Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:3 - ಕನ್ನಡ ಸತ್ಯವೇದವು J.V. (BSI)

3 ದೇವರು ನನಗೆ ಕೃಪೆಮಾಡಿದ ಸೇವೆಯನ್ನು ನಡಿಸಿ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ವಿಶ್ವಾಸ ಬಲವನ್ನು ಕೊಟ್ಟನೋ ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ಭಾವಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದೇವರು ನನಗೆ ದಯಪಾಲಿಸಿರುವ ಸೇವೆಯ ನಿಮಿತ್ತ ನಾನು ನಿಮಗೆ ಹೇಳುವ ಬುದ್ಧಿಮಾತಿದು: ನಿಮ್ಮಲ್ಲಿ ಯಾರೂ ತನ್ನನ್ನೇ ಅತಿಯಾಗಿ ಭಾವಿಸಿಕೊಳ್ಳದಿರಲಿ. ದೇವರು ತನಗೆ ಇತ್ತಿರುವ ವಿಶ್ವಾಸದ ಪರಿಮಾಣದ ಮೇರೆಗೆ ಪ್ರತಿಯೊಬ್ಬನೂ ತನ್ನ ಬಗ್ಗೆ ಸರಿಯಾದ ಅಭಿಪ್ರಾಯ ಹೊಂದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವರು ನನಗೆ ವಿಶೇಷವಾದ ಒಂದು ವರವನ್ನು ಕೊಟ್ಟಿದ್ದಾನೆ. ಆದಕಾರಣವೇ, ನಿಮ್ಮಲ್ಲಿರುವ ಪ್ರತಿಯೊಬ್ಬರಿಗೂ ಈ ಸಂಗತಿಗಳನ್ನು ತಿಳಿಸುತ್ತಿದ್ದೇನೆ. ನೀವು ನಿಮ್ಮ ನಿಜವಾದ ಯೋಗ್ಯತೆಗಿಂತಲೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಬೇಡಿ. ನೀವು ನಿಮ್ಮ ವಿಷಯದಲ್ಲಿ ಏನು ಭಾವಿಸಿಕೊಂಡರೂ ಆ ಭಾವನೆಯು ನಿಮ್ಮ ನಿಜವಾದ ಯೋಗ್ಯತೆಗೆ ಸರಿಸಮಾನವಾಗಿರಬೇಕು. ದೇವರು ನಿಮಗೆ ಎಂಥ ನಂಬಿಕೆಯನ್ನು ಕೊಟ್ಟಿದ್ದಾನೋ ಆ ನಂಬಿಕೆಗೆ ತಕ್ಕಂತೆ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನಗೆ ದಯಪಾಲಿಸಿರುವ ಕೃಪೆಯಿಂದ ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನಾನು ಹೇಳುವುದೇನೆಂದರೆ, ನೀವು ಭಾವಿಸುವುದಕ್ಕಿಂತ ಹೆಚ್ಚಾಗಿ ಯಾರೂ ನಿಮ್ಮನ್ನು ನೀವೇ ಉನ್ನತವಾಗಿ ಭಾವಿಸಿಕೊಳ್ಳಬೇಡಿರಿ. ಅದರ ಬದಲಾಗಿ ದೇವರು ನಿಮಗೆ ಅನುಗ್ರಹಿಸಿರುವ ವಿಶ್ವಾಸದ ಅಳತೆಗೆ ಅನುಸಾರವಾಗಿ ಸ್ವಸ್ಥಚಿತ್ತವುಳ್ಳವರಾಗಿ ಭಾವಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅನಿ ದೆವಾಚ್ಯಾ ಕುರ್ಪೆನ್ ಮಾಕಾ ಗಾವಲ್ಲ್ಯಾ ದೆನ್ಗಿಚ್ಯಾ ಸಾಟ್ನಿ ಮಿಯಾ ತುಮ್ಕಾ ಹರಿ ಎಕ್ಲ್ಯಾಕ್ನಿ ಸಾಂಗ್ತಾ: ತುಮ್ಚ್ಯಾ ಎವ್ಡ್ಯಾಕ್ ತುಮಿ ಮೊಟೆಪಾನ್ ಚಿಂತುಕ್ ಜಾವ್‍ನಕಾಶಿ, ತುಮಿ ಚಿಂತಲ್ಯಾಕ್ ಮಿತ್ ರ್‍ಹಾಂವ್ದಿತ್, ತುಮ್ಚ್ಯಾತ್ಲೊ ಹರಿ ಎಕ್ಲೊ ದೆವಾನ್ ಅಪ್ನಾಕ್ ದಿಲ್ಲ್ಯಾ ವಿಶ್ವಾಸಾಚ್ಯಾ ಮಾಪಾಚ್ಯಾ ಪರ್‍ಕಾರ್ ಅಪ್ನಾಚ್ಯಾ ಮೊಟೆಪಾನಾಚ್ಯಾ ವಿಶಯಾತ್ ಚಿಂತುಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:3
47 ತಿಳಿವುಗಳ ಹೋಲಿಕೆ  

ಯಾವನಾದರೂ ಅಲ್ಪನಾಗಿದ್ದು ತಾನು ದೊಡ್ಡವನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ಮೋಸಗೊಳಿಸಿದವನಾಗಿದ್ದಾನೆ.


ತಾನೇ ಜ್ಞಾನಿಯೆಂದೆಣಿಸಿಕೊಳ್ಳುವವನನ್ನು ನೋಡು; ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರದಿಂದ ಸೊಂಟಾಕಟ್ಟಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.


ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರ್ರಿ, ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.


ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ; ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ಧರ್ಮವನ್ನು ಅತಿಯಾಗಿ ಆಚರಿಸದಿರು; ಜ್ಞಾನವನ್ನು ಅಧಿಕವಾಗಿ ಆರ್ಜಿಸಬೇಡ; ನಿನ್ನನ್ನು ನೀನೇ ನಾಶನಕ್ಕೆ ಏಕೆ ಗುರಿಮಾಡಿಕೊಳ್ಳುವಿ?


ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಜಿತೇಂದ್ರಿಯರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರ್ರಿ.


ಆತನು ನಮ್ಮ ಮೇಲೆ ಅತಿಶಯವಾದ ಕೃಪೆಯನ್ನು ಇಡುತ್ತಾನೆ. ಆದುದರಿಂದ - ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ ಎಂದು ಶಾಸ್ತ್ರವು ಹೇಳುತ್ತದೆ.


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸಭೆಯ ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವದು. ಯೇಸು ಕ್ರಿಸ್ತನಿಗೆ ಆಧಿಪತ್ಯವೂ ಘನವೂ ಯುಗಯುಗಾಂತರಗಳಲ್ಲಿಯೂ ಇರುವವು. ಆಮೆನ್.


ಮನುಷ್ಯನೇ, ಒಳ್ಳೆಯದು ಇಂಥದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಷ್ಟೆ; ನ್ಯಾಯವನ್ನು ಆಚರಿಸುವದು, ಕರುಣೆಯಲ್ಲಿ ಆಸಕ್ತನಾಗಿರುವದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವದು, ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?


ಆದರೂ ಕರ್ತನು ಪ್ರತಿಯೊಬ್ಬನಿಗೆ ಯಾವ ಯಾವ ಸ್ಥಿತಿಯನ್ನು ನೇವಿುಸಿದ್ದಾನೋ, ಅಂದರೆ ದೇವರು ಕರೆಯುವಾಗ ಪ್ರತಿಯೊಬ್ಬನು ಯಾವ ಯಾವ ಸ್ಥಿತಿಯಲ್ಲಿ ಇದ್ದಾನೋ ಆಯಾ ಸ್ಥಿತಿಗೆ ಸರಿಯಾಗಿ ನಡೆದುಕೊಳ್ಳಲಿ. ಹೀಗೆ ಎಲ್ಲಾ ಸಭೆಗಳಲ್ಲಿಯೂ ಆಜ್ಞಾಪಿಸುತ್ತೇನೆ.


ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ವಿಸರ್ಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು ಅಂದರೆ ಮಹಾದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕಬೇಕೆಂದು ಅದು ನಮಗೆ ಬೋಧಿಸುತ್ತದೆ.


ಹೇಗಂದರೆ ವೃದ್ಧರು ಮದ್ಯಾಸಕ್ತಿಯಿಲ್ಲದವರೂ ಗೌರವವುಳ್ಳವರೂ ಜಿತೇಂದ್ರಿಯರೂ ನಂಬಿಕೆ ಪ್ರೀತಿ ತಾಳ್ಮೆ ಇವುಗಳಲ್ಲಿ ಸ್ವಸ್ಥರೂ ಆಗಿರಬೇಕೆಂದು ಬೋಧಿಸು. ಹಾಗೆಯೇ ವೃದ್ಧಸ್ತ್ರೀಯರು ಚಾಡಿಹೇಳುವವರೂ ಮದ್ಯಕ್ಕೆ ಗುಲಾಮರೂ ಆಗಿರದೆ


ಈ ಕಾರಣದಿಂದಲೂ ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವದರಿಂದಲೂ ನಾನು ಹೊಗಳಿಕೊಳ್ಳದೆ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲ ನನ್ನ ಶರೀರದಲ್ಲಿ ನಾಟಿದೆಯೋ ಎಂಬಂತೆ ನನ್ನನ್ನು ಗುದ್ದುವದಕ್ಕೆ ಸೈತಾನನ ದೂತರಲ್ಲಿ ಒಬ್ಬನು ನನ್ನ ಬಳಿಗೆ ಕಳುಹಿಸಲ್ಪಟ್ಟನು; ನಾನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂತಲೇ ಇದಾಯಿತು.


ನೀನು ಹೇಳುವದು ನಿಜ; ಅವರು ನಂಬದೆಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ.


ಆತನ ಹೆಸರಿನ ಪ್ರಸಿದ್ಧಿಗಾಗಿ ಎಲ್ಲಾ ಅನ್ಯಜನಗಳಲ್ಲಿ ನಂಬಿಕೆಯೆಂಬ ವಿಧೇಯತ್ವ ಉಂಟಾಗುವದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದೆವು.


ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಭಾಗ್ಯದ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.


ಇದಲ್ಲದೆ ಅವರು ಪ್ರಾಯದ ಸ್ತ್ರೀಯರಿಗೆ - ನಿಮ್ಮ ಮೂಲಕ ದೇವರ ವಾಕ್ಯಕ್ಕೆ ದೂಷಣೆಯಾಗದಂತೆ ನೀವು ಗಂಡಂದಿರನ್ನೂ ಮಕ್ಕಳನ್ನೂ ಪ್ರೀತಿಸುವವರೂ ದಮೆಯುಳ್ಳವರೂ ಪತಿವ್ರತೆಯರೂ


ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ. ನನಗುಂಟಾದ ಆತನ ಕೃಪೆಯು ನಿಷ್ಫಲವಾಗಲಿಲ್ಲ; ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.


ಹೇಗಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮವರವನ್ನು ಅಳತೆಮಾಡದೆ ಅನುಗ್ರಹಿಸುವದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ಆತನೇ ಶಿರಸ್ಸು; ದೇಹವೆಲ್ಲಾ ಆತನ ದೊರೆತನದಲ್ಲಿದ್ದು ತನ್ನಲ್ಲಿರುವ ಎಲ್ಲಾ ನರಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯ ಹೊಂದಿ ಪ್ರೀತಿಯಿಂದ ಐಕ್ಯವಾಗಿದ್ದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ.


ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ - ದೇವರೇ, ಸುಲುಕೊಳ್ಳುವವರೂ ಅನ್ಯಾಯಗಾರರೂ ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ; ಆದದರಿಂದ ನಿನಗೆ ಸ್ತೋತ್ರಮಾಡುತ್ತೇನೆ.


ಹಾಗೆಯೇ ಎಲ್ಲಾ ವಿಷಯಗಳಲ್ಲೂ ಜಿತೇಂದ್ರಿಯರಾಗಿರಬೇಕೆಂದು ನೀನು ಯೌವನಸ್ಥರನ್ನು ಎಚ್ಚರಿಸು.


ಆದರೂ ಸ್ತ್ರೀಯರು ಮಾನಸ್ಥೆಯರಾಗಿ ನಂಬಿಕೆಯಲ್ಲಿಯೂ ಪ್ರೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಮಕ್ಕಳನ್ನು ಹೆರುವದರಲ್ಲಿ ರಕ್ಷಣೆಹೊಂದುವರು.


ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ ಡಂಭವಿಲ್ಲದವರಾಗಿಯೂ ಇದ್ದು ಮರ್ಯಾದೆಗೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ.


ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಂಟುಮಾಡಿತು.


ಅದನ್ನು ಕುರಿತು ನಾನು ಹಿಂದೆ ಸಂಕ್ಷೇಪವಾಗಿ ಬರೆದಿದ್ದೇನೆ; ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳುಕೊಳ್ಳಬಹುದು.


ನನ್ನನ್ನು ಸಂರಕ್ಷಿಸುವ ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬುವ ಒಂದೇ ವಿಷಯದಲ್ಲಿ ಹೊರತು ಇನ್ನಾವ ವಿಷಯದಲ್ಲಿಯೂ ನಿಮ್ಮನ್ನು ವಿುಕ್ಕಾದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲವಲ್ಲಾ. ನಾನು ಮಾಡಿದ ಈ ಅನ್ಯಾಯವನ್ನು ಕ್ಷವಿುಸಿರಿ.


ದೇವರು ನನಗೆ ಕೃಪೆಯಿಂದ ಒಪ್ಪಿಸಿದ ಕೆಲಸವನ್ನು ನಡಿಸಿ ನಾನು ಪ್ರವೀಣಶಿಲ್ಪಿಯಂತೆ ಅಸ್ತಿವಾರ ಹಾಕಿದೆನು, ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಪ್ರತಿಯೊಬ್ಬನು ತಾನು ಅದರ ಮೇಲೆ ಎಂಥದನ್ನು ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು.


ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬದಾಗಿ ಎಣಿಸಿಕೊಳ್ಳದಂತೆ ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ; ಅದೇನಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವದು;


ಜೇನನ್ನು ಹೆಚ್ಚಾಗಿ ತಿನ್ನುವದು ಹಿತವಲ್ಲ; ಸ್ವಂತಮಾನವನ್ನು ಹೆಚ್ಚಾಗಿ ಯೋಚಿಸುವದು ಮಾನವಲ್ಲ.


ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮ ಮಾತನ್ನು ಅಂಗೀಕರಿಸುವದಿಲ್ಲ. ಆದಕಾರಣ ನಾನು ಬಂದರೆ ಅವನು ಮಾಡುವ ಕೃತ್ಯಗಳ ವಿಷಯದಲ್ಲಿ ಎಲ್ಲರಿಗೂ ನೆನಪುಕೊಡುವೆನು.


ಅಪರಾಧಗಳನ್ನು ಮಾಡುವದರಿಂದಲೂ ಸುನ್ನತಿಯಿಲ್ಲದ ಶರೀರಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ಸಹ ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ.


ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲವನ್ನು ಪ್ರಯೋಗಮಾಡಿ ಇದಕ್ಕೋಸ್ಕರವೇ ಹೋರಾಡುತ್ತೇನೆ, ಪ್ರಯಾಸಪಡುತ್ತೇನೆ.


ನಿಮಗೋಸ್ಕರ ನಿರ್ವಹಿಸುವದಕ್ಕಾಗಿ ದೇವರು ನನಗೆ ಕೃಪೆಯಾಗಿ ಕೊಟ್ಟ ಕೆಲಸವನ್ನೂ ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ದೈವಪ್ರಕಟನೆಯಿಂದ ನನಗೆ ತಿಳಿಸಲ್ಪಟ್ಟಿತೆಂಬದನ್ನೂ ನೀವು ಕೇಳಿದ್ದೀರಲ್ಲಾ.


ನಾವಾದರೋ ಮೇರೆದಪ್ಪಿ ಹೊಗಳಿಕೊಳ್ಳದೆ ದೇವರು ನಮಗೆ ನೇವಿುಸಿದಂಥ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ. ಈ ಮೇರೆಯೊಳಗಿದ್ದು ನಿಮ್ಮ ಪರ್ಯಂತರಕ್ಕೂ ಬಂದಿದ್ದೇವೆ.


ಯಾಕಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು