಬೆಗೆ ಸಮಾನವಾಗಿದ್ದೀರಿ. ಆದರೆ ಈಗ ನೀವು ಮೊದಲನೆ ಮರದ (ಯೆಹೂದ್ಯರ) ಶಕ್ತಿಯಲ್ಲಿಯೂ ಜೀವದಲ್ಲಿಯೂ ಪಾಲುಗಾರರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಕೆಲವು ಕೊಂಬೆಗಳು ಮುರಿದುಹೋಗಿರುವುದಾದರೆ, ಕಾಡು ಓಲಿವ್ ಮರದಂತಿರುವ ನೀನು ಅವುಗಳ ನಡುವೆ ಕಸಿಮಾಡಿ ಉತ್ತಮ ಓಲಿವ್ ಮರದ ರಸವತ್ತಾದ ಬೇರಿನಲ್ಲಿ ಪಾಲುಹೊಂದಿರಲಾಗಿ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಉಲ್ಲ್ಯಾ ಬರ್‍ಯಾ ಒಲಿವಾಚ್ಯಾ ಝಾಡಾಂಚ್ಯಾ ಟಾಳಿಯಾ ತೊಡುನ್ ಕಾಡುನ್ ಹೊತ್ಯಾತ್, ಅನಿ ಎಕ್ ಜಂಗ್ಲಿ ಒಲಿವ್ ಝಾಡಾಚಿ ಟಾಳಿ ತೆಕಾ ಲಾವುನ್ ಕಶಿ ಕರುನ್ ಹೊತಾ. ತುಮಿ ಜುದೆವ್ ನ್ಹಯ್ ಹೊತ್ತಿ ಲೊಕಾ ತ್ಯಾ ಕಶಿ ಕರಲ್ಲ್ಯಾ ಝಾಡಾಂಚ್ಯಾ ಸರ್ಕೆ, ಹಾಸಿ, ಅನಿ ತುಮಿ ಜುದೆವಾಂಚ್ಯಾ ಘಟ್ಮುಟ್ ಆತ್ಮಿಕ್ ರಿತಿಚ್ಯಾ ಜಿವನಾಚೊ ವಾಟೊ ಘೆವ್ನ್ ಹಾಸಿ. ಅಧ್ಯಾಯವನ್ನು ನೋಡಿ |