ರೋಮಾಪುರದವರಿಗೆ 13:9 - ಕನ್ನಡ ಸತ್ಯವೇದವು J.V. (BSI)9 ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು - ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹೇಗೆಂದರೆ “ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು.” ಈ ಮೊದಲಾದ ಎಲ್ಲಾ ಕಟ್ಟಳೆಗಳು “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ವ್ಯಭಿಚಾರ ಮಾಡಬೇಡ, ಕೊಲಬೇಡ, ಕಳಬೇಡ, ದುರಾಶೆ ಪಡಬೇಡ,” - ಈ ಮುಂತಾದ ಆಜ್ಞೆಗಳೆಲ್ಲವೂ “ನೀನು ನಿನ್ನನ್ನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನೂ ಪ್ರೀತಿಸು,” ಎಂಬ ಒಂದೇ ಆಜ್ಞೆಯಲ್ಲಿ ಅಡಗಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಏಕೆಂದರೆ, “ವ್ಯಭಿಚಾರ ಮಾಡಕೂಡದು; ಕೊಲೆ ಮಾಡಕೂಡದು; ಕದಿಯಕೂಡದು; ಇತರರಿಗೆ ಸೇರಿದ ವಸ್ತುಗಳನ್ನು ಅಪೇಕ್ಷಿಸಕೂಡದು” ಎಂದು ಧರ್ಮಶಾಸ್ತ್ರವು ಹೇಳುತ್ತದೆ. ಈ ಆಜ್ಞೆಗಳನ್ನು ಮೊದಲುಗೊಂಡು ಉಳಿದೆಲ್ಲಾ ಆಜ್ಞೆಗಳು, “ನೀನು ನಿನ್ನನ್ನು ಪ್ರೀತಿಸುವಂತೆ ಇತರ ಜನರನ್ನೂ ಪ್ರೀತಿಸು” ಎಂಬ ಒಂದೇ ಆಜ್ಞೆಯಲ್ಲಿ ಅಡಕವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಏಕೆಂದರೆ, “ವ್ಯಭಿಚಾರ ಮಾಡಬೇಡ, ಕೊಲೆ ಮಾಡಬೇಡ, ಕದಿಯಬೇಡ, ದುರಾಶೆ ಪಡಬೇಡ,” ಎನ್ನುವ ಹಾಗೂ ಇತರ ಯಾವ ಆಜ್ಞೆಗಳೇ ಇರಲಿ ಅವೆಲ್ಲವೂ, “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು,” ಎಂಬ ಒಂದೇ ಮಾತಿನಲ್ಲಿವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 “ವೆಭಿಚಾರ್ ಕರುನಕೊ, ಜಿವಾನಿ ಮಾರುನಕೊ, ಚೊರುನಕೊ, ದುಸ್ರ್ಯಾಂಚ್ಯಾ ಸಾಮಾನಾಂಚಿ ಆಶಾ ಕರುನಕೊ”, ಹೆ ಅನಿ ದುಸ್ರೆ ಕಸ್ಲೆಬಿ ಜೆ ಖಾಯ್ದೆ ಹಾತ್ ತೆ “ತುಜೊ ತಿಯಾ ಪ್ರೆಮ್ ಕರ್‍ತೆ ತಸೊ ತುಜ್ಯಾ ಸೆಜಾರ್‍ಯಾಚೊಬಿ ಪ್ರೆಮ್ ಕರ್” ಮನ್ತಲ್ಯಾ ಹ್ಯಾ ಹುಕುಮಾತ್ ಮಿಳಲ್ಲೆ ಹಾತ್ . ಅಧ್ಯಾಯವನ್ನು ನೋಡಿ |