Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:15 - ಕನ್ನಡ ಸತ್ಯವೇದವು J.V. (BSI)

15 ನೀನು ತೆಗೆದುಕೊಳ್ಳುವ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ನೀನು ಪ್ರೀತಿಗೆ ತಕ್ಕಂತೆ ಇನ್ನು ನಡೆಯುವವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಪ್ರಾಣಕೊಟ್ಟನೋ ಅವನನ್ನು ನಿನಗೆ ಇಷ್ಟವಾದ ಆಹಾರದ ನಿವಿುತ್ತ ಕೆಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀನು ತೆಗೆದುಕೊಳ್ಳುವ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವುಂಟಾದರೆ ನೀನು ಪ್ರೀತಿಗೆ ತಕ್ಕಂತೆ ನಡೆಯುವವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಪ್ರಾಣಕೊಟ್ಟನೋ ಅವನನ್ನು ನಿನಗೆ ಇಷ್ಟವಾದ ಆಹಾರದ ನಿಮಿತ್ತ ಕೆಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನೀನು ಏನನ್ನಾದರೂ ತಿನ್ನುವುದರಿಂದ ನಿನ್ನ ಸಹೋದರನ ಮನಸ್ಸಿಗೆ ನೋವುಂಟಾಗುವುದಾದರೆ ನಿನ್ನ ಆ ವರ್ತನೆ ಪ್ರೀತಿಪ್ರೇರಿತವಾದುದಲ್ಲ. ಯಾರಿಗೋಸ್ಕರ ಕ್ರಿಸ್ತಯೇಸು ಪ್ರಾಣಾರ್ಪಣೆ ಮಾಡಿದರೋ ಅಂಥವನಿಗೆ ನೀನು ತಿನ್ನುವ ಆಹಾರದಿಂದಾಗಿ ನಾಶವನ್ನು ತರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೀನು ತಿನ್ನುವ ಒಂದು ಆಹಾರಪದಾರ್ಥದಿಂದ ನಿನ್ನ ಸಹೋದರನ ನಂಬಿಕೆಗೆ ನೀನು ತೊಂದರೆಯನ್ನು ಮಾಡಿದರೆ, ನೀನು ಪ್ರೀತಿಯ ಮಾರ್ಗವನ್ನು ನಿಜವಾಗಿಯೂ ಅನುಸರಿಸುತ್ತಿಲ್ಲ. ಒಬ್ಬನು ಯಾವುದಾದರೂ ಆಹಾರಪದಾರ್ಥವನ್ನು ತಿನ್ನುವುದು ತಪ್ಪೆಂದು ಭಾವಿಸಿಕೊಂಡಿರುವಾಗ, ನೀನು ಆ ಪದಾರ್ಥವನ್ನು ತಿಂದರೆ ಅವನ ನಂಬಿಕೆ ಹಾಳಾಗುವುದು. ಆದ್ದರಿಂದ ನೀನು ಹಾಗೆ ಮಾಡಕೂಡದು. ಕ್ರಿಸ್ತನು ಆ ವ್ಯಕ್ತಿಗಾಗಿಯೂ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀವು ಆಹಾರದಿಂದ ನಿಮ್ಮ ಸಹೋದರರನ್ನು ದುಃಖ ಪಡಿಸುವುದಾದರೆ ನೀವು ಪ್ರೀತಿಯಿಂದ ನಡೆದುಕೊಳ್ಳುವುದಿಲ್ಲ. ನೀವು ತಿನ್ನುವುದರ ಮೂಲಕ ಕ್ರಿಸ್ತನು ಯಾವನಿಗೋಸ್ಕರವಾಗಿ ಸತ್ತರೋ ಅಂಥವರನ್ನು ನಾಶಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತಿಯಾ ಜೆ ಕಾಯ್ ಖಾತೆ ತೆಚೆಸಾಟ್ನಿಚ್ ತುಜ್ಯಾ ಭಾವಾಚ್ಯಾ ಮನಾಕ್ ತಿಯಾ ಬೆಜಾರ್ ಕರ್‍ಲೆ ತರ್, ತಿಯಾ ಅನಿ ಲೈ ಎಳ್ ಪ್ರೆಮಾನಿ ರ್‍ಹಾತಲ್ಯಾತ್‍ ರ್‍ಹಾಯ್ನೆಯ್, ತೆಚೆಸಾಟ್ನಿ ಕೊನಾಚ್ಯಾಸಾಟ್ನಿ ಕ್ರಿಸ್ತ್ ಮರ್‍ಲಾ ತೆಚ್ಯಾ ನಾಸಾಕ್ ತುಜೆ ಜೆವಾನ್ ಕಾರನ್ ಹೊವ್ಚೆ ನ್ಹಯ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:15
13 ತಿಳಿವುಗಳ ಹೋಲಿಕೆ  

ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನಸ್ವಭಾವಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.


ಕ್ರಿಸ್ತನು ನಿಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.


ವಿಗ್ರಹಕ್ಕೆ ನೈವೇದ್ಯ ಮಾಡಿದ ಪದಾರ್ಥಗಳ ವಿಷಯದಲ್ಲಿ ಈಗ ನೋಡೋಣ. ನಮ್ಮೆಲ್ಲರಿಗೆ ಜ್ಞಾನವುಂಟೆಂದು ಬಲ್ಲೆವು. ಜ್ಞಾನವು ಉಬ್ಬಿಸುತ್ತದೆ, ಪ್ರೀತಿಯು ಭಕ್ತಿವೃದ್ಧಿಯನ್ನುಂಟುಮಾಡುತ್ತದೆ.


ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹಿತವನ್ನೂ ಭಕ್ತಿವೃದ್ಧಿಯನ್ನೂ ಅಪೇಕ್ಷಿಸುವವನಾಗಿ ಅವನ ಸುಖವನ್ನು ನೋಡಿಕೊಳ್ಳಲಿ.


ದೇವರು ಕಟ್ಟಿದ್ದನ್ನು ನೀನು ಆಹಾರದ ನಿವಿುತ್ತವಾಗಿ ಕೆಡವಬೇಡ. ಎಲ್ಲಾ ಪದಾರ್ಥಗಳೂ ಶುದ್ಧವೇ; ಆದರೆ ತಿಂದು ಮತ್ತೊಬ್ಬರಿಗೆ ವಿಘ್ನವನ್ನುಂಟುಮಾಡುವದು ಕೆಟ್ಟದ್ದು.


ಆತನು ನಮ್ಮ ಪಾಪಗಳನ್ನು ನಿವಾರಣಮಾಡುವ ಯಜ್ಞವಾಗಿದ್ದಾನೆ; ನಮ್ಮ ಪಾಪಗಳನ್ನು ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನು ಸಹ ನಿವಾರಣಮಾಡುತ್ತಾನೆ.


ನಾನು ಮನುಷ್ಯರ ಭಾಷೆಗಳನ್ನೂ ದೇವದೂತರ ಭಾಷೆಗಳನ್ನೂ ಆಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿಸುವ ತಾಳವೂ ಆಗಿದ್ದೇನೆ.


ಪ್ರೀತಿಯು ಮತ್ತೊಬ್ಬರಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿಯಿಂದಲೇ ಧರ್ಮಪ್ರಮಾಣವು ನೆರವೇರುತ್ತದೆ.


ನಾನು ವ್ಯಥೆಗೊಳಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದರಿಂದಲೂ ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದರಿಂದಲೂ


ಆದರೆ ಇಸ್ರಾಯೇಲ್ ಜನರಲ್ಲಿ ಸುಳ್ಳುಪ್ರವಾದಿಗಳೂ ಎದ್ದರಲ್ಲಾ; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ನಾಶಕರವಾದ ಮತಭೇದಗಳನ್ನು ಕಳ್ಳತನದಿಂದ ಹುಟ್ಟಿಸುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನು ಕೂಡ ತಾವು ಅರಿಯೆವು ಎಂದು ಹೇಳುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶವನ್ನು ಬರಮಾಡಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು