Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:4 - ಕನ್ನಡ ಸತ್ಯವೇದವು J.V. (BSI)

4 ಎಂದು ಇಸ್ರಾಯೇಲ್ಯರ ಮೇಲೆ ದೂರು ಹೇಳಿದ್ದಕ್ಕೆ ದೇವರ ಉತ್ತರವೇನಂದರೆ - ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೇವರ ಉತ್ತರವೇನೆಂದರೆ, “ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದಕ್ಕೆ ಆತನಿಗೆ ದೊರೆತ ಉತ್ತರವಾದರೂ ಏನು? “ಬಾಳ್‍ದೇವತೆಯ ವಿಗ್ರಹಕ್ಕೆ ಅಡ್ಡಬೀಳದ ಏಳುಸಾವಿರ ಜನರನ್ನು ನನಗಾಗಿ ಉಳಿಸಿಕೊಂಡಿದ್ದೇನೆ,” ಎಂದಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ದೇವರು ಎಲೀಯನಿಗೆ ಕೊಟ್ಟ ಉತ್ತರವೇನು? ದೇವರು ಎಲೀಯನಿಗೆ, “ಇನ್ನೂ ನನ್ನನ್ನು ಆರಾಧಿಸುತ್ತಿರುವ ಏಳು ಸಾವಿರ ಮಂದಿಯನ್ನು ನನಗಾಗಿ ಉಳಿಸಿಕೊಂಡಿದ್ದೇನೆ. ಅವರನ್ನು ಬಾಳನ ಪೂಜೆಗೆ ಕೊಟ್ಟಿಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅದಕ್ಕೆ ದೇವರು ಅವನಿಗೆ ಕೊಟ್ಟ ಉತ್ತರವೇನಾಗಿತ್ತು? “ಬಾಳನಿಗೆ ಅಡ್ಡಬೀಳದ ಏಳು ಸಾವಿರ ಮಂದಿಯನ್ನು ನನಗೋಸ್ಕರ ಉಳಿಸಿದ್ದೇನೆ,” ಎಂದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ದೆವಾನ್ ತೆಕಾ ತನ್ನಾ ಕಾಯ್ ಜಬಾಬ್ ದಿಲ್ಯಾನ್. ಮಿಯಾ ಮಾಜೆಸಾಟ್ನಿ ಮನುನ್ ಝುಟ್ಯಾ ಬಾಲ್ ಮನ್ತಲ್ಯಾ ದೆವಾಚೆ ಆರಾದನ್ ಕರಿನಸಲ್ಲ್ಯಾ ಸಾತ್ ಹಜಾರ್ ಘೊಮನ್ಸಾಕ್ನಿ ಥವ್ಲಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:4
12 ತಿಳಿವುಗಳ ಹೋಲಿಕೆ  

ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಮಂದಿ ಇಸ್ರಾಯೇಲ್ಯರನ್ನು ಉಳಿಸುವೆನು ಎಂದು ಹೇಳಿದನು.


ಹೀಗೆ ಇಸ್ರಾಯೇಲ್ಯರು ಪೆಗೋರದ ಬಾಳನ ಭಕ್ತರಾದ ಹಾಗಾಯಿತು. ಆದದರಿಂದ ಅವರ ಮೇಲೆ ಯೆಹೋವನು ಕೋಪಗೊಂಡು ಮೋಶೆಗೆ -


ನಾನು ಯೆಹೂದದ ಮೇಲೂ ಯೆರೂಸಲೇವಿುನವರೆಲ್ಲರ ಮೇಲೂ ಕೈಯೆತ್ತಿ ಈ ಸ್ಥಳದಿಂದ ಬಾಳನ ಪೂಜೆಯನ್ನು ನಿಶ್ಶೇಷಗೊಳಿಸಿ ಕೆಮಾರ್ಯ ಮೊದಲಾದ ಪೂಜಾರಿಗಳನ್ನು ನಿರ್ನಾಮಮಾಡುವೆನು;


ತನ್ನ ಧಾನ್ಯದ್ರಾಕ್ಷಾರಸತೈಲಗಳು ನನ್ನಿಂದ ದೊರೆತವುಗಳೆಂದೂ ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿ ಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.


ಅದನ್ನು ನಿರ್ದೋಷಿಗಳ ರಕ್ತದಿಂದ ತುಂಬಿಸಿ ತಮ್ಮ ಮಕ್ಕಳನ್ನು ಬಾಳ್ ದೇವತೆಗೆ ಆಹುತಿಕೊಡುವದಕ್ಕೆ ಬಾಳನ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡಿದ್ದಾರಲ್ಲಾ; ನಾನು ಇಂಥಾ ಆಚಾರವನ್ನು ವಿಧಿಸಲಿಲ್ಲ. ಅದರ ಮಾತನ್ನೇ ಆಡಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ;


ಅವರು ಯೆಹೋವನನ್ನು ಬಿಟ್ಟು ಬಾಳ್ ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸುವವರಾದದರಿಂದ


ಪೂರ್ವದಲ್ಲಿ ಎಫ್ರಾಯೀಮು ನುಡಿದ ಮಾತಿಗೆ ಎಲ್ಲರೂ ನಡುಗಿದರು, ಅದು ಇಸ್ರಾಯೇಲಿನಲ್ಲಿ ಉನ್ನತಸ್ಥಿತಿಗೆ ಬಂದಿತ್ತು; ಆದರೆ ಬಾಳ್‍ದೇವತೆಯ ವಿಷಯದಲ್ಲಿ ದೋಷಿಯಾದಾಗ ಸತ್ತಿತು.


ಇವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವದು ಅಲ್ಪಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆ ಮಾಡಿಕೊಂಡು ಬಾಳ್‍ದೇವರನ್ನು ಪೂಜಿಸತೊಡಗಿದನು.


ಪೆಗೋರದ ಬಾಳನ ಸಂಗತಿಯಲ್ಲಿ ಯೆಹೋವನು ಮಾಡಿದ ಕಾರ್ಯವನ್ನು ನೀವು ನೋಡೇ ಇದ್ದೀರಷ್ಟೆ; ಪೆಗೋರದ ಬಾಳನನ್ನು ಅನುಸರಿಸಿದವರೆಲ್ಲರನ್ನೂ ನಿಮ್ಮ ದೇವರಾದ ಯೆಹೋವನು ನಿಮ್ಮಲ್ಲಿರದಂತೆ ನಾಶಮಾಡಿದನಲ್ಲಾ;


ಅವನು ಅದಕ್ಕೆ - ಸೇನಾಧೀಶ್ವರನಾದ ದೇವರೇ, ಯೆಹೋವನೇ, ಇಸ್ರಾಯೇಲ್ಯರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ, ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ ಎಂದು ಉತ್ತರಕೊಟ್ಟನು.


ಮತ್ತು ಚೀಯೋನಿನಲ್ಲಿ ಉಳಿದವರು, ಯೆರೂಸಲೇವಿುನಲ್ಲಿ ನಿಂತವರು, ಅಂತು ಜೀವಬಾಧ್ಯರ ಪಟ್ಟಿಯಲ್ಲಿ ಹೆಸರುಬಿದ್ದ ಯೆರೂಸಲೇವಿುನವರೆಲ್ಲರೂ ದೇವರ ಜನರೆನಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು