ರೋಮಾಪುರದವರಿಗೆ 14:14 - ಕನ್ನಡ ಸತ್ಯವೇದವು J.V. (BSI)14 ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಬಲ್ಲೆನು, ಮತ್ತು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ ಯಾವುದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವಾಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಯಾವ ಪದಾರ್ಥವು ಸ್ವತಃ ಅಶುದ್ಧವಲ್ಲವೆಂದು ಪ್ರಭುಯೇಸುವಿನಲ್ಲಿ ನಾನು ಖಚಿತವಾಗಿ ಹೇಳಬಲ್ಲೆ. ಆದರೆ, ಒಂದು ಪದಾರ್ಥವನ್ನು ಅಶುದ್ಧವೆಂದು ಯಾರಾದರೂ ಭಾವಿಸಿದರೆ ಅದು ಅವನಿಗೆ ಅಶುದ್ಧವೇ ಆಗುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾನು ಪ್ರಭುವಾದ ಯೇಸುವಿನಲ್ಲಿದ್ದೇನೆ. ಯಾವ ಆಹಾರಪದಾರ್ಥವನ್ನೇ ಆಗಲಿ ತಿನ್ನುವುದು ತಪ್ಪಲ್ಲವೆಂದು ನನಗೆ ಗೊತ್ತಿದೆ. ಒಬ್ಬನು ಯಾವುದಾದರೂ ಆಹಾರಪದಾರ್ಥವನ್ನು ತಿನ್ನುವುದು ತಪ್ಪೆಂದು ನಂಬಿದರೆ, ಆ ಆಹಾರಪದಾರ್ಥವು ಅವನಿಗೆ ಅಶುದ್ಧವಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯಾವುದೇ ಪದಾರ್ಥವು ತನ್ನಷ್ಟಕ್ಕೆ ಅಶುದ್ಧವಲ್ಲ ಎಂದು ನಾನು ಕರ್ತ ಆಗಿರುವ ಯೇಸುವಿನಲ್ಲಿ ನಿಶ್ಚಯವಾಗಿ ಬಲ್ಲೆನು. ಆದರೆ ಯಾರಾದರೂ ಅಶುದ್ಧವೆಂದು ಪರಿಗಣಿಸಿದರೆ ಅದು ಅವರಿಗೆ ಅಶುದ್ಧವಾಗಿರುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಧನಿಯಾ ಜೆಜು ಕ್ರಿಸ್ತಾಚೊ ಮನ್ ಮಾಕಾ ಗೊತ್ತ್ ಹೊತ್ತ್ಯಾ ಪರ್‍ಕಾರ್, ಖಲಿಬಿ ಖಾತಲಿ ಜಿನ್ಸಾ ಹೊಂವ್ದಿತ್ ಬುರ್ಶಿ ನ್ಹಯ್ ಮನುನ್ ಮಾಕಾ ಗೊತ್ತ್ ಹಾಯ್; ಖರೆ ಕೊನ್‍ಬಿ ಎಕ್ಲೊ ಅಪ್ನಿ ತೆ ಜಿನಸ್ ಬುರ್ಶೆ ಮನುನ್ ಚಿಂತಾ, ಹೊಲ್ಯಾರ್ ತೆಕಾ ತೆ ಬುರ್ಶೆಚ್. ಅಧ್ಯಾಯವನ್ನು ನೋಡಿ |
ಫರಿಸಾಯರೂ ಯೆಹೂದ್ಯರೆಲ್ಲರೂ ಹಿರಿಯರಿಂದ ಬಂದ ಸಂಪ್ರದಾಯವನ್ನು ಹಿಡಿದು ತಮ್ಮ ಕೈಗಳನ್ನು ಚೆನ್ನಾಗಿ ತೊಳಕೊಳ್ಳದೆ ಆಹಾರ ತೆಗೆದುಕೊಳ್ಳುವದಿಲ್ಲ; ಮತ್ತು ಪೇಟೆಗೆ ಹೋಗಿ ಬಂದರೆ ನೀರನ್ನು ಪ್ರೋಕ್ಷಿಸಿಕೊಳ್ಳದೆ ಆಹಾರ ತೆಗೆದುಕೊಳ್ಳುವದಿಲ್ಲ; ಇದಲ್ಲದೆ ಅವರಲ್ಲಿ ತಂಬಿಗೆ ಬಟ್ಟಲು ತಪ್ಪಲೆಗಳನ್ನು ಬೆಳಗಿ ತೊಳೆಯುವದೇ ಮೊದಲಾದ ಅನೇಕಾಚಾರಗಳನ್ನು ನಡಿಸುವ ನೇಮಕವುಂಟು. ಆತನ ಶಿಷ್ಯರಲ್ಲಿ ಕೆಲವರು ಮೈಲಿಗೆಯ ಕೈಯಿಂದ, ಅಂದರೆ ಕೈತೊಳಕೊಳ್ಳದೆ ಆಹಾರ ತೆಗೆದುಕೊಳ್ಳುವದನ್ನು ಆ ಫರಿಸಾಯರೂ ಶಾಸ್ತ್ರಿಗಳೂ ಕಂಡು