ರೋಮಾಪುರದವರಿಗೆ 14:11 - ಕನ್ನಡ ಸತ್ಯವೇದವು J.V. (BSI)11 ನನ್ನ ಜೀವದಾಣೆ, ಎಲ್ಲರೂ ನನಗೆ ಅಡ್ಡ ಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆ ಮಾಡುವರು ಎಂಬದಾಗಿ ಕರ್ತನು ಹೇಳಿದ್ದಾನೆ ಎಂದು ಬರೆದದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಪವಿತ್ರ ಶಾಸ್ತ್ರದಲ್ಲಿ: “ನಾನು ಜೀವಿಸುವುದರಿಂದ ಪ್ರತಿಯೊಬ್ಬನೂ ನನ್ನ ಮುಂದೆ ಮೊಣಕಾಲೂರುವನು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಆರಿಕೆಮಾಡುವರು ಎಂದು ಕರ್ತನು ಹೇಳುತ್ತಾನೆ” ಎಂದು ಬರೆದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಪವಿತ್ರಗ್ರಂಥದಲ್ಲಿ : ಎಲ್ಲರೂ ನನಗೆ ಸಾಷ್ಟಾಂಗವೆರಗುವರು ಎಲ್ಲರೂ ನನ್ನನ್ನು ದೇವರೆಂದು ನಿವೇದಿಸುವರು ಇದಕ್ಕೆ ಜೀವಸ್ವರೂಪನಾದ ನಾನೇ ಸಾಕ್ಷಿ,” ಎಂದು ಸರ್ವೇಶ್ವರಸ್ವಾಮಿ ಹೇಳಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಹೌದು, ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “‘ಪ್ರತಿಯೊಬ್ಬನೂ ನನಗೆ ಅಡ್ಡಬೀಳುವನು. ಪ್ರತಿಯೊಬ್ಬನೂ ನನ್ನನ್ನು ದೇವರೆಂದು ಹೇಳುವನು. ನನ್ನ ಜೀವದಾಣೆಯಾಗಿಯೂ ಈ ಸಂಗತಿಗಳು ನೆರವೇರುತ್ತವೆ’ ಎನ್ನುತ್ತಾನೆ ಪ್ರಭುವು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ ‘ನಾನು ಜೀವಿಸುವುದರಿಂದ, ಪ್ರತಿಯೊಬ್ಬರೂ ನನ್ನ ಮುಂದೆ ಮೊಣಕಾಲೂರುವರು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಅರಿಕೆ ಮಾಡುವುದು,’ ಎಂದು ಕರ್ತನು ಹೇಳುತ್ತಾರೆ.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಕಶ್ಯಾಕ್ ಮಟ್ಲ್ಯಾರ್, ಪವಿತ್ರ್ ಪುಸ್ತಕ್ ಮನ್ತಾ, “ಸರ್ವೆಸ್ವರ್ ದೆವ್ ಮನ್ತಾ, ಮಿಯಾ ಖರೆಚ್ ಝಿತ್ತೊ ದೆವ್, ಸಗ್ಳೆ ಜಾನಾ ಮಾಜ್ಯಾ ಇದ್ರಾಕ್ ಢಿಂಬಿಯಾ ಘಾಲ್ತ್ಯಾತ್. ಅನಿ ಸಗ್ಳಿ ಲೊಕಾ ಮಿಯಾ ದೆವ್ ಮನುನ್ ಮಾಜಿ ಸುತ್ತಿ ಕರ್‍ತಾ”. ಅಧ್ಯಾಯವನ್ನು ನೋಡಿ |
ಇಸ್ರಾಯೇಲ್ಯರ ದೇವರಾದ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಹೀಗಿರಲು, ನನ್ನ ಜೀವದಾಣೆ, ಸೊದೋವಿುನ ಗತಿಯೇ ಮೋವಾಬಿಗೂ ಆಗುವದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವದು; ಆ ಪ್ರಾಂತಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವವು; ನನ್ನ ಪ್ರಜೆಯಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು, ಅವು ನನ್ನ ಜನಶೇಷದವರಿಗೆ ಸ್ವಾಸ್ತ್ಯವಾಗುವವು.