Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:6 - ಕನ್ನಡ ಸತ್ಯವೇದವು J.V. (BSI)

6 ದೇವರು ನಮಗೆ ಕೃಪೆಮಾಡಿದ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ಹೊಂದಿದ ವರವು ಪ್ರವಾದನೆಯ ರೂಪವಾಗಿದ್ದರೆ ನಮ್ಮ ವಿಶ್ವಾಸ ವರಕ್ಕೆ ತಕ್ಕ ಹಾಗೆ ಪ್ರವಾದನೆ ಹೇಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರು ನಮಗೆ ಕೃಪೆಮಾಡಿದ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ಹೊಂದಿದ ವರವು ಪ್ರವಾದನೆ ರೂಪವಾಗಿದ್ದರೆ, ನಮ್ಮ ನಂಬಿಕೆಗೆ ತಕ್ಕ ಹಾಗೆ ಪ್ರವಾದನೆ ಹೇಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದೇವರು ಅನುಗ್ರಹಿಸಿರುವ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ನಾವು ಹೊಂದಿರುವ ವರವು ಪ್ರವಾದನೆಯ ವರವಾಗಿದ್ದರೆ ನಮ್ಮ ವಿಶ್ವಾಸಕ್ಕೆ ಅನುಗುಣವಾಗಿ ಅದನ್ನು ಉಪಯೋಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾವೆಲ್ಲರೂ ಬೇರೆಬೇರೆ ವರಗಳನ್ನು ಹೊಂದಿದ್ದೇವೆ. ದೇವರು ನಮಗೆ ಕೊಟ್ಟಿರುವ ಕೃಪೆಯಿಂದಲೇ ಪ್ರತಿಯೊಂದು ವರವು ಬಂದಿದೆ. ಪ್ರವಾದಿಸುವ ವರವನ್ನು ಹೊಂದಿರುವವನು ತನಗಿರುವ ನಂಬಿಕೆಯೊಂದಿಗೆ ಆ ವರವನ್ನು ಉಪಯೋಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಮಗೆ ಕೊಟ್ಟಿರುವ ದೇವರ ಕೃಪೆಗೆ ಅನುಸಾರವಾಗಿ ನಮಗೆ ಬೇರೆ ಬೇರೆ ವರಗಳಿರುತ್ತವೆ. ಒಬ್ಬನಿಗೆ ಪ್ರವಾದನಾ ವರವಾಗಿದ್ದರೆ, ಅದನ್ನು ಅವನ ವಿಶ್ವಾಸದ ಅಳತೆಗೆ ತಕ್ಕ ರೀತಿಯಲ್ಲಿ ಉಪಯೋಗಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆಚೆಸಾಟ್ನಿ ದೆವಾನ್ ಅಮ್ಕಾ ದಿಲ್ಲ್ಯಾ ಕುರ್ಪೆಚ್ಯಾ ವೈನಾ ಅಮ್ಕಾ ಹೊತ್ತಿ ದೆನ್ಗಿಯಾ ದುಸ್ರಿ-ದುಸ್ರಿ ಹಾತ್; ಎಕ್ಲ್ಯಾಕ್ ಪ್ರವಾದ್ ಕರ್‍ತಲೆ ದೆನ್ಗಿ ದಿಲ್ಲಿ ಹಾಯ್ ಜಾಲ್ಯಾರ್ ತೊ ಅಪ್ನಾಕ್ ದಿಲ್ಲ್ಯಾ ವಿಶ್ವಾಸಾಚ್ಯಾ ಮಾಪಾನ್ ಪ್ರವಾದ್ ಕರುಂದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:6
31 ತಿಳಿವುಗಳ ಹೋಲಿಕೆ  

ನಾನಿರುವಂತೆಯೇ ಎಲ್ಲಾ ಮನುಷ್ಯರು ಇರಬೇಕೆಂದು ನನ್ನ ಇಷ್ಟ; ಆದರೆ ಒಬ್ಬನು ಒಂದು ವಿಧವಾಗಿ ಮತ್ತೊಬ್ಬನು ಇನ್ನೊಂದು ವಿಧವಾಗಿ ದೇವರಿಂದ ವರವನ್ನು ಹೊಂದಿಕೊಂಡಿದ್ದಾರೆ.


ದೇವರು ನನಗೆ ಕೃಪೆಮಾಡಿದ ಸೇವೆಯನ್ನು ನಡಿಸಿ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ವಿಶ್ವಾಸ ಬಲವನ್ನು ಕೊಟ್ಟನೋ ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ಭಾವಿಸಿಕೊಳ್ಳಬೇಕು.


ನನ್ನ ಮುಖಾಂತರವಾಗಿ ನಿಮಗೆ ಪಾರಮಾರ್ಥಿಕ ವರವೇನಾದರೂ ದೊರಕಿ ನೀವು ದೃಢವಾಗುವದಕ್ಕೋಸ್ಕರ ಅಂದರೆ ನಾನು ನಿಮ್ಮ ನಂಬಿಕೆಯಿಂದ ನೀವು ನನ್ನ ನಂಬಿಕೆಯಿಂದ ಸಹಾಯಹೊಂದಿ ಈ ಪ್ರಕಾರ ನಿಮ್ಮೊಂದಿಗೆ ನಾನು ಧೈರ್ಯಗೊಳ್ಳುವದಕ್ಕೋಸ್ಕರ ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ.


ನನಗೆ ಪ್ರವಾದನವರವಿದ್ದರೂ ಎಲ್ಲಾ ರಹಸ್ಯಗಳೂ ಸಕಲ ವಿಧವಾದ ವಿದ್ಯೆಯೂ ತಿಳಿದರೂ, ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿದ್ದೇನೆ.


ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸೌವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.


ಪ್ರೀತಿಯನ್ನು ಅಭ್ಯಾಸಮಾಡಿಕೊಳ್ಳಿರಿ. ಆದರೂ ಪವಿತ್ರಾತ್ಮನಿಂದುಂಟಾಗುವ ವರಗಳನ್ನು, ಅವುಗಳೊಳಗೆ ವಿಶೇಷವಾಗಿ ಪ್ರವಾದಿಸುವ ವರವನ್ನೇ ಆಸಕ್ತಿಯಿಂದ ಅಪೇಕ್ಷಿಸಿರಿ.


ಒಬ್ಬನು ಕೊಡುವದಕ್ಕೆ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನಲ್ಲಿ ಇರುವದಕ್ಕೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವದು; ಅವನಿಗೆ ಇಲ್ಲದ್ದನ್ನು ದೇವರು ಕೇಳಿಕೊಳ್ಳುವದಿಲ್ಲ.


ಪ್ರವಾದಿಗಳು ಇಬ್ಬರಾಗಲಿ ಮೂವರಾಗಲಿ ಮಾತಾಡಲಿ, ವಿುಕ್ಕಾದವರು ಕೇಳಿ ವಿವೇಚನೆ ಮಾಡಲಿ.


ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಪ್ರಬೋಧಿಸಿ ದೃಢಪಡಿಸಿದರು.


ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;


ನಮ್ಮಲ್ಲಿ ಪ್ರವೀಣರಾದವರು ಇದೇ ಅಭಿಪ್ರಾಯವುಳ್ಳವರಾಗಿರೋಣ. ಯಾವದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನೂ ದೇವರು ನಿಮಗೆ ತೋರಿಸಿಕೊಡುವನು.


ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.


ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರಂದರೆ - ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಉಪರಾಜನಾದ ಹೆರೋದನ ಸಾಕತಮ್ಮನಾದ ಮೆನಹೇನ, ಸೌಲ ಇವರೇ.


ಆದದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ - ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲ್ಲುವರು; ಕೆಲವರನ್ನು ಹಿಂಸೆಪಡಿಸುವರು.


ಆದದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.


ಆದರೆ ನೀವೆಲ್ಲರು ಪ್ರವಾದಿಸುತ್ತಿರಲು ಕ್ರಿಸ್ತನಂಬಿಕೆಯಿಲ್ಲದವನಾಗಲಿ ಈ ವರವಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರ ಮಾತನ್ನು ಕೇಳಿ ತಾನು ಪಾಪಿಯೆಂಬ ಅರುಹನ್ನು ಹೊಂದುವನು, ಎಲ್ಲರ ಮಾತಿನಿಂದ ಪರಿಶೋಧಿತನಾಗುವನು,


ಅವನಿಗೆ ಮದುವೆಯಾಗದ ನಾಲ್ಕು ಮಂದಿ ಹೆಣ್ಣುಮಕ್ಕಳಿದ್ದರು; ಅವರು ಪ್ರವಾದಿಸುವವರಾಗಿದ್ದರು.


ಹಾಗಾದರೆ ಅಪೊಲ್ಲೋಸನು ಏನು? ಪೌಲನು ಏನು? ಅವರು ಸೇವಕರು; ಅವರ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ.


ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನಗೆ ಸರಿಯಾಗಿ ತೋಚಿದ ಪ್ರಕಾರ ದೇಹದೊಳಗೆ ಇಟ್ಟಿದ್ದಾನೆ.


ಶಾಸ್ತ್ರದಲ್ಲಿರುವ ಯಾವ ಪ್ರವಾದನವಾಕ್ಯವೂ ಕೇವಲ ಮಾನುಷಬುದ್ಧಿಯಿಂದ ವಿವರಿಸತಕ್ಕಂಥದಲ್ಲವೆಂಬದನ್ನು ಮುಖ್ಯವಾಗಿ ತಿಳಿದುಕೊಳ್ಳಿರಿ.


ಆಗ ಎರಡು ತಲಾಂತು ಹೊಂದಿದವನು ಮುಂದೆಬಂದು - ಸ್ವಾಮೀ, ಎರಡು ತಲಾಂತು ನನಗೆ ಒಪ್ಪಿಸಿದಿಯಲ್ಲಾ; ಇಗೋ, ಇನ್ನು ಎರಡು ತಲಾಂತು ಸಂಪಾದಿಸಿದ್ದೇನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು