ರೋಮಾಪುರದವರಿಗೆ 11:5 - ಕನ್ನಡ ಸತ್ಯವೇದವು J.V. (BSI)5 ಅದರಂತೆ ಈಗಿನ ಕಾಲದಲ್ಲಿಯೂ ದೇವರು ಕೃಪೆಯಿಂದ ಆದುಕೊಂಡವರಾದ ಕೆಲವರು ಉಳಿದಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅದರಂತೆ ಈಗಿನ ಕಾಲದಲ್ಲಿಯೂ ದೇವರ ಕೃಪೆಯಿಂದ ಆರಿಸಿಕೊಂಡವರಾದ ಒಂದು ಭಾಗವು ಉಳಿದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅಂತೆಯೇ, ದೈವಾನುಗ್ರಹದಿಂದ ಆಯ್ಕೆಯಾದ ಸ್ವಲ್ಪಮಂದಿ ಈಗಲೂ ಉಳಿದಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಈಗಲೂ ಅದರಂತೆಯೇ ಆಗಿದೆ. ದೇವರು ತನ್ನ ಕೃಪೆಯ ಮೂಲಕ ಆರಿಸಿಕೊಂಡಿರುವ ಕೆಲವು ಜನರು ಇದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅದೇ ರೀತಿಯಲ್ಲಿ, ಈ ಕಾಲದಲ್ಲಿಯೂ ಕೃಪೆಯಿಂದ ಆಯ್ಕೆಯಾದ ಇಸ್ರಾಯೇಲರಲ್ಲಿ ಕೆಲವರು ಉಳಿದಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಅತ್ತಾಬಿ ತಸೆಚ್ ಹಾಯ್: ದೆವಾನ್ ಅಪ್ನಾಚ್ಯಾ ಕುರ್ಪೆನ್ ಎಚುನ್ ಕಾಡಲ್ಲ್ಯಾನಿತ್ಲಿ ಕಮಿ ಲೊಕಾ ಹುರಲ್ಲಿ ಹಾತ್. ಅಧ್ಯಾಯವನ್ನು ನೋಡಿ |
ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದೆಯೂ ಇದ್ದಾಗ - ಹಿರಿಯನು ಕಿರಿಯನಿಗೆ ಸೇವೆ ಮಾಡುವನೆಂಬದಾಗಿ ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಸ್ಥಿರವಾಗಿರಬೇಕೆಂದು ತೋರಿಸಿದನು. ಆ ಸಂಕಲ್ಪವು ಪುಣ್ಯಕ್ರಿಯೆಗಳ ಮೇಲೆ ಆಧಾರಗೊಳ್ಳದೆ ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ.
ಜೀವಸ್ವರೂಪನಾದ ದೇವರನ್ನು ದೂಷಿಸುವದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿನ್ನ ದೇವರಾದ ಯೆಹೋವನು ಕೇಳಿರುವನು; ನಿನ್ನ ದೇವರಾದ ಯೆಹೋವನು ತಾನು ಹೇಳಿದ ವಾಕ್ಯಗಳ ನಿವಿುತ್ತ ಮುಯ್ಯಿತೀರಿಸಾನು. ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿರಿ ಎಂಬದೇ.