Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:8 - ಕನ್ನಡ ಸತ್ಯವೇದವು J.V. (BSI)

8 ಬೋಧಿಸುವವನು ಬೋಧಿಸುವದರಲ್ಲಿಯೂ ಬುದ್ಧಿ ಹೇಳುವವನು ಬುದ್ಧಿ ಹೇಳುವದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ಹಿರೀತನ ನಡಿಸುವವನು ಆಸಕ್ತಿಯಿಂದ ನಡಿಸಲಿ. ಕಷ್ಟದಲ್ಲಿರುವವರಿಗೆ ಉಪಕಾರ ಮಾಡುವವನು ಸಂತೋಷವಾಗಿ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಉಪದೇಶಕನು ಉಪದೇಶಿಸುವುದರಲ್ಲಿಯೂ ನಿರತನಾಗಿರಲಿ. ದಾನಮಾಡುವವನು ಧಾರಾಳವಾಗಿ ದಾನ ಮಾಡಲಿ. ಅಧಿಕಾರ ನಡೆಸುವವನು ನಿಷ್ಠೆಯಿಂದ ನಡೆಸಲಿ. ಕರುಣಾಪೂರಿತ ಕಾರ್ಯಗಳನ್ನು ಕೈಗೊಳ್ಳುವವನು ಹರ್ಷಚಿತ್ತನಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಉಪದೇಶಮಾಡುವ ವರವನ್ನು ಹೊಂದಿರುವವನು ಉಪದೇಶ ಮಾಡಬೇಕು. ಸಂತೈಸುವ ವರವನ್ನು ಹೊಂದಿರುವವನು ಬೇರೆಯವರನ್ನು ಸಂತೈಸಬೇಕು. ದಾನಮಾಡುವ ವರವನ್ನು ಹೊಂದಿರುವವನು ಉದಾರವಾಗಿ ಕೊಡಬೇಕು. ನಾಯಕತ್ವದ ವರವನ್ನು ಹೊಂದಿರುವವನು ನಾಯಕತ್ವವನ್ನು ವಹಿಸಿಕೊಂಡಿರುವಾಗ ಕಷ್ಟಪಟ್ಟು ದುಡಿಯಬೇಕು. ಕನಿಕರವನ್ನು ತೋರುವ ವರವನ್ನು ಹೊಂದಿರುವವನು ಆನಂದದಿಂದ ಆ ಕಾರ್ಯವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅದು ಪ್ರೋತ್ಸಾಹಗೊಳಿಸುವುದಾಗಿದ್ದರೆ, ಅವನು ಪ್ರೋತ್ಸಾಹಗೊಳಿಸಲಿ. ದಾನಕೊಡುವ ವರವಾಗಿದ್ದರೆ, ಅವನು ಧಾರಾಳವಾಗಿ ಕೊಡಲಿ. ನಾಯಕತ್ವ ವಹಿಸುವ ವರವಾಗಿದ್ದರೆ, ಅವನು ಶ್ರದ್ಧೆಯಿಂದ ಮಾಡಲಿ ದಯೆ ತೋರಿಸುವ ವರವಾಗಿದ್ದರೆ ಅದನ್ನು ಅವನು ಸಂತೋಷದಿಂದ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ದುಸ್ರ್ಯಾಕ್ನಿ ಧೈರೊ ಸಾಂಗ್ತಲೊ ಮನುನ್ ರ್‍ಹಾಲ್ಯಾರ್ ತೊ ದುಸ್ರ್ಯಾಕ್ನಿ ಉರ್ಬಾ ಭರಿ ಸರ್ಕೆ ಕರುನ್ಗೆತ್ ರ್‍ಹಾಂವ್ದಿತ್. ಜೆ ಕೊನ್ ದುಸ್ರ್ಯಾಂಚ್ಯಾ ವಾಂಗ್ಡಾ ಮಿಳುನ್ ವಾಟುನ್ ಘೆವ್ನ್ ಹಾತ್ ತೆನಿ ತೆ ಫುರಾ ಮನಾನಿ ಕರುಂದಿತ್ ; ಅದಿಕಾರ್ ಚಾಲ್ವುತಲೊ ಬರ್‍ಯಾ ಬಾಸೆನ್ ಅದಿಕಾರ್ ಚಾಲ್ವುಂದಿತ್, ದಯಾಳ್ ಕಾಮಾ ಕರ್‍ತಲೊ ಹಾಸ್ಮುರ್‍ಕ್ಯಾ ತೊಂಡಾನ್ ಕರುಂದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:8
57 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನು ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನ ಮೇಲೆ ದೇವರಿಗೆ ಪ್ರೀತಿಯುಂಟು.


ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ಪ್ರಸಂಗದಲ್ಲಿಯೂ ಉಪದೇಶದಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.


ದೇವರು ತನ್ನ ಸಭೆಯಲ್ಲಿ ಮೊದಲನೇದಾಗಿ ಅಪೊಸ್ತಲರನ್ನು, ಎರಡನೇದಾಗಿ ಪ್ರವಾದಿಗಳನ್ನು, ಮೂರನೇದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹಾತ್ಕಾರ್ಯ ಮಾಡುವ ಶಕ್ತಿಯನ್ನೂ ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ ಪರಸಹಾಯ ಮಾಡುವ ಗುಣವನ್ನೂ ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನೂ ವಿವಿಧ ವಾಣಿಗಳನ್ನಾಡುವ ವರವನ್ನೂ ಅವರವರಿಗೆ ಕೊಟ್ಟಿದ್ದಾನೆ.


ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವಂತೆ ನೋಡಿರಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.


ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಪ್ರಬೋಧಿಸಿ ದೃಢಪಡಿಸಿದರು.


ಧರ್ಮಶಾಸ್ತ್ರವು ಪ್ರವಾದಿಗಳ ಗ್ರಂಥವು ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ಯಜಮಾನರು - ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿ ಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.


ನಿಮ್ಮ ಸಭಾನಾಯಕರೆಲ್ಲರಿಗೂ ದೇವಜನರೆಲ್ಲರಿಗೂ ವಂದನೆ ಹೇಳಿರಿ. ಇತಾಲ್ಯ ದೇಶದಿಂದ ಬಂದವರು ನಿಮಗೆ ವಂದನೆ ಹೇಳುತ್ತಾರೆ.


ಸಹೋದರರೇ, ಈ ಎಚ್ಚರಿಕೆಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ.


ಅವರು ಯಾವ ರೀತಿಯಿಂದ ನಡೆದುಕೊಂಡು ಪ್ರಾಣಬಿಟ್ಟರೆಂಬದನ್ನು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.


ಸಭೆಯಾಗಿ ಕೂಡಿಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿಸೋಣ. ಕರ್ತನ ಪ್ರತ್ಯಕ್ಷತೆಯ ದಿನವು ಸಮೀಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ.


ಒಬ್ಬನು ಕೊಡುವದಕ್ಕೆ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನಲ್ಲಿ ಇರುವದಕ್ಕೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವದು; ಅವನಿಗೆ ಇಲ್ಲದ್ದನ್ನು ದೇವರು ಕೇಳಿಕೊಳ್ಳುವದಿಲ್ಲ.


ಪ್ರವಾದಿಸುವವರಾದರೋ ಮನುಷ್ಯರ ಸಂಗಡ ಮಾತಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟುಮಾಡುತ್ತಾನೆ.


ದೇವರು ಸ್ವರಕ್ತದಿಂದ ಸಂಪಾದಿಸಿಕೊಂಡ ಸಭೆಯನ್ನು ಪರಿಪಾಲಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ಆ ಸೀಮೆಯಲ್ಲಿ ಸಂಚಾರಮಾಡಿ ಅಲ್ಲಿಯವರನ್ನು ಅನೇಕ ಮಾತುಗಳಿಂದ ಧೈರ್ಯಪಡಿಸಿ ಗ್ರೀಸ್ ದೇಶಕ್ಕೆ ಬಂದನು.


ನಾನು ಬರುವ ತನಕ ವೇದಪಾರಾಯಣವನ್ನೂ ಪ್ರಸಂಗವನ್ನೂ ಉಪದೇಶವನ್ನೂ ಮಾಡುವದರಲ್ಲಿ ಆಸಕ್ತನಾಗಿರು.


ನೀವು ನಮಗೆ ಅತಿ ಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳವರಾಗಿ ದೇವರ ಸುವಾರ್ತೆಯನ್ನು ಹೇಳುವದಕ್ಕೆ ಮಾತ್ರವಲ್ಲದೆ ನಿಮಗೋಸ್ಕರ ಪ್ರಾಣವನ್ನೇ ಕೊಡುವದಕ್ಕೆ ಸಂತೋಷಿಸುವವರಾದೆವು.


ಯಾಕಂದರೆ ನಮ್ಮ ಬೋಧನೆಯು ಅಬದ್ಧವಲ್ಲ, ಅಶುದ್ಧವಲ್ಲ, ಮೋಸವಲ್ಲ; ದೇವರು ನಮ್ಮನ್ನು ಯೋಗ್ಯರೆಂದೆಣಿಸಿ


ದಾಸತ್ವದಲ್ಲಿರುವವರೇ, ಈ ಲೋಕದಲ್ಲಿನ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿರಿ; ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆ ಮಾಡದೆ ಕರ್ತನಿಗೆ ಭಯಪಡುವವರಾಗಿ ಸರಳಮನಸ್ಸಿನಿಂದ ಕೆಲಸಮಾಡಿರಿ.


ದಾಸತ್ವದಲ್ಲಿರುವವರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆಂದು ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರ್ರಿ.


ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಮೋಸಹೋದಳೋ ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಪಾತಿವ್ರತ್ಯವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವುಂಟು.


ಈ ಸಹಾಯದಿಂದ ತೋರಿಬಂದ ನಿಮ್ಮ ಯೋಗ್ಯಭಾವವನ್ನು ಅವರು ನೋಡುವಾಗ ನೀವು ಮಾಡಿದ್ದ ಪ್ರತಿಜ್ಞೆಗೆ ಸರಿಯಾಗಿ ಕ್ರಿಸ್ತನ ಸುವಾರ್ತೆಯನ್ನು ಅನುಸರಿಸಿದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು.


ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡ ಶಕ್ತರಾಗುವಿರಿ; ಇದಲ್ಲದೆ ನಿಮ್ಮ ದಾನಗಳು ನಮ್ಮ ಕೈಯಿಂದ ಮತ್ತೊಬ್ಬರಿಗೆ ಸೇರಿದಾಗ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟುಮಾಡುವದು.


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಕಂದಾಯ ಎತ್ತುವವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ.


ದೇವಜನರಿಗೆ ಕೊರತೆಬಂದಾಗ ಸಹಾಯಮಾಡಿರಿ. ಅತಿಥಿಸತ್ಕಾರವನ್ನು ಅಭ್ಯಾಸಿಸಿರಿ.


ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದೀ; ನಮ್ಮ ಮೇಲಾದರೋ ರೋಷಗೊಂಡಿದ್ದೀ; ಆದರೂ ನಾವು ಪಾಪವನ್ನು ನಡಿಸುತ್ತಾ ಬಂದೆವು; ಬಹುಕಾಲದಿಂದ ಪಾಪದಲ್ಲಿ ಮುಣುಗಿರುವ ನಮಗೆ ರಕ್ಷಣೆಯಾದೀತೇ?


ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು; ಘನವಾದವುಗಳಲ್ಲಿಯೇ ನಿರತನಾಗಿರುವನು.


ಇನ್ನು ಮೇಲೆ ನೀಚನು ಘನವಂತನೆನಿಸಿಕೊಳ್ಳನು. ಕಳ್ಳನು ಮಹನೀಯನೆನಿಸನು.


ಮುಂಜಾನೆ ಬೀಜ ಬಿತ್ತು, ಸಂಜೆಯತನಕ ಕೈದೆಗೆಯಬೇಡ; ಇದು ಸಫಲವೋ, ಅದು ಸಫಲವೋ, ಒಂದು ವೇಳೆ ಎರಡೂ ಚೆನ್ನಾಗುವವೋ ನಿನಗೆ ತಿಳಿಯದು. ಬೆಳಕು ಇಂಪು; ಸೂರ್ಯನನ್ನು ಕಾಣುವದು ಕಣ್ಣಿಗೆ ಹಿತ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು; ನೀನು ಸೇರಬೇಕಾದ ಪಾತಾಳದಲ್ಲಿ ಯಾವ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.


ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು; ತನ್ನ ಅನ್ನವನ್ನು ಬಡವರಿಗೆ ಕೊಡುತ್ತಾನಲ್ಲವೆ.


ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವದು.


ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು; ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.


ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸದಾಸಿಯರೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿ ತಂದೆಯಿಲ್ಲದವರೂ ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿರುವ ಮೇರೆಗೆ ನಿಮಗಿರುವ ಆಡುಕುರಿಗಳು, ದವಸ, ದ್ರಾಕ್ಷಾರಸ ಇವುಗಳಲ್ಲಿ ಉದಾರವಾಗಿ ಕೊಟ್ಟು ಕಳುಹಿಸಿಬಿಡಬೇಕು.


ಅವನು ತನ್ನ ಪುತ್ರಪೌತ್ರರಿಗೆ - ನೀವು ನ್ಯಾಯನೀತಿಗಳನ್ನು ನಡಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆದುಕೊಂಡೆನಲ್ಲಾ; ಅವನು ಹೀಗೆ ಮಾಡುವದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವದು ಅಂದುಕೊಂಡನು.


ಅಧಿಪತಿಯು ಆ ಸಂಗತಿಯನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬುವವನಾದನು.


ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಅಂದರೆ ಧೈರ್ಯದಾಯಕ ಎಂದು ಹೆಸರಿಟ್ಟಿದ್ದರು.


ಅವನು ಒಳ್ಳೆಯವನೂ ಪವಿತ್ರಾತ್ಮಭರಿತನೂ ನಂಬಿಕೆಯಿಂದ ತುಂಬಿದವನೂ ಆಗಿದ್ದನು. ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು - ನೀವು ದೃಢಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರ್ರಿ ಎಂದು ಅವರೆಲ್ಲರಿಗೆ ಬುದ್ಧಿ ಹೇಳಿದನು.


ನಿರೀಕ್ಷೆಯನ್ನಿಡಬೇಕೆಂತಲೂ ವಾಸ್ತವವಾದ ಜೀವವನ್ನು ಹೊಂದುವದಕ್ಕೋಸ್ಕರ ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ದಾನಧರ್ಮಗಳನ್ನು ಮಾಡುವವರೂ ಪರೋಪಕಾರಮಾಡುವವರೂ ಆಗಿದ್ದು ಮುಂದಿನ ಕಾಲಕ್ಕೆ ಒಳ್ಳೇ ಅಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂತಲೂ ಅವರಿಗೆ ಆಜ್ಞಾಪಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು