Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:19 - ಕನ್ನಡ ಸತ್ಯವೇದವು J.V. (BSI)

19 ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಪರ್ಯಂತರಕ್ಕೂ ಸುತ್ತಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ನೆರವೇರಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಸುತ್ತಮುತ್ತ ಪ್ರಯಾಣಿಸಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ಪೂರೈಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಜೆರುಸಲೇಮಿನಿಂದ ಪ್ರಾರಂಭಿಸಿ ಇಲ್ಲುರಿಕ ಪ್ರಾಂತ್ಯದವರೆಗೂ ಸುತ್ತಮುತ್ತಿನಲ್ಲೂ ನಾನು ಸಂಚಾರಮಾಡಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಪೂರ್ತಿಯಾಗಿ ಪ್ರಚಾರಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅದ್ಭುತಕಾರ್ಯಗಳ ಶಕ್ತಿಯನ್ನು ಮತ್ತು ಮಹಾಕಾರ್ಯಗಳನ್ನು ನೋಡಿದ್ದರಿಂದಲೂ ಪವಿತ್ರಾತ್ಮನ ಶಕ್ತಿಯ ನಿಮಿತ್ತದಿಂದಲೂ ಅವರು ದೇವರಿಗೆ ವಿಧೇಯರಾದರು. ನಾನು ಜೆರುಸಲೇಮಿನಿಂದ ಇಲ್ಲುರಿಕ ಪ್ರಾಂತ್ಯದವರೆಗೂ ಸುವಾರ್ತೆಯನ್ನು ಬೋಧಿಸಿ, ನನ್ನ ಆ ಕರ್ತವ್ಯವನ್ನು ಪೂರೈಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಬಲವಾದ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಪವಿತ್ರಾತ್ಮ ಶಕ್ತಿಯಿಂದಲೂ ಮಾಡಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು. ಯೆರೂಸಲೇಮಿನಿಂದ ಪ್ರಾರಂಭಿಸಿ, ಇಲ್ಲುರಿಕದವರೆಗೆ ನಾನು ಕ್ರಿಸ್ತನ ಸುವಾರ್ತೆಯನ್ನು ಸಂಪೂರ್ಣವಾಗಿ ಸಾರಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅಜಾಪಾಂಚ್ಯಾ ಅನಿ ವಿಚಿತ್ರಾಂಚ್ಯಾ ಬಳಾಚ್ಯಾ ವೈನಾ ಅನಿ ದೆವಾಚ್ಯಾ ಆತ್ಮ್ಯಾಚ್ಯಾ ಬಳಾನ್ ಹೆ ಕರ್‍ಲ್ಯಾನ್, ಅನಿ ತೆಕಾ ಲಾಗುನುಚ್ ಮಿಯಾ ಜೆರುಜಲೆಮಾಕ್ನಾ ಇಲ್ಲಿರಿಕಮ್ ಮನ್ತಲ್ಯಾ ಜಾಗ್ಯಾ ಪತರ್ ಯೆಲೊ, ಅನಿ ಪುರಾ ರಿತಿನ್ ಮಿಯಾ ಕ್ರಿಸ್ತಾಚಿ ಬರಿ ಖಬರ್ ಸಾಂಗಟ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:19
37 ತಿಳಿವುಗಳ ಹೋಲಿಕೆ  

ನಾನು ಹಿಂಸೆಯನ್ನು ಸ್ಥಿರಚಿತ್ತದಿಂದ ತಾಳಿಕೊಳ್ಳುವದರಲ್ಲಿಯೂ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಹತ್ಕಾರ್ಯಗಳನ್ನೂ ನಡಿಸಿದ್ದರಲ್ಲಿಯೂ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಮ್ಮ ಮಧ್ಯದಲ್ಲಿ ತೋರಿದವು.


ಮತ್ತು ದೇವರು ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನಾನಾ ವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ಪವಿತ್ರಾತ್ಮವರಗಳನ್ನು ತನ್ನ ಚಿತ್ತಾನುಸಾರವಾಗಿ ಅವರಿಗೆ ಅನುಗ್ರಹಿಸಿ ಅವರ ಮಾತಿಗೆ ಸಾಕ್ಷಿಕೊಡುತ್ತಿದ್ದನು.


ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು ಯಾತರಿಂದಾಯಿತು? ನೀವು ನೇಮನಿಷ್ಠೆಗಳನ್ನನುಸರಿಸಿದ್ದರಿಂದಲೋ? ಕೇಳಿ ನಂಬಿದ್ದರಿಂದಲೋ? ನಂಬಿದ್ದರಿಂದಲೇ.


ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.


ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿವಸಗಳನ್ನು ಪೂರೈಸಿದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿವಸದಲ್ಲಿ ತ್ರೋವದಲ್ಲಿ ಬಂದು ಅವರನ್ನು ಸೇರಿದೆವು. ಅಲ್ಲಿ ಏಳು ದಿವಸಗಳಿದ್ದೆವು.


ಕೂಡಲೇ ಸಹೋದರರು ರಾತ್ರಿಯಲ್ಲಿ ಪೌಲ ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.


ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವದಕ್ಕೂ ಸಭೆಯಲ್ಲಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗಿಯದೆ


ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು -


ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟನು. ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.


ಇದಾದ ಮೇಲೆ ಪೌಲನು ಅಥೇನೆಯನ್ನು ಬಿಟ್ಟು ಕೊರಿಂಥಕ್ಕೆ ಹೋದನು.


ಪೌಲನನ್ನು ಸಾಗಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡುಹೋಗಿ - ಸೀಲನನ್ನೂ ತಿಮೊಥೆಯನನ್ನೂ ಕೂಡಿದ ಮಟ್ಟಿಗೆ ಬೇಗ ನನ್ನ ಬಳಿಗೆ ಬರಹೇಳಿರಿ ಎಂಬ ಅಪ್ಪಣೆಯನ್ನು ಅವನಿಂದ ಹೊಂದಿ ಹೊರಟುಬಂದರು.


ಹೀಗೆ ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಆ ದೆವ್ವಕ್ಕೆ - ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟುಹೋಯಿತು.


ಗುಂಪುಕೂಡಿದ್ದವರೆಲ್ಲರು ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು.


ಅದಕ್ಕೆ ಸೇರಿರುವ ಪೆರ್ಗೆಯಲ್ಲಿ ಕರ್ತನ ವಾಕ್ಯವನ್ನು ಹೇಳಿದ ಮೇಲೆ ಅತಾಲ್ಯಕ್ಕೆ ಇಳಿದು ಅಲ್ಲಿಂದ ಸಮುದ್ರಪ್ರಯಾಣವಾಗಿ ಅಂತಿಯೋಕ್ಯಕ್ಕೆ ಮುಟ್ಟಿದರು.


ಆದರೆ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಊರೊಳಕ್ಕೆ ಹೋದನು. ಮರುದಿನ ಬಾರ್ನಬನ ಜೊತೆಯಲ್ಲಿ ದೆರ್ಬೆಗೆ ಹೊರಟನು.


ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ ಎಂದು ಮಹಾಧ್ವನಿಯಿಂದ ಹೇಳಿದನು. ಕೂಡಲೆ ಆ ಮನುಷ್ಯನು ಹಾರಿ ನಡೆದಾಡಿದನು.


ಅಪೊಸ್ತಲರು ಅದನ್ನು ತಿಳಿದು ಓಡಿಹೋಗಿ ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ


ಇವರು ತಮ್ಮ ಕಾಲಿಗೆ ಹತ್ತಿದ್ದ ದೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು.


ಆಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‍ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.


ಆದರೆ ಪವಿತ್ರಾತ್ಮ ನಿಮ್ಮ ಮೇಲೆ ಬರಲು ನೀವು ಬಲವನ್ನು ಹೊಂದಿ ಯೆರೂಸಲೇವಿುನಲ್ಲಿಯೂ ಎಲ್ಲಾ ಯೂದಾಯ ಸಮಾರ್ಯ ಸೀಮೆಗಳಲ್ಲಿಯೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರಬೇಕು ಅಂದನು.


ಯೇಸು ಅವನಿಗೆ - ನೀವು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದಿದ್ದರೆ ನಂಬುವದೇ ಇಲ್ಲವೆಂದು ಹೇಳಿದನು.


ನಾನು ದೇವರ ಆತ್ಮನ ಬಲದಿಂದಲೇ ದೆವ್ವಗಳನ್ನು ಬಿಡಿಸುವದಾದರೆ ದೇವರ ರಾಜ್ಯವು ನಿಮ್ಮ ಹತ್ತರಕ್ಕೆ ಬಂತಲ್ಲಾ.


ಈ ಸಂಗತಿಗಳನ್ನು ಮುಂತಿಳಿಸುವದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದರೆಂಬದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರಿಗೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂಬ ಅಪೇಕ್ಷೆ ಉಂಟು.


ನಾನು ಸಭೆಗೆ ಸೇವಕನಾದೆನು. ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕೆಲಸವನ್ನು ನಿಮ್ಮ ಪ್ರಯೋಜನಕ್ಕೋಸ್ಕರ ನನಗೆ ದಯಪಾಲಿಸಿದನು.


ನಾನು ಸ್ಪೇನ್ ದೇಶಕ್ಕೆ ಹೋಗುವಾಗ ನನ್ನ ಮಾರ್ಗದಲ್ಲಿ ನಿಮ್ಮ ದರ್ಶನವನ್ನು ಮಾಡಬೇಕೆಂಬ ಅಭಿಪ್ರಾಯ ಉಂಟು. ತರುವಾಯ ನಿಮ್ಮ ಸಹವಾಸದಲ್ಲಿ ನನಗೆ ಸ್ವಲ್ಪಮಟ್ಟಿಗೆ ಸಂತೃಪ್ತಿಯಾದ ಮೇಲೆ ನೀವು ಆ ದೇಶಕ್ಕೆ ನನ್ನ ಪ್ರಯಾಣವನ್ನು ಸಾಗಿಸುವಿರೆಂದು ನಂಬುತ್ತೇನೆ.


ನಿರೀಕ್ಷೆಯ ಮೂಲನಾದ ದೇವರು ನಂಬಿಕೆಯಿಂದುಂಟಾಗುವ ಸಂತೋಷವನ್ನೂ ಮನಶ್ಶಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಿ ನೀವು ಪವಿತ್ರಾತ್ಮನ ಬಲಗೂಡಿದವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.


ನಿಮ್ಮ ನಂಬಿಕೆಯು ಮಾನುಷಜ್ಞಾನವನ್ನು ಆಧಾರಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಂಡಿರಬೇಕೆಂದು ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೆ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.


ನಾವು ಸಾರಿದ ಸುವಾರ್ತೆಯು ನಿಮ್ಮಲ್ಲಿ ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಬಹು ನಿಶ್ಚಯದೊಡನೆಯೂ ಬಂತೆಂಬದನ್ನೂ ಬಲ್ಲೆವು. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ಬಲ್ಲಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು