Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:31 - ಕನ್ನಡ ಸತ್ಯವೇದವು J.V. (BSI)

31 ಅದೇ ಪ್ರಕಾರವಾಗಿ ಅವರು ಈಗ ಅವಿಧೇಯರಾಗಿದ್ದರೂ ನಿಮಗೆ ದೊರಕಿದ ಕರುಣೆಯನ್ನು ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅದೇ ಪ್ರಕಾರವಾಗಿ ಇಸ್ರಾಯೇಲ್ಯರೂ ಈಗ ಅವಿಧೇಯರಾಗಿದ್ದರೂ ನಿಮಗೆ ದೊರಕಿದ ಕರುಣೆಯನ್ನು ಅವರು ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅದೇ ಪ್ರಕಾರ ಅವರು ಈಗ ಅವಿಧೇಯರಾಗಿದ್ದರೂ ನೀವು ಹೊಂದಿದ ಕರುಣೆಯ ನಿಮಿತ್ತ ಅವರೂ ಕರುಣೆಯನ್ನು ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ದೇವರು ನಿಮಗೆ ಕರುಣೆ ತೋರಿದ್ದರಿಂದ ಈಗ ಯೆಹೂದ್ಯರು ವಿಧೇಯರಾಗುವುದಿಲ್ಲ. ಆದರೆ ಅವರು ಸಹ ದೇವರಿಂದ ಕರುಣೆಯನ್ನು ಹೊಂದಿಕೊಳ್ಳಲೆಂದು ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅದೇ ಪ್ರಕಾರವಾಗಿ ಇಸ್ರಾಯೇಲರು ಈಗ ಅವಿಧೇಯರಾಗಿದ್ದರೂ ನಿಮಗೆ ಕರುಣೆ ದೊರಕಿದಂತೆ, ಅವರಿಗೂ ಈಗ ಕರುಣೆ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತಸೆಚ್ ತೆಕಾಬಿ ಎಕ್ ದಿಸಿ ದಯಾ ಗಾವುಸಾಟ್ನಿ ಮನುನ್ ಹ್ಯಾ ತುಮ್ಚ್ಯಾ ದೆವಾಕ್ ಖಾಲ್ತಿ ಚಲ್ತಲ್ಯಾ ಕಾಲಾತ್ ತೆನಿ ದೆವಾಕ್ ಖಾಲ್ತಿ ಹೊಯ್‍ನಸ್ತಾನಾ ಚಲುಲಾಲ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:31
5 ತಿಳಿವುಗಳ ಹೋಲಿಕೆ  

ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬದಾಗಿ ಎಣಿಸಿಕೊಳ್ಳದಂತೆ ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ; ಅದೇನಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವದು;


ಯಾಕಂದರೆ ಇಸ್ರಾಯೇಲ್ಯರನ್ನು ತಳ್ಳುವದರಿಂದ ಲೋಕವು ದೇವರ ಸಂಗಡ ಸಮಾಧಾನವಾಗುವದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದುಬಂದಂತಾಗುವದಲ್ಲವೇ.


ಈ ವಿಷಯದಲ್ಲಿ ಯೆಶಾಯನು - ಕರ್ತನೇ, ನಾವು ಸಾರಿದ ವಾರ್ತೆಯನ್ನು ಯಾರು ನಂಬಿದರು ಎಂದು ನುಡಿಯುತ್ತಾನೆ.


ಯಾವ ಪ್ರಕಾರ ನೀವು ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆಹೊಂದಿದ್ದೀರೋ


ಯಾಕಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಃಸ್ಥಿತಿಯಲ್ಲಿ ಕಟ್ಟಿಹಾಕಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು