ರೋಮಾಪುರದವರಿಗೆ 14:10 - ಕನ್ನಡ ಸತ್ಯವೇದವು J.V. (BSI)10 ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವದೇನು? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವುದೇನು? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಹೀಗಿರುವಲ್ಲಿ ಸಸ್ಯಾಹಾರಿಯೇ, ನೀನು ನಿನ್ನ ಸಹೋದರನನ್ನು ದೋಷಿಯೆಂದು ತೀರ್ಪಿಡುವುದೇಕೆ? ಮಾಂಸಹಾರಿಯೇ, ನಿನ್ನ ಸಹೋದರನನ್ನು ಹೀನೈಸುವುದೇಕೆ? ನಾವೆಲ್ಲರೂ ದೇವರ ನ್ಯಾಯಸ್ಥಾನದ ಮುಂದೆ ನಿಲ್ಲಬೇಕಲ್ಲವೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಹೀಗಿರಲು, ಕ್ರಿಸ್ತನಲ್ಲಿ ನಿನ್ನ ಸಹೋದರನಾಗಿರುವವನನ್ನು ನೀನು ಟೀಕಿಸುವುದೇಕೆ? ನೀನು ನಿನ್ನ ಸಹೋದರಿನಿಗಿಂತಲೂ ಉತ್ತಮನೆಂದು ಯೋಚಿಸುವುದೇಕೆ? ನಾವೆಲ್ಲರೂ ದೇವರ ಮುಂದೆ ನಿಂತುಕೊಳ್ಳುವೆವು, ಆಗ ಆತನು ನಮ್ಮೆಲ್ಲರಿಗೂ ತೀರ್ಪು ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಹೀಗಿರುವಾಗ, ನೀನು ಏಕೆ ನಿನ್ನ ಸಹೋದರರಿಗೆ ತೀರ್ಪುಮಾಡುತ್ತೀ? ಅಥವಾ ನಿನ್ನ ಸಹೋದರರನ್ನು ಏಕೆ ಹೀನಾಯವಾಗಿ ಕಾಣುತ್ತೀ? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲುವೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತಸೆಜಾಲ್ಯಾರ್, ಕಾಯ್ ಮನುನ್ ಘೆವ್ನ್ ತಿಯಾ ತುಜ್ಯಾ ಭಾವಾಚಿ ನಾತರ್ ಭೆನಿಚಿ ಝಡ್ತಿ ಕರ್ತೆಯ್? ನಾಹೊಲ್ಯಾರ್ ಸಗ್ಳೆಬಿ ಖಾತಲೊ ತಿಯಾ ಭಾವಾಕ್ ನಾತರ್ ಭೆನಿಕ್ ಖಾಲ್ತಿ ಕರುನ್ ಬಗ್ತೆಯ್ ? ಅಮ್ಕಾ ಸಗ್ಳ್ಯಾಕ್ನಿಬಿ ದೆವಾಚ್ಯಾ ಇದ್ರಾಕ್ ಝಡ್ತಿಕ್ ಇಬೆ ರ್‍ಹಾವ್ಕ್ ಪಾಜೆ. ಅಧ್ಯಾಯವನ್ನು ನೋಡಿ |