Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:26 - ಕನ್ನಡ ಸತ್ಯವೇದವು J.V. (BSI)

26 ಯಾಕಂದರೆ ಯೆರೂಸಲೇವಿುನಲ್ಲಿರುವ ದೇವಜನರೊಳಗೆ ಬಡವರಿಗೋಸ್ಕರ ಸ್ವಲ್ಪ ಹಣದ ಸಹಾಯವನ್ನು ಮಾಡಬೇಕೆಂಬದಾಗಿ ಮಕೆದೋನ್ಯ ಅಖಾಯ ಸೀಮೆಗಳವರು ಇಷ್ಟಪಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯಾಕೆಂದರೆ ಯೆರೂಸಲೇಮಿನಲ್ಲಿರುವ ದೇವಜನರೊಳಗೆ ಬಡವರಿಗೋಸ್ಕರ ಸ್ವಲ್ಪ ಹಣದ ಸಹಾಯವನ್ನು ಮಾಡಬೇಕೆಂಬುದಾಗಿ ಮಕೆದೋನ್ಯ, ಅಖಾಯ ಸೀಮೆಗಳವರು ಇಷ್ಟಪಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಲ್ಲಿನ ದೇವಜನರಲ್ಲಿ ಬಡವರಾದವರಿಗೆ ಸಹಾಯನೀಡಲು ಮಕೆದೋನಿಯ ಮತ್ತು ಅಖಾಯದ ಸಹೋದರರು ಮುಂದೆ ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅಲ್ಲಿನ ದೇವಜನರಲ್ಲಿ ಕೆಲವರು ಬಡವರಾಗಿದ್ದಾರೆ. ಮಕೆದೋನಿಯ ಮತ್ತು ಅಖಾಯದ ವಿಶ್ವಾಸಿಗಳು ಅಲ್ಲಿನ ಬಡಜನರಿಗಾಗಿ ಸಂತೋಷದಿಂದ ಧನಸಹಾಯ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಮಕೆದೋನ್ಯ ಮತ್ತು ಅಖಾಯದವರು ಯೆರೂಸಲೇಮಿನ ಭಕ್ತರಲ್ಲಿರುವ ಬಡವರಾಗಿರುವವರಿಗೆ ಸಹಾಯ ಮಾಡುವುದು ಒಳ್ಳೆಯದೆಂದು ಭಾವಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಕಶ್ಯಾಕ್ ಮಟ್ಲ್ಯಾರ್, ಮೆಸಿದೊನಿಯಾ ಅನಿ ಅಖಾಯಿಯಾ ಮನ್ತಲ್ಯಾ ಗಾವಾಂಚ್ಯಾ ವಿಶ್ವಾಸಿ ಲೊಂಕಾಚ್ಯಾ ತಾಂಡ್ಯಾನಿ, ಜೆರುಜಲೆಮಾತ್ ಹೊತ್ತ್ಯಾ ದೆವಾಚ್ಯಾ ಲೊಕಾನಿತ್ಲ್ಯಾ ಗರಿಬ್ ಲೊಕಾಕ್ನಿ ಅಪ್ನಾಚ್ಯಾ ಸ್ವಂತ್ ಮನಾನಿ ದಾನ್ ದಿವ್ಚೆ ಮನುನ್ ನಿರ್‍ದಾರ್ ಕರ್‍ಲ್ಯಾನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:26
33 ತಿಳಿವುಗಳ ಹೋಲಿಕೆ  

ಹೇಗಂದರೆ ನೀವು ನಡಿಸುವ ಈ ಧರ್ಮಕಾರ್ಯವು ದೇವಜನರ ಕೊರತೆಗಳನ್ನು ನೀಗುವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು.


ನಿಮ್ಮ ಮನಸ್ಸು ಸಿದ್ಧವಾಗಿದೆ ಎಂಬದು ನನಗೆ ಗೊತ್ತುಂಟು. ಒಂದು ವರುಷದ ಹಿಂದೆ ಅಖಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ. ಮತ್ತು ನಿಮ್ಮ ಆಸಕ್ತಿಯು ಅವರಲ್ಲಿ ಬಹುಜನರನ್ನು ಪ್ರೇರೇಪಿಸಿತು.


ಕರ್ತನಾದ ಯೇಸುವಿನ ಮೇಲೆ ನೀನು ಇಟ್ಟಿರುವ ನಂಬಿಕೆಯನ್ನು ಕುರಿತೂ ದೇವಜನರೆಲ್ಲರ ಮೇಲಿರುವ ನಿನ್ನ ಪ್ರೀತಿಯನ್ನು ಕುರಿತೂ ಕೇಳಿದ್ದರಿಂದ


ಸ್ತೆಫನನ ಮನೆಯವರು ಅಖಾಯದಲ್ಲಿನ ಪ್ರಥಮಫಲವೆಂದೂ ಅವರು ದೇವಜನರಿಗೆ ಸೇವೆಮಾಡುವದಕ್ಕಾಗಿ ಕೈಹಾಕಿದರೆಂದೂ ನೀವು ಬಲ್ಲಿರಷ್ಟೆ.


ಗಲ್ಲಿಯೋನನು ಅಖಾಯದ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಸ್ಥಾನದ ಮುಂದೆ ಹಿಡಿತಂದು -


ಅಲ್ಲಿ ರಾತ್ರಿಕಾಲದಲ್ಲಿ ಪೌಲನಿಗೆ ಒಂದು ದರ್ಶನವಾಯಿತು, ಏನಂದರೆ - ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು - ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು ಅವನನ್ನು ಬೇಡಿಕೊಳ್ಳುತ್ತಿದ್ದನು.


ಆದರೆ ನೀನು ಔತಣ ಮಾಡಿಸುವಾಗ ಬಡವರು ಊನವಾದವರು ಕುಂಟರು ಕುರುಡರು ಇಂಥವರನ್ನು ಕರೆ;


ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನಂದರೆ -


ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ, ಆದರೆ ನಾನು ನಿಮ್ಮಲ್ಲಿ ಯಾವಾಗಲೂ ಇರುವದಿಲ್ಲ.


ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ಆಗಲೇ ಮುರಿದುಹೋಯಿತು; ಇದರಿಂದ ಆ ದೀನವಾದ ಮಂದೆಯಲ್ಲಿ ನನ್ನನ್ನು ಲಕ್ಷಿಸುತ್ತಿದ್ದ ಕುರಿಗಳು ಇದು ಯೆಹೋವನ ನುಡಿ ಎಂದು ತಿಳುಕೊಂಡವು.


ಆಗ ನಾನು ದೀನಾವಸ್ಥೆಯಲ್ಲಿದ್ದ ಆ ಕೊಯ್ಗುರಿಗಳ ಮಂದೆಯನ್ನು ಮೇಯಿಸಿದೆನು. ಎರಡು ಕೋಲುಗಳನ್ನು ತೆಗೆದುಕೊಂಡು ಒಂದಕ್ಕೆ ಕನಿಕರವೆಂತಲೂ ಇನ್ನೊಂದಕ್ಕೆ ಒಗ್ಗಟ್ಟೆಂತಲೂ ಹೆಸರಿಟ್ಟು ಅವುಗಳಿಂದ ಮಂದೆಯನ್ನು ಮೇಯಿಸಿದೆನು.


ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು; [ಪರರ] ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.


ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು; ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.


ನೆರೆಯವನನ್ನು ತಿರಸ್ಕರಿಸುವವನು ದೋಷಿ; ದರಿದ್ರನನ್ನು ಕನಿಕರಿಸುವವನು ಧನ್ಯನು.


ಅದಕ್ಕೆ ಅನನೀಯನು - ಕರ್ತನೇ, ಆ ಮನುಷ್ಯನು ಯೆರೂಸಲೇವಿುನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ;


ಫಿಲಿಪ್ಪಿ ಎಂಬದು ಮಕೆದೋನ್ಯದಲ್ಲಿ ಪ್ರಧಾನ ಪಟ್ಟಣವೂ ರೋಮಾಪುರದವರ ಒಂದು ಪ್ರವಾಸಸ್ಥಾನವೂ ಆಗಿದೆ. ಈ ಪಟ್ಟಣದಲ್ಲಿ ನಾವು ಕೆಲವು ದಿವಸ ಇದ್ದೆವು.


ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇವಿುಗೆ ಹೋಗಬೇಕೆಂದು ಮನಸ್ಸಿನಲ್ಲಿ ಉದ್ದೇಶಿಸಿ ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು ಹೇಳಿದನು.


ನಾನು ಹಾದುಹೋಗಬೇಕೆಂದಿರುವ ಮಕೆದೋನ್ಯ ಸೀಮೆಯನ್ನು ದಾಟಿದ ಮೇಲೆ ನಿಮ್ಮ ಬಳಿಗೆ ಬಂದು ನಿಮ್ಮ ಬಳಿಯಲ್ಲೇ ಇಳುಕೊಳ್ಳುವೆನು.


ಮೊದಲು ನಿಮ್ಮ ಬಳಿಗೆ ಬಂದು ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ಆಮೇಲೆ ಮಕೆದೋನ್ಯವನ್ನು ಬಿಟ್ಟು ತಿರಿಗಿ ನಿಮ್ಮ ಬಳಿಗೆ ಬಂದು ನಿವ್ಮಿುಂದ ಯೂದಾಯಕ್ಕೆ ಸಾಗಕಳುಹಿಸಲ್ಪಡಬೇಕೆಂದು ಯೋಚಿಸಿದ್ದೆನು.


ಆದರೂ ನನ್ನ ಸಹೋದರನಾದ ತೀತನು ನನಗೆ ಸಿಕ್ಕಲಿಲ್ಲವಾದ ಕಾರಣ ನನ್ನ ಆತ್ಮಕ್ಕೆ ಉಪಶಮನವಿಲ್ಲದೆ ಅಲ್ಲಿದ್ದವರಿಂದ ಕಳುಹಿಸಿಕೊಂಡವನಾಗಿ ಹೊರಟು ಮಕೆದೋನ್ಯಕ್ಕೆ ಬಂದೆನು.


ನಾವು ಮಕೆದೋನ್ಯಕ್ಕೆ ಬಂದಾಗ ನಮ್ಮ ಮನಸ್ಸಿಗೆ ಏನೂ ಉಪಶಮನವಾಗಲಿಲ್ಲ, ಎಲ್ಲಾ ವಿಷಯಗಳಲ್ಲಿಯೂ ನಮಗೆ ಸಂಕಟವಿತ್ತು; ಹೊರಗೆ ಕಲಹ, ಒಳಗೆ ಭಯ.


ಸಿದ್ಧವಾಗದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬದನ್ನು ಕಾಣುವಾಗ ನಮಗೆ ಇಂಥ ಭರವಸವಿದ್ದದ್ದಕ್ಕೆ ನಾವು ನಾಚಿಕೆಪಡಬೇಕಾದೀತು; ನಿಮಗೂ ನಾಚಿಕೆಯಾಗುವದೆಂದು ನಾವು ಬೇರೆ ಹೇಳಬೇಕೇ.


ನಾನು ನಿಮ್ಮಲ್ಲಿದ್ದಾಗ ಖರ್ಚಿಗೆ ಏನೂ ಇಲ್ಲದ ಸಮಯದಲ್ಲಿ ಯಾರ ಮೇಲೆಯೂ ಭಾರ ಹಾಕಲಿಲ್ಲ; ಮಕೆದೋನ್ಯದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನೂ ಕೊಟ್ಟರು. ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.


ಇದಲ್ಲದೆ ಫಿಲಿಪ್ಪಿಯವರೇ, ನಾನು ಮೊದಲು ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ ಮಕೆದೋನ್ಯದಿಂದ ಹೊರಟು ಹೋದಾಗ ಕೊಡುವ ಕೊಳ್ಳುವ ವಿಷಯದಲ್ಲಿ ನಿಮ್ಮ ಹೊರತು ಬೇರೆ ಯಾವ ಸಭೆಗೂ ನನಗೂ ಸಂಬಂಧವಿರಲಿಲ್ಲವೆಂದು ನೀವೂ ಬಲ್ಲಿರಿ.


ಹೀಗೆ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಕ್ರಿಸ್ತನನ್ನು ನಂಬುವವರೆಲ್ಲರಿಗೆ ಮಾದರಿಯಾದಿರಿ.


ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.


ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ - ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು