Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:28 - ಕನ್ನಡ ಸತ್ಯವೇದವು J.V. (BSI)

28 ನಾನು ಈ ಕೆಲಸವನ್ನು ತೀರಿಸಿಕೊಂಡು ಈ ಪ್ರೀತಿಯ ಫಲವನ್ನು ಅಲ್ಲಿಯವರ ವಶಕ್ಕೆ ಯಥಾಕ್ರಮವಾಗಿ ಕೊಟ್ಟ ಮೇಲೆ ನಿಮ್ಮ ಮಾರ್ಗವಾಗಿ ಸ್ಪೇನ್ ದೇಶಕ್ಕೆ ಹೋಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಾನು ಈ ಕೆಲಸವನ್ನು ಮುಗಿಸಿಕೊಂಡು ಈ ಪ್ರೀತಿಯ ಫಲವನ್ನು ಅಲ್ಲಿಯವರ ವಶಕ್ಕೆ ಸಂಪೂರ್ಣವಾಗಿ ಕೊಟ್ಟ ಮೇಲೆ ನಿಮ್ಮ ಮಾರ್ಗವಾಗಿ ಸ್ಪೇನ್ ದೇಶಕ್ಕೆ ಹೋಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ದೇವಜನರಿಗೆ ಸಂಗ್ರಹಿಸಲಾದ ಧನಸಹಾಯವನ್ನು ಸುರಕ್ಷಿತವಾಗಿ ಅವರಿಗೆ ತಲುಪಿಸಿದ ಮೇಲೆ ನನ್ನ ಈ ಕಾರ್ಯವನ್ನು ಮುಗಿಸಿಕೊಂಡು ಸ್ಪೇಯಿನ್ ದೇಶಕ್ಕೆ ಹೋಗುವ ಮಾರ್ಗದಲ್ಲಿ ನಿಮ್ಮ ಬಳಿಗೆ ಬರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಜೆರುಸಲೇಮಿನ ಬಡಜನರಿಗೋಸ್ಕರ ಕೊಟ್ಟಿರುವ ಈ ಹಣವನ್ನೆಲ್ಲಾ ಸುರಕ್ಷಿತವಾಗಿ ಅವರಿಗೆ ತಲುಪಿಸಿದ ಮೇಲೆ ನಾನು ಸ್ಪೇನಿಗೆ ಹೊರಡುವೆನು. ನಾನು ಸ್ಪೇನಿಗೆ ಪ್ರಯಾಣ ಮಾಡುವಾಗ (ರೋಮಿನಲ್ಲಿ) ಇಳಿದು ನಿಮ್ಮನ್ನು ಸಂದರ್ಶಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದ್ದರಿಂದ ಈ ಕೆಲಸವನ್ನು ಪೂರೈಸಿ ಸಂಗ್ರಹಿಸಿ ಕೊಟ್ಟದ್ದನ್ನು ಅವರಿಗೆ ಒಪ್ಪಿಸಿ ಖಚಿತವಾದ ಬಳಿಕ, ನಾನು ಸ್ಪೇನ್ ದೇಶಕ್ಕೆ ಹೋಗುವ ದಾರಿಯಲ್ಲಿ ನಿಮ್ಮನ್ನು ಸಂದರ್ಶಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಹೆ ಕಾಮ್ ಮಾಜೆ ಮಿಯಾ ಕರುನ್ ಹೊಲ್ಲ್ಯಾ ಮಾನಾ ಅನಿ ಗೊಳಾ ಕರಲ್ಲೆ ಹೆ ದಾನ್ ಮಾಜ್ಯಾಜ್ ಹಾತಾನಿ ಮಿಯಾ ತೆಂಕಾ ಪಾವಿತ್ ಕರಲ್ಲ್ಯಾ ತನ್ನಾ ಮಿಯಾ ಸ್ಪೆನ್ ದೆಶಾಕ್ ಜಾತಾ, ಅನಿ ಜಾತಾನಾ ಮಿಯಾ ತುಮ್ಕಾ ಯೆವ್ನ್ ಭೆಟ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:28
9 ತಿಳಿವುಗಳ ಹೋಲಿಕೆ  

ನಾನು ಸ್ಪೇನ್ ದೇಶಕ್ಕೆ ಹೋಗುವಾಗ ನನ್ನ ಮಾರ್ಗದಲ್ಲಿ ನಿಮ್ಮ ದರ್ಶನವನ್ನು ಮಾಡಬೇಕೆಂಬ ಅಭಿಪ್ರಾಯ ಉಂಟು. ತರುವಾಯ ನಿಮ್ಮ ಸಹವಾಸದಲ್ಲಿ ನನಗೆ ಸ್ವಲ್ಪಮಟ್ಟಿಗೆ ಸಂತೃಪ್ತಿಯಾದ ಮೇಲೆ ನೀವು ಆ ದೇಶಕ್ಕೆ ನನ್ನ ಪ್ರಯಾಣವನ್ನು ಸಾಗಿಸುವಿರೆಂದು ನಂಬುತ್ತೇನೆ.


ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವದಿಲ್ಲ; ನಿಮ್ಮ ಆತ್ಮಕ್ಕೆ ಆದಾಯವಾಗುವಂಥ ಪ್ರೀತಿಫಲವನ್ನೇ ಅಪೇಕ್ಷಿಸುತ್ತೇನೆ. ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಯಾಯಿತು.


ನೀವು ದೇವರ ಕೃಪೆಯನ್ನು ಕುರಿತು ಸತ್ಯಾರ್ಥವನ್ನು ಕೇಳಿ ತಿಳುಕೊಂಡ ದಿವಸದಿಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟು ವೃದ್ಧಿಯಾಗುತ್ತಾ ಬಂದ ಪ್ರಕಾರ ಲೋಕದಲ್ಲೆಲ್ಲಾ ಹಬ್ಬಿ ಫಲಕೊಟ್ಟು ವೃದ್ಧಿಯಾಗುತ್ತಾ ಬರುತ್ತದೆ.


ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು?


ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ; ಯೆಹೋವನ ಸಂಕಲ್ಪವೇ ಈಡೇರುವದು.


ಅವರು ಹೊರಟು ಕಾವಲುಗಾರರೊಂದಿಗೆ ಆ ಕಲ್ಲಿಗೆ ಮುದ್ರೆಹಾಕಿ ಸಮಾಧಿಯನ್ನು ಭದ್ರಮಾಡಿದರು.


ಆತನ ಸಾಕ್ಷಿಯನ್ನು ಒಪ್ಪಿದವನು ದೇವರು ಸತ್ಯವಂತನೆಂಬ ಮಾತಿಗೆ ಮುದ್ರೆ ಹಾಕಿದವನಾಗಿದ್ದಾನೆ.


ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇವಿುಗೆ ಹೋಗಬೇಕೆಂದು ಮನಸ್ಸಿನಲ್ಲಿ ಉದ್ದೇಶಿಸಿ ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು