Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 13:6 - ಕನ್ನಡ ಸತ್ಯವೇದವು J.V. (BSI)

6 ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಕಂದಾಯ ಎತ್ತುವವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕೆಂದರೆ ಕಂದಾಯ ಸಂಗ್ರಹಿಸುವವರು ದೇವರ ಸೇವಕರಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀವು ಕಂದಾಯವನ್ನು ಕಟ್ಟುತ್ತಿರುವುದೂ ಈ ಕಾರಣದಿಂದಲೇ. ಅಧಿಕಾರಿಗಳು ದೇವರ ದಾಸರು. ಅವರು ತಮ್ಮ ಪ್ರಸ್ತುತ ಕಾರ್ಯಗಳನ್ನು ನಿರ್ವಹಿಸುವಾಗ ದೇವರ ಸೇವೆಯನ್ನು ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಈ ಕಾರಣದಿಂದಲೇ ನೀವು ತೆರಿಗೆಯನ್ನು ಸಹ ಕೊಡುತ್ತೀರಿ. ಆ ಅಧಿಕಾರಿಗಳು ದೇವರಿಗೋಸ್ಕರ ಕೆಲಸ ಮಾಡುವವರಾಗಿದ್ದಾರೆ; ತಮ್ಮ ಸಮಯವನ್ನೆಲ್ಲಾ ಆಡಳಿತ ಮಾಡಲು ಉಪಯೋಗಿಸುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದರ ನಿಮಿತ್ತವಾಗಿಯೇ ನೀವು ತೆರಿಗೆಯನ್ನು ಪಾವತಿ ಮಾಡುತ್ತೀರಿ. ಏಕೆಂದರೆ, ಅಧಿಕಾರಿಗಳು ಇದರಲ್ಲಿಯೇ ನಿರತರಾಗಿರುವ ದೇವರ ಸೇವಕರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಹೆಚ್ಯಾಸಾಟ್ನಿ ತುಮಿ ತೆರ್‍ಗಿ ಭರುಕ್ ಪಾಜೆ, ಕಶ್ಯಾಕ್ ಮಟ್ಲ್ಯಾರ್ ತೆ ಅದಿಕಾರಿ ದೆವಾಚೆ ಸೆವಕ್ ಹೊವ್ನ್ ಹಾತ್, ವಸುಲಿ ಕರ್‍ತಲೆ ಕಾಮ್ ಕರುನ್, ತೆನಿ ದೆವಾಚಿ ಸೆವಾ ಕರುಲ್ಯಾತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 13:6
18 ತಿಳಿವುಗಳ ಹೋಲಿಕೆ  

ಇವನು ತಾನೇ ಕ್ರಿಸ್ತನೆಂಬ ಒಬ್ಬ ಅರಸನಾಗಿದ್ದೇನೆಂದು ಹೇಳುತ್ತಾ ಕೈಸರನಿಗೆ ತೆರಿಗೆಕೊಡಬಾರದೆಂದು ಬೋಧಿಸುತ್ತಾ ನಮ್ಮ ದೇಶದವರ ಮನಸ್ಸು ಕೆಡಿಸುವದನ್ನು ನಾವು ಕಂಡೆವು ಎಂಬದಾಗಿ ಆತನ ಮೇಲೆ ದೂರು ಹೇಳುವದಕ್ಕೆ ತೊಡಗಿದರು.


ದಾವೀದನು ಇಸ್ರಾಯೇಲ್ಯರೆಲ್ಲರ ಅರಸನಾಗಿ ಎಲ್ಲಾ ಪ್ರಜೆಗಳಿಗೂ ಧರ್ಮತಪ್ಪದೆ ನ್ಯಾಯತೀರಿಸುತ್ತಿದ್ದನು.


ಬೋಧಿಸುವವನು ಬೋಧಿಸುವದರಲ್ಲಿಯೂ ಬುದ್ಧಿ ಹೇಳುವವನು ಬುದ್ಧಿ ಹೇಳುವದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ಹಿರೀತನ ನಡಿಸುವವನು ಆಸಕ್ತಿಯಿಂದ ನಡಿಸಲಿ. ಕಷ್ಟದಲ್ಲಿರುವವರಿಗೆ ಉಪಕಾರ ಮಾಡುವವನು ಸಂತೋಷವಾಗಿ ಮಾಡಲಿ.


ಮತ್ತು ಕೆಲವರು - ಸರಕಾರಕ್ಕೆ ಕಂದಾಯಕೊಡುವದಕ್ಕಾಗಿ ನಾವು ನಮ್ಮ ಹೊಲ ತೋಟಗಳ ಮೇಲೆ ಸಾಲ ತೆಗೆದುಕೊಳ್ಳಬೇಕಾಯಿತು;


ಆ ದೇವಾಲಯವನ್ನು ಕಟ್ಟುವದಕ್ಕಾಗಿ ನೀವು ಯೆಹೂದ್ಯರ ಹಿರಿಯರಿಗೆ ರಾಜರ ಸೊತ್ತಿನಿಂದ ಅಂದರೆ ಹೊಳೆಯಾಚೆಯ ಪ್ರಾಂತಗಳ ಕಪ್ಪದಿಂದ ತಡಮಾಡದೆ ಎಲ್ಲಾ ವೆಚ್ಚವನ್ನು ಕೊಡಬೇಕೆಂಬದಾಗಿಯೂ


ಇದ್ದದ್ದಲ್ಲದೆ ಯೆರೂಸಲೇವಿುನಲ್ಲಿ ಬಲಿಷ್ಠ ರಾಜರು ಆಳುತ್ತಾ ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರ ನಡಿಸುತ್ತಾ ಕಪ್ಪ ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂತು.


ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಕಟ್ಟುವದು ಕೊನೆಗಾಣುವದಾದರೆ ಅವರು ಕಪ್ಪ ತೆರಿಗೆ ಸುಂಕಗಳನ್ನು ಕೊಡಲಿಕ್ಕಿಲ್ಲ. ಮತ್ತು ಕಡೆಯಲ್ಲಿ ಅರಸರಿಗೆ ನಷ್ಟವುಂಟಾಗುವದೆಂದು ಖಾವಂದರಿಗೆ ತಿಳಿದಿರಲಿ.


ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದದೆಜೆರನನ್ನು ರಕ್ಷಿಸಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಹತಿಸಿದನು.


ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿಗೆ ನ್ಯಾಯವಾಗಿ ತೋರುವದರಿಂದಲೂ ಅವನಿಗೆ ಅಧೀನನಾಗುವದು ಅವಶ್ಯ.


ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆಯನ್ನು ಸಲ್ಲಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು