Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 13:1 - ಕನ್ನಡ ಸತ್ಯವೇದವು J.V. (BSI)

1 ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವರಿಂದ ನೇವಿುಸಲ್ಪಟ್ಟವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ. ಯಾಕೆಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವು ದೊರೆತಿರುವುದಿಲ್ಲ. ಇರುವ ಅಧಿಕಾರಿಗಳಾದರೋ ದೇವರಿಂದ ನೇಮಿಸಲ್ಪಟ್ಟವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪ್ರತಿಯೊಬ್ಬನು ತನ್ನ ಮೇಲಿನ ಅಧಿಕಾರಿಗಳಿಗೆ ಅಧೀನನಾಗಿರಬೇಕು. ಅಧಿಕಾರವೆಲ್ಲವೂ ಬರುವುದು ದೇವರಿಂದಲೇ. ಈಗಿರುವ ಅಧಿಕಾರಿಗಳೂ ದೇವರಿಂದಲೇ ನೇಮಕಗೊಂಡವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನೀವೆಲ್ಲರೂ ಸರ್ಕಾರದ ಅಧಿಕಾರಿಗಳಿಗೆ ವಿಧೇಯರಾಗಿರಬೇಕು. ಪ್ರತಿಯೊಬ್ಬ ಅಧಿಕಾರಿಗೆ ಅಧಿಕಾರವನ್ನು ಕೊಟ್ಟಿರುವವನು ದೇವರೇ. ಈಗಿರುವ ಎಲ್ಲಾ ಅಧಿಕಾರಿಗಳಿಗೆ ದೇವರೇ ಅಧಿಕಾರವನ್ನು ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರತಿಯೊಬ್ಬನೂ ಮೇಲಧಿಕಾರಿಗಳಿಗೆ ಅಧೀನನಾಗಿರಬೇಕು, ಏಕೆಂದರೆ ದೇವರು ನೇಮಿಸಿದ ಅಧಿಕಾರದ ಹೊರತು ಬೇರೆ ಯಾವದೂ ಇರುವುದಿಲ್ಲ. ಇರುವ ಅಧಿಕಾರಗಳು ದೇವರಿಂದಲೇ ನೇಮಕಗೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹರಿ ಎಕ್ಲ್ಯಾನಿ ಅಪ್ನಾಚ್ಯಾ ವರ್‍ತಿ ಹೊತ್ತ್ಯಾ ಅದಿಕಾರ್‍ಯಾಕ್ನಿ ಖಾಲ್ತಿ ಹೊವ್ನ್ ಚಲುಚೆ. ಕಶ್ಯಾಕ್ ಮಟ್ಲ್ಯಾರ್ ದೆವಾನ್ ದಿವ್‍ನಸ್ತಾನಾ ಕೊನಾಕ್‍ಬಿ ಅದಿಕಾರ್ ಗಾವಿನಾ, ಅನಿ ಅತ್ತಾ ಅಸಲ್ಲ್ಯಾ ಅದಿಕಾರ್‍ಯಾಕ್ನಿ ದೆವಾನುಚ್ ನೆಮ್ಸುನ್ ಥವ್ಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 13:1
25 ತಿಳಿವುಗಳ ಹೋಲಿಕೆ  

ಅಧಿಪತಿಗಳಿಗೂ ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕೆಂತಲೂ ಸಕಲಸತ್ಕಾರ್ಯಗಳನ್ನು ಮಾಡುವದಕ್ಕೆ ಸಿದ್ಧರಾಗಿರಬೇಕೆಂತಲೂ,


ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ತಳ್ಳುತ್ತಾನೆ, ನಿಲ್ಲಿಸುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ;


ಅದಕ್ಕೆ ಯೇಸು - ಮೇಲಣಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪ ಉಂಟು ಅಂದನು.


ಹೀಗಿದ್ದರೂ ಈ ಜನರು ಸ್ವಪ್ನಾವಸ್ಥೆಯಲ್ಲಿರುವವರಂತೆ ಅದೇ ರೀತಿಯಾಗಿ ಶರೀರವನ್ನು ಮಲಿನಮಾಡಿಕೊಳ್ಳುತ್ತಾರೆ. ಪ್ರಭುತ್ವವನ್ನು ಅಸಡ್ಡೆಮಾಡುತ್ತಾರೆ, ಮಹಾಪದವಿಯವರನ್ನು ದೂಷಿಸುತ್ತಾರೆ.


ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.


ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.


ಆತನು ದೀನನನ್ನು ಧೂಳಿಯಿಂದ ಎತ್ತಿ ದರಿದ್ರನನ್ನು ತಿಪ್ಪೆಯಿಂದ ಎಬ್ಬಿಸಿ ಪ್ರಭುಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂವಿುಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.


ಆತನ ತೊಡೆಯ ಮೇಲಣ ವಸ್ತ್ರದಲ್ಲಿ - ರಾಜಾಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.


ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದುಬಂದವನೂ ಭೂರಾಜರ ಒಡೆಯನೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವವನೂ ತನ್ನ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವನೂ ನಮ್ಮನ್ನು ರಾಜ್ಯವನ್ನಾಗಿಯೂ


ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡುಮೃಗಗಳೊಂದಿಗೆ ವಾಸಿಸುವಿ, ದನಗಳಂತೆ ಹುಲ್ಲುಮೇಯುವದೇ ನಿನಗೆ ಗತಿಯಾಗುವದು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬದು ನಿನ್ನ ತಿಳುವಳಿಕೆಗೆ ಬರುವದರೊಳಗೆ ಏಳು ವರುಷ ನಿನಗೆ ಹೀಗೆ ಕಳೆಯುವದು ಎಂದು ಆಕಾಶವಾಣಿಯಾಯಿತು.


ಅವರು ಯಜ್ಞದ ಕುರಿಯಾದಾತನ ಮೇಲೆ ಯುದ್ಧಮಾಡುವರು, ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವದರಿಂದ ಅವರನ್ನು ಜಯಿಸುವನು; ಮತ್ತು ದೇವರು ಕರೆದವರೂ ದೇವರಾದುಕೊಂಡವರೂ ನಂಬಿಗಸ್ತರೂ ಆಗಿರುವ ಆತನ ಕಡೆಯವರು ಆ ಜಯದಲ್ಲಿ ಪಾಲುಗಾರರಾಗುವರು.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸೇವೆಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾವನು ಅಹಂಕಾರದಿಂದ ನಿರಾಕರಿಸುತ್ತಾನೋ ಅವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಾಯೇಲ್ಯರ ಮಧ್ಯದಿಂದ ತೆಗೆದುಹಾಕಬೇಕು.


ಮಗನೇ, ಯೆಹೋವನಿಗೂ ರಾಜನಿಗೂ ಭಯಪಡು; ತಿರುಗಿಬೀಳುವವರ ಗೊಡವೆಗೆ ಹೋಗಬೇಡ.


ಇದು ಅನಿವಿುಷರ ತೀರ್ಮಾನ, ದೇವರ ತೀರ್ಪು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇವಿುಸುತ್ತಾನೆಂಬದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು ಎಂದು ಸಾರಿದನು.


ಅವನ ಮಾತಿಗೆ ಒಪ್ಪಿಕೊಂಡವರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿವಸ ಸುಮಾರು ಮೂರುಸಾವಿರ ಜನರು ಅವರಲ್ಲಿ ಸೇರಿದರು.


ಕೆಟ್ಟತನಕ್ಕೆ ಸೋತು ಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.


ಆದದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮಕವನ್ನು ಎದುರಿಸುತ್ತಾನೆ; ಎದುರಿಸುವವರು ಶಿಕ್ಷೆಗೊಳಗಾಗುವರು.


ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ಕಾಲಕ್ಷೇಪ ಮಾಡುವಂತೆ ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು