ರೋಮಾಪುರದವರಿಗೆ 15:5 - ಕನ್ನಡ ಸತ್ಯವೇದವು J.V. (BSI)5 ಆ ಸ್ಥಿರಚಿತ್ತವನ್ನೂ ಆದರಣೆಯನ್ನೂ ಕೊಡುವ ದೇವರು ನೀವು ಕ್ರಿಸ್ತ ಯೇಸುವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ನಿಮಗೆ ದಯಪಾಲಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಕೊಡುವ ದೇವರು ನೀವು ಕ್ರಿಸ್ತ ಯೇಸುವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ನಿಮ್ಮನ್ನು ಆಶೀರ್ವದಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆ ಸ್ಥೈರಣೆ ಮತ್ತು ಉತ್ತೇಜನದ ಮೂಲವಾಗಿರುವ ದೇವರು, ನೀವೆಲ್ಲರು ಕ್ರಿಸ್ತಯೇಸುವನ್ನು ಅನುಸರಿಸುತ್ತಾ ಒಮ್ಮನಸ್ಸಿನಿಂದ ಬಾಳುವಂತೆ ಮಾಡಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ತಾಳ್ಮೆ ಮತ್ತು ಶಕ್ತಿ ದೇವರಿಂದ ಬರುತ್ತವೆ. ಕ್ರಿಸ್ತ ಯೇಸು ಬಯಸುವ ಮಾರ್ಗವನ್ನು ನೀವೆಲ್ಲರೂ ಒಟ್ಟಾಗಿ ಒಪ್ಪಿಕೊಳ್ಳಲು ದೇವರು ನಿಮಗೆ ಸಹಾಯ ಮಾಡಲೆಂದು ನಾನು ಪ್ರಾರ್ಥಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಸಹನೆಯನ್ನೂ ಉತ್ತೇಜನವನ್ನೂ ಕೊಡುವ ದೇವರು ನೀವು ಕ್ರಿಸ್ತ ಯೇಸುವನ್ನು ಹಿಂಬಾಲಿಸುವಂತೆ ನಿಮಗೆ ಒಂದೇ ಆತ್ಮವನ್ನು ಕೊಡಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಹ್ಯಾ ಸೊಸುನ್ ಘೆವ್ನ್ ಜಾತಲ್ಯಾಚೊ, ಅನಿ ಉಮ್ಮೆದಿಚೊ ಮುಳ್ ಹೊವ್ನ್ ಹೊತ್ತೊ, ದೆವ್ ತುಮ್ಕಾ ಜೆಜು ಕ್ರಿಸ್ತಾನ್ ದಾಕ್ವುನ್ ದಿಲ್ಲಾ ಸಾರ್ಕೆ ಎಕ್ ಮನಾಚಿ ಲೊಕಾ ಕರುಂದಿತ್. ಅಧ್ಯಾಯವನ್ನು ನೋಡಿ |
ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.