Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 13:3 - ಕನ್ನಡ ಸತ್ಯವೇದವು J.V. (BSI)

3 ಕೆಟ್ಟಕೆಲಸ ಮಾಡುವವನಿಗೆ ಅಧಿಪತಿಯಿಂದ ಭಯವಿರುವದೇ ಹೊರತು ಒಳ್ಳೇ ಕೆಲಸ ಮಾಡುವವನಿಗೆ ಭಯವೇನೂ ಇಲ್ಲ. ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೇದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗಳಿಕೆಯುಂಟಾಗುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕೆಟ್ಟಕೆಲಸ ಮಾಡುವವನಿಗೆ ಅಧಿಪತಿಯಿಂದ ಭಯವಿರುವುದೇ ಹೊರತು ಒಳ್ಳೆಕೆಲಸ ಮಾಡುವವನಿಗೆ ಭಯವೇನೂ ಇರುವುದಿಲ್ಲ. ನೀನು ಅಧಿಕಾರಿಗೆ ಭಯಪಡದೇ ಇರಬೇಕೆಂದು ಅಪೇಕ್ಷಿಸುತ್ತೀಯೋ ಒಳ್ಳೆಯದನ್ನು ಮಾಡು. ಆಗ ಆ ಅಧಿಕಾರಿಯೇ ನಿನ್ನನ್ನು ಹೊಗಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕೆಟ್ಟದ್ದನ್ನು ಮಾಡುವವನೇ ಹೊರತು ಒಳ್ಳೆಯದನ್ನು ಮಾಡುವವನು ಅಧಿಕಾರಿಗೆ ಭಯಪಡಬೇಕಾಗಿಲ್ಲ. ಅಧಿಕಾರಿಯ ಮುಂದೆ ನಿರ್ಭಯನಾಗಿರಲು ನಿನಗೆ ಇಷ್ಟವಿದ್ದರೆ ಒಳ್ಳೆಯದನ್ನೇ ಮಾಡುತ್ತಿರು. ಆಗ ಆತನು ನಿನ್ನನ್ನು ಪ್ರಶಂಶಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸರಿಯಾದದ್ದನ್ನು ಮಾಡುವ ಜನರಿಗೆ ಅಧಿಕಾರಿಗಳ ಭಯವಿರುವುದಿಲ್ಲ. ಆದರೆ ಕೆಟ್ಟದ್ದನ್ನು ಮಾಡುವ ಜನರಿಗೆ ಅಧಿಕಾರಿಗಳ ಭಯವಿರುತ್ತದೆ. ನೀವು ಅಧಿಕಾರಿಗಳಿಗೆ ಭಯಪಡದವರಾಗಿರಬೇಕೆಂದು ಅಪೇಕ್ಷಿಸುತ್ತೀರೋ? ಹಾಗಾದರೆ ನೀವು ಸರಿಯಾದದ್ದನ್ನೇ ಮಾಡಿರಿ. ಆಗ ಅಧಿಕಾರಿಗಳು ನಿಮ್ಮನ್ನು ಹೊಗಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಕೆಟ್ಟದ್ದನ್ನು ಮಾಡುವವನಿಗೆ ಅಧಿಪತಿಗಳ ಭಯವಿರುವುದೇ ಹೊರತು, ಒಳ್ಳೆಯದನ್ನು ಮಾಡುವವನಿಗೆ ಅಲ್ಲ. ಅಧಿಕಾರಿಗಳಿಗೆ ಭಯಪಡಬಾರದೇ? ಒಳ್ಳೆಯದನ್ನು ಮಾಡು. ಅದರಿಂದ ನಿನಗೆ ಪ್ರಶಂಸೆ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ವಾಯ್ಟ್ ಕರ್‍ತಲೆ ಅದಿಕಾರ್‍ಯಾಕ್ನಿ ಭಿಂಯಾತ್ಯಾತ್, ಬರೆ ಕರ್‍ತಲೆ ಭಿಂಯ್‍ನ್ಯಾತ್. ಅದಿಕಾರ್‍ಯಾಕ್ನಿ ಭಿಂಯ್‍ನಸ್ತಾನಾ ರಾವ್ಚೆ ಮನುನ್ ತುಮ್ಚ್ಯಾ ಮನಾತ್ ಹಾಯ್ ಕಾಯ್? ತಸೆ ಹೊಲ್ಯಾರ್ ಖಲೆ ಖರೆ ಹಾಯ್ ತೆಚ್ ಕರಾ. ತನ್ನಾ ತೊ ಅದಿಕಾರಿ ತುಕಾ ಶಾಭಾಸ್ಕಿ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 13:3
9 ತಿಳಿವುಗಳ ಹೋಲಿಕೆ  

ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, ಅವನನ್ನು ಕೆಣಕುವವನು ತನಗೇ ಕೆಡುಕುಮಾಡಿಕೊಳ್ಳುವನು.


ಜಾಣನಾದ ಸೇವಕನಿಗೆ ರಾಜನ ಕೃಪೆ; ಮಾನಗೇಡಿಗೆ ರಾಜನ ರೌದ್ರ.


ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.


ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ.


ಆದದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮಕವನ್ನು ಎದುರಿಸುತ್ತಾನೆ; ಎದುರಿಸುವವರು ಶಿಕ್ಷೆಗೊಳಗಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು