Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:20 - ಕನ್ನಡ ಸತ್ಯವೇದವು J.V. (BSI)

20 ದೇವರು ಕಟ್ಟಿದ್ದನ್ನು ನೀನು ಆಹಾರದ ನಿವಿುತ್ತವಾಗಿ ಕೆಡವಬೇಡ. ಎಲ್ಲಾ ಪದಾರ್ಥಗಳೂ ಶುದ್ಧವೇ; ಆದರೆ ತಿಂದು ಮತ್ತೊಬ್ಬರಿಗೆ ವಿಘ್ನವನ್ನುಂಟುಮಾಡುವದು ಕೆಟ್ಟದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ದೇವರು ಕಟ್ಟಿದ್ದನ್ನು ನೀನು ಆಹಾರದ ನಿಮಿತ್ತವಾಗಿ ಕೆಡವಬೇಡ. ಎಲ್ಲಾ ಪದಾರ್ಥಗಳೂ ಶುದ್ಧವೇ; ಆದರೆ ತಿಂದು ಮತ್ತೊಬ್ಬರಿಗೆ ವಿಘ್ನವನ್ನುಂಟುಮಾಡುವುದು ಕೆಟ್ಟದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕೇವಲ ಆಹಾರಕ್ಕಾಗಿ, ದೇವರು ಕಟ್ಟಿದ್ದನ್ನು ನೀನು ಕೆಡವಬೇಡ. ಆಹಾರಪದಾರ್ಥಗಳೆಲ್ಲಾ ಒಳ್ಳೆಯವೇ. ಆದರೆ ಅವುಗಳಲ್ಲಿ ಯಾವುದಾದರೂ ಒಂದನ್ನು ತಿನ್ನುವುದರಿಂದ ಮತ್ತೊಬ್ಬನಿಗೆ ವಿಘ್ನವನ್ನು ಒಡ್ಡುವುದಾದರೆ, ಅದು ತಪ್ಪು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಎಲ್ಲಾ ಆಹಾರಪದಾರ್ಥಗಳು ಶುದ್ಧವಾಗಿವೆ ಮತ್ತು ತಿನ್ನಲು ಯೋಗ್ಯವಾಗಿವೆ. ಆದರೆ ಒಬ್ಬನು ತಾನು ತಿನ್ನುವ ಆಹಾರಪದಾರ್ಥದ ಮೂಲಕ ಮತ್ತೊಬ್ಬ ವ್ಯಕ್ತಿಯನ್ನು ಪಾಪಕ್ಕೆ ಬೀಳಿಸುವುದಾಗಿದ್ದರೆ, ಅವನು ಆ ಪದಾರ್ಥವನ್ನು ತಿನ್ನುವುದೇ ತಪ್ಪು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಹಾರದ ನಿಮಿತ್ತವಾಗಿ ದೇವರ ಕೆಲಸವನ್ನು ಕೆಡಿಸಬೇಡ, ಎಲ್ಲಾ ಆಹಾರವೂ ಶುದ್ಧವಾದದ್ದೇ. ಆದರೆ ಒಬ್ಬರು ತಿಂದು ವಿಘ್ನವನ್ನು ಒಡ್ಡುವುದು ಕೆಟ್ಟದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಜೆವ್ನಾಕ್ ಲಾಗುನ್ ದೆವಾನ್ ಕರಲ್ಲೆ ನಾಸ್ ಕರುನ್ ಟಾಕುನಕಾಶಿ. ಸಗ್ಳಿ ಖಾತಲಿ ಜಿನ್ಸಾ ಬರಿಚ್ ಹಾತ್, ಖರೆ ಅಪ್ನಾಚ್ಯಾ ಖಾತಲ್ಯಾಚ್ಯಾ ವೈನಾ ದುಸ್ರ್ಯಾನಿ ಪಾಪಾತ್ ಪಡುಕ್ ಕಾರನ್ ಹೊತಲೆ ಚುಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:20
13 ತಿಳಿವುಗಳ ಹೋಲಿಕೆ  

ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅಂಥವನ ಕೊರಳಿಗೆ ಬೀಸುವ ಕಲ್ಲು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಣುಗಿಸಿಬಿಡುವದು ಅವನಿಗೆ ಹಿತವಾಗುವದು.


ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲದವರಿಗೂ ಯಾವದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಮಲಿನವಾಗಿವೆ.


ದೇವರು ಶುದ್ಧಮಾಡಿದ್ದನ್ನು ನೀನು ಹೊಲೆ ಎನ್ನಬೇಡವೆಂದು ತಿರಿಗಿ ಎರಡನೆಯ ಸಾರಿ ಅವನಿಗೆ ವಾಣಿ ಕೇಳಿಸಿತು.


ಮಾಂಸ ತಿನ್ನುವದನ್ನಾಗಲಿ ದ್ರಾಕ್ಷಾರಸ ಕುಡಿಯುವದನ್ನಾಗಲಿ ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವದನ್ನಾಗಲಿ ಬಿಟ್ಟುಬಿಡುವದೇ ಒಳ್ಳೇದು.


ಬಾಯೊಳಕ್ಕೆ ಹೋಗುವಂಥದು ಮನುಷ್ಯನನ್ನು ಹೊಲೆಮಾಡುವದಿಲ್ಲ; ಬಾಯೊಳಗಿಂದ ಹೊರಡುವಂಥದೇ ಮನುಷ್ಯನನ್ನು ಹೊಲೆಮಾಡುವದು ಎಂದು ಹೇಳಿದನು.


ನಾವು ಆತನ ನಿರ್ಮಾಣ; ಸತ್ಕಾರ್ಯಗಳನ್ನು ಮಾಡುವದಕ್ಕಾಗಿಯೇ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟೆವು. ನಾವು ಸತ್ಕಾರ್ಯಗಳನ್ನು ನಡಿಸುವವರಾಗಿ ಬದುಕಬೇಕೆಂದು ದೇವರು ನಮ್ಮನ್ನು ಮೊದಲೇ ನೇವಿುಸಿದನು.


ಈ ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಸಿದ್ಧಿಗೆ ತರುವನೆಂದು ನನಗೆ ಭರವಸವುಂಟು.


ಒಬ್ಬನು ಯಾವದನ್ನಾದರೂ ತಿನ್ನಬಹುದೆಂದು ನಂಬುತ್ತಾನೆ; ನಂಬಿಕೆಯಲ್ಲಿ ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು