Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:18 - ಕನ್ನಡ ಸತ್ಯವೇದವು J.V. (BSI)

18 ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರನ್ನು ಮೆಚ್ಚಿಸುವವನೂ, ಮನುಷ್ಯರಿಗೆ ಒಳ್ಳೆಯದನ್ನು ಮಾಡುವವನೂ ಆಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಹೀಗೆ ಕ್ರಿಸ್ತಯೇಸುವಿಗೆ ಸೇವೆಮಾಡುವವನು, ದೇವರಿಂದ ಮೆಚ್ಚುಗೆಯನ್ನು ಮತ್ತು ಮನುಷ್ಯರಿಂದ ಮಾನ್ಯತೆಯನ್ನು ಪಡೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಈ ರೀತಿಯಲ್ಲಿ ಕ್ರಿಸ್ತನ ಸೇವೆಮಾಡುವವನು ದೇವರನ್ನು ಮೆಚ್ಚಿಸುವವನಾಗಿದ್ದಾನೆ. ಜನರೂ ಅವನನ್ನು ಸ್ವೀಕರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಈ ರೀತಿಯಲ್ಲಿ ಕ್ರಿಸ್ತನಿಗೆ ಸೇವೆಮಾಡುವವರು ದೇವರಿಗೆ ಮೆಚ್ಚುಗೆಯಾದವರೂ ಜನರಿಂದ ಅನುಮೋದನೆ ಹೊಂದಿದವರೂ ಆಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಅಶೆ ಕ್ರಿಸ್ತಾಚಿ ಸೆವಾ ಕರಲ್ಲೆ ತುಮಿ ದೆವಾಕ್ ಮಾನಿ ಸರ್ಕೆ ಕರ್‍ತ್ಯಾಶಿ, ಅನಿ ಲೊಕಾಂಚ್ಯಾ ಮದ್ದಿ ನಾವ್ ಕಮ್ವುನ್ ಘೆತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:18
29 ತಿಳಿವುಗಳ ಹೋಲಿಕೆ  

ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವವಾದದ್ದನ್ನು ಯೋಚನೆಗೆ ತಂದುಕೊಳ್ಳುವವರಾಗಿದ್ದೇವೆ.


ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದರಿಂದೇನು ಕೀರ್ತಿ? ಆದರೆ ಒಳ್ಳೇದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮ ಸಂಬಂಧವಾದ ಮಂದಿರವಾಗಲಿಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಯಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕವರ್ಗದವರಾಗಿದ್ದೀರಿ.


ಕರ್ತನ ಭಯವು ನಮಗಿರುವದರಿಂದ ನಾವು ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಯಥಾರ್ಥರೆಂಬದು ದೇವರಿಗೆ ಗೊತ್ತುಂಟು; ನಿಮ್ಮ ಮನಸ್ಸಿಗೆ ಕೂಡ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.


ಒಳ್ಳೇ ಮನಸ್ಸಾಕ್ಷಿಯುಳ್ಳವರಾಗಿರಿ; ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯನ್ನು ಕುರಿತು ಬೈಯುವವರು ನಿಮ್ಮನ್ನು ನಿಂದಿಸುವದಕ್ಕೆ ನಾಚಿಕೆಪಡುವರು.


ಹಾಗೆ ಮಾಡುವದು ನಮ್ಮ ರಕ್ಷಕನಾದ ದೇವರ ಸನ್ನಿಧಿಯಲ್ಲಿ ಮೆಚ್ಚಿಕೆಯಾಗಿಯೂ ಯೋಗ್ಯವಾಗಿಯೂ ಅದೆ.


ಕರ್ತನಿಂದ ಪರಲೋಕ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವೆವೆಂದು ತಿಳಿದಿದ್ದೀರಲ್ಲಾ. ನೀವು ಕರ್ತನಾದ ಕ್ರಿಸ್ತನಿಗೇ ದಾಸರಾಗಿದ್ದೀರಿ.


ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.


ನಾಚಿಕೆಯನ್ನು ಹುಟ್ಟಿಸುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಕೆಡಿಸದೆ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಸಜ್ಜನರೆಂದು ಪ್ರತಿಮನುಷ್ಯನ ಮನಸ್ಸು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ಯಾವನು ಮತ್ತೊಬ್ಬನ ದಾಸನಾಗಿದ್ದು ಕರ್ತನ ಸೇವೆಗೆ ಕರೆಯಲ್ಪಟ್ಟಿರುವನೋ ಅವನು ಕರ್ತನ ಮೂಲಕ ಬಿಡುಗಡೆ ಹೊಂದಿರುವ ಸ್ವತಂತ್ರನು. ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.


ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೋಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ಕರ್ತನು ಶಕ್ತನಾಗಿದ್ದಾನೆ.


ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರ್ರಿ.


ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧರಾಗುವದೇ ನಿಮಗೆ ಫಲ; ಕಡೆಗೆ ದೊರೆಯುವಂಥದು ನಿತ್ಯಜೀವ.


ದೇವರು ಪಕ್ಷಪಾತಿಯಲ್ಲ, ಯಾವ ಜನರಲ್ಲಿಯಾದರೂ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.


ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ಹಿಂದೆ ಬರಲಿ; ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನು ಸಹ ಇರುವನು. ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ತಂದೆಯು ಅವನಿಗೆ ಬಹುಮಾನ ಮಾಡುವನು.


ಒಬ್ಬ ಮನುಷ್ಯಸು ತನ್ನ ಮನೆಯನ್ನು ಬಿಟ್ಟು ಬೇರೊಂದು ದೇಶಕ್ಕೆ ಹೋಗುವಾಗ ತನ್ನ ಆಳುಗಳಿಗೆ ಮನೇ ಆಡಳಿತವನ್ನು ಒಪ್ಪಿಸಿಕೊಟ್ಟು ಒಬ್ಬೊಬ್ಬನಿಗೆ ಅವನವನ ಕೆಲಸವನ್ನು ನೇವಿುಸಿ ಬಾಗಿಲುಕಾಯುವವನನ್ನು ಕರೆದು - ನೀನು ಎಚ್ಚರವಾಗಿರಬೇಕೆಂದು ಅಪ್ಪಣೆ ಕೊಡುವ ಪ್ರಕಾರ [ನಾನು ನಿಮಗೆ ಅಪ್ಪಣೆ ಕೊಡುತ್ತೇನೆ].


ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು; ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ; ದೇವರು ನಿನ್ನ ನಡತೆಗೆ ಈಗ ಮೆಚ್ಚಿದನಷ್ಟೆ.


ಒಳ್ಳೇ ಕೆಲಸ ಮಾಡಿದರೆ ನಿನ್ನ ತಲೆ ಎತ್ತಲ್ಪಡುವದಲ್ಲವೇ; ಅಲ್ಲದಿದ್ದರೆ ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವದು; ಆದರೂ ನೀನು ಅದನ್ನು ವಶಮಾಡಿಕೊಳ್ಳಬೇಕು ಎಂದು ಹೇಳಿದನು.


ಆದದರಿಂದ ನಾವು ದೇಹವೆಂಬ ಮನೆಯಲ್ಲಿದ್ದರೂ ಸರಿಯೇ, ಅದನ್ನು ಬಿಟ್ಟಿದ್ದರೂ ಸರಿಯೇ, ಕರ್ತನಿಗೆ ಮೆಚ್ಚುವವರಾಗಿರಬೇಕೆಂಬದೇ ನಮ್ಮ ಗುರಿಯಾಗಿದೆ.


ಕಡೇ ಮಾತೇನಂದರೆ, ಸಹೋದರರೇ, ಯಾವಾವದು ಸತ್ಯವೂ ಮಾನ್ಯವೂ ನ್ಯಾಯವೂ ಶುದ್ಧವೂ ಪ್ರೀತಿಕರವೂ ಮನೋಹರವೂ ಆಗಿದೆಯೋ, ಯಾವದು ಸದ್ಗುಣವಾಗಿದೆಯೋ, ಯಾವದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳನ್ನೂ ಲಕ್ಷ್ಯಕ್ಕೆ ತಂದುಕೊಳ್ಳಿರಿ.


ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಅಕ್ರಮಗಾರರೆಂದು ನಿಂದಿಸುತ್ತಾರೋ ಆ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ವಿಚಾರಣೆಯ ದಿನದಲ್ಲಿ ದೇವರನ್ನು ಕೊಂಡಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು