Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:9 - ಕನ್ನಡ ಸತ್ಯವೇದವು J.V. (BSI)

9 ಬದುಕಿದರೂ ಸತ್ತರೂ ನಾವು ಕರ್ತನವರೇ. ಯಾಕಂದರೆ ಸತ್ತವರಿಗೂ ಜೀವಿಸುವವರಿಗೂ ಒಡೆಯನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಜೀವಿತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯಾಕೆಂದರೆ ಸತ್ತವರಿಗೂ, ಜೀವಿಸುವವರಿಗೂ ಒಡೆಯನಾಗಬೇಕಂತಲೇ ಕ್ರಿಸ್ತನು ಸತ್ತು ಜೀವಿತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಏಕೆಂದರೆ, ಸತ್ತವರಿಗೂ ಬದುಕುವವರಿಗೂ ಪ್ರಭುವಾಗಬೇಕೆಂಬ ಉದ್ದೇಶದಿಂದಲೇ ಕ್ರಿಸ್ತಯೇಸು ಸತ್ತು ಜೀವಂತರಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದಕಾರಣ, ಮತ್ತೆ ಜೀವಿಸುವುದಕ್ಕಾಗಿಯೇ ಕ್ರಿಸ್ತನು ಸತ್ತು ಸಮಾಧಿಯೊಳಗಿಂದ ಜೀವಂತನಾಗಿ ಎದ್ದುಬಂದನು. ಸತ್ತುಹೋದ ಜನರಿಗೂ ಬದುಕಿರುವ ಜನರಿಗೂ ತಾನು ಪ್ರಭುವಾಗಿರಬೇಕೆಂದು ಆತನು ಹೀಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈ ಕಾರಣಕ್ಕಾಗಿಯೇ, ಜೀವಿಸುವವರಿಗೂ ಸತ್ತವರಿಗೂ ಕರ್ತನಾಗಿರಬೇಕೆಂದು ಕ್ರಿಸ್ತನು ಮರಣಹೊಂದಿ ಪುನರುತ್ಥಾನಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಕಶ್ಯಾಕ್ ಮಟ್ಲ್ಯಾರ್ ಝಿತ್ತೆ ಅಸಲ್ಲ್ಯಾಂಚೊಬಿ ಮರಲ್ಲ್ಯಾಂಚೊ ಧನಿ ಹೊವ್‍ಸಾಟ್ನಿ ಮನುನ್ ಕ್ರಿಸ್ತ್ ಮರ್ಲೊ ಅನಿ ಝಿತ್ತೊ ಹೊವ್ನ್ ಉಟ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:9
20 ತಿಳಿವುಗಳ ಹೋಲಿಕೆ  

ಸತ್ತವನಾದೆನು, ಮತ್ತು ಇಗೋ ಯುಗಯುಗಾಂತರಗಳಲ್ಲಿಯೂ ಬದುಕುವವನಾಗಿದ್ದೇನೆ; ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಅವೆ.


ಕ್ರಿಸ್ತನು ಇಂಥ ಶ್ರಮಗಳನ್ನು ಅನುಭವಿಸಿ ತನ್ನ ಮಹಾಪದವಿಗೆ ಸೇರುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ


ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ದೇವರ ಮುಂದೆ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕೆ ಬರುವ ಕ್ರಿಸ್ತ ಯೇಸುವಿನ ಮುಂದೆ ಆತನ ಪ್ರತ್ಯಕ್ಷತೆಯ ಮೇಲೆಯೂ ಆತನ ರಾಜ್ಯದ ಮೇಲೆಯೂ ಆಣೆಯಿಟ್ಟು ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ -


ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನು ಎಂಬದನ್ನು ಜನರಿಗೆ ಸಾರಿ ಸಾಕ್ಷಿಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.


ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ಅವರು ಬದುಕುವವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕೆ ಸಿದ್ಧವಾಗಿರುವಾತನಿಗೆ ಉತ್ತರಕೊಡಬೇಕು.


ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾದಿರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡವೆ.


ಕ್ರಿಸ್ತನ ಪ್ರೀತಿಯು ನಮಗೆ ಒತ್ತಾಯಮಾಡುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡೆವು.


ಎಲ್ಲಾ ಜನಗಳಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿದ ವಾಕ್ಯವು ನಿಮಗೇ ತಿಳಿದಿರುವದು.


ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ -


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂವಿುಯಲ್ಲಿ ಬಿದ್ದು ಸಾಯದಿದ್ದರೆ ಒಂದೇಯಾಗಿ ಉಳಿಯುವದು; ಸತ್ತರೆ ಬಹಳ ಫಲಕೊಡುವದು.


ಅದೇನಂದರೆ ನೀನು ಯೇಸುವನ್ನೇ ಕರ್ತನೆಂದು ಬಾಯಿಂದ ಅರಿಕೆಮಾಡಿಕೊಂಡು ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನೆಂದು ಹೃದಯದಿಂದ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ.


ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.


ನಾವು ಎಚ್ಚರವಾಗಿದ್ದರೂ ಸರಿಯೇ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು