Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:2 - ಕನ್ನಡ ಸತ್ಯವೇದವು J.V. (BSI)

2 ನೀವು ಆಕೆಯನ್ನು ಕರ್ತನ ಶಿಷ್ಯಳೆಂದು ದೇವಜನರಿಗೆ ತಕ್ಕ ಹಾಗೆ ಸೇರಿಸಿಕೊಂಡು ಸಹಾಯವು ಯಾವ ವಿಷಯದಲ್ಲಿ ಬೇಕಾಗಿದ್ದರೂ ಸಹಾಯವನ್ನು ಮಾಡಿರಿ. ಆಕೆಯು ನನಗೂ ಅನೇಕರಿಗೂ ಸಹಾಯ ಮಾಡಿದವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀವು ಆಕೆಯನ್ನು ದೇವಜನರಿಗೆ ತಕ್ಕ ಹಾಗೆ ಕರ್ತನ ಶಿಷ್ಯಳೆಂದು ಸೇರಿಸಿಕೊಂಡು, ಆಕೆಗೆ ಯಾವ ವಿಷಯದಲ್ಲಿ ಅಗತ್ಯವಿದೆಯೋ ಅದರಲ್ಲಿ ಸಹಾಯವನ್ನು ಮಾಡಿರಿ. ಆಕೆಯು ನನಗೂ ಮತ್ತು ಅನೇಕರಿಗೂ ಸಹಾಯಮಾಡಿದವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದೇವಜನರ ಯೋಗ್ಯತೆಗೆ ತಕ್ಕಂತೆ ಈಕೆಯನ್ನು ಪ್ರಭುವಿನ ಹೆಸರಿನಲ್ಲಿ ಬರಮಾಡಿಕೊಳ್ಳಿ. ನನಗೂ ಅನೇಕರಿಗೂ ನೆರವು ನೀಡಿರುವ ಈಕೆಗೆ ನಿಮ್ಮಿಂದಾದ ಎಲ್ಲಾ ಸಹಾಯವನ್ನು ಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀವು ಆಕೆಯನ್ನು ಪ್ರಭುವಿನ ಹೆಸರಿನಲ್ಲಿ ಸ್ವೀಕರಿಸಿಕೊಳ್ಳಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ದೇವಜನರಿಗೆ ತಕ್ಕಂತೆ ಈಕೆಯನ್ನು ಸ್ವೀಕರಿಸಿಕೊಳ್ಳಿರಿ. ಆಕೆಗೆ ಬೇಕಾದ ಸಹಾಯಗಳನ್ನೆಲ್ಲಾ ಮಾಡಿರಿ. ಆಕೆಯು ನನಗೆ ಬಹಳವಾಗಿ ಸಹಾಯ ಮಾಡಿದ್ದಾಳೆ. ಅಲ್ಲದೆ ಇತರ ಅನೇಕ ಜನರಿಗೂ ಆಕೆ ಸಹಾಯ ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕರ್ತನಲ್ಲಿ ದೇವಜನರಿಗೆ ಯೋಗ್ಯವಾಗಿರುವ ರೀತಿಯಲ್ಲಿ ಆಕೆಯನ್ನು ಸ್ವೀಕರಿಸಿ, ಆಕೆಯು ಅನೇಕರಿಗೂ ನನಗೂ ವಿಶೇಷವಾದ ರೀತಿಯಲ್ಲಿ ಸಹಾಯ ಮಾಡಿದವಳಾಗಿರುವುದರಿಂದ ನಿಮಗೆ ಯಾವ ಕೊರತೆಗಳಿದ್ದರೂ ಆಕೆಗೆ ಬೇಕಾದದ್ದನ್ನು ಒದಗಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ದೆವಾಚ್ಯಾ ಲೊಕಾನಿ ಕರುಕ್ ಪಾಜೆ ತಶೆ ತುಮಿ ತಿಕಾ ಧನಿಯಾಚ್ಯಾ ನಾವಾನ್ ಘೆವಾ ಅನಿ ತಿಕಾ ಗರಜ್ ಹೊತ್ತಿ ತವ್ಡಿ ಮಜತ್ ಕರಾ, ಸುಮಾರ್ ಲೊಕಾಕ್ನಿ ಅನಿ ಮಾಕಾಬಿ ತೆನಿ ಮಜತ್ ಕರ್‍ಲಿನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:2
25 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯಮಾಡದೆ ಕ್ರಿಸ್ತನ ಕೆಲಸದ ನಿವಿುತ್ತ ಸಾಯುವ ಹಾಗಿದ್ದನೆಂದು ನೀವು ತಿಳಿದು ಅವನನ್ನು ಪೂರ್ಣ ಸಂತೋಷದಿಂದ ಕರ್ತನ ಹೆಸರಿನಲ್ಲಿ ಸೇರಿಸಿಕೊಳ್ಳಿರಿ. ಅಂಥವರನ್ನು ಮಾನ್ಯರೆಂದೆಣಿಸಿರಿ.


ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ಈ ಉಪದೇಶಕ್ಕೆ ಒಪ್ಪದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ, ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ.


ಹಾಗಾದರೆ ನೀನು ನನ್ನನ್ನು ಜೊತೆಗಾರನೆಂದು ಎಣಿಸಿದರೆ ನನ್ನನ್ನು ಸೇರಿಸಿಕೊಳ್ಳುವ ಪ್ರಕಾರವೇ ಅವನನ್ನು ಸೇರಿಸಿಕೋ.


ಅವನು ನನಗೆ ಪ್ರಾಣದಂತಿದ್ದರೂ ಅವನನ್ನು ನಿನ್ನ ಬಳಿಗೆ ಹಿಂದಕ್ಕೆ ಕಳುಹಿಸಿಕೊಟ್ಟಿದ್ದೇನೆ.


ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ ಸದ್ಬೋಧನೆ ಹೇಳುವವರೂ ಆಗಿರಬೇಕೆಂದು ಬೋಧಿಸು.


ಅವನು ಆ ದಿನದಲ್ಲಿ ಕರ್ತನಿಂದ ಕರುಣೆಯನ್ನು ಹೊಂದುವಂತೆ ಕರ್ತನು ಅವನಿಗೆ ದಯಪಾಲಿಸಲಿ. ಎಫೆಸದಲ್ಲಿಯೂ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.


ಅವರು ಜಡೆ ಚಿನ್ನ ಮುತ್ತು ಬೆಲೆಯುಳ್ಳ ವಸ್ತ್ರ ಮುಂತಾದವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ ದೇವಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.


ನನ್ನ ಜೊತೆಸೆರೆಯವನಾದ ಅರಿಸ್ತಾರ್ಕನೂ ಬಾರ್ನಬನಿಗೆ ದಾಯಾದನಾಗಿರುವ ಮಾರ್ಕನೂ ನಿಮಗೆ ವಂದನೆ ಹೇಳುತ್ತಾರೆ. ಮಾರ್ಕನನ್ನು ಕುರಿತು ಅಪ್ಪಣೆಗಳನ್ನು ಹೊಂದಿದಿರಲ್ಲಾ; ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ.


ಜಾರತ್ವ ಯಾವ ವಿಧವಾದ ಬಂಡುತನ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು; ಇವುಗಳಿಗೆ ದೂರವಾಗಿರುವದೇ ದೇವಜನರಿಗೆ ಯೋಗ್ಯವಾದದ್ದು.


ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.


ಕ್ರಿಸ್ತನ ಸೇವೆಯಲ್ಲಿ ನಮ್ಮ ಜೊತೆ ಕೆಲಸದವನಾದ ಉರ್ಬಾನನಿಗೂ ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು.


ನಿಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ.


ಆದದರಿಂದ ಕ್ರಿಸ್ತನು ನಿಮ್ಮನ್ನು ಸೇರಿಸಿಕೊಂಡಂತೆ ನೀವು ಸಹ ಒಬ್ಬರನ್ನೊಬ್ಬರು ಸೇರಿಸಿಕೊಂಡು ದೇವರ ಮಹಿಮೆಯನ್ನು ಪ್ರಕಾಶಪಡಿಸಿರಿ.


ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ದೇವಜನರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರೆದುರಿಗೆ ನಿಲ್ಲಿಸಿದನು.


ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲರು ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ ಮೇಲಂಗಿಗಳನ್ನೂ ತೋರಿಸಿದರು.


ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್‍ಭಾಷೆಯಲ್ಲಿ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.


ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ಅದಕ್ಕೆ ಅನನೀಯನು - ಕರ್ತನೇ, ಆ ಮನುಷ್ಯನು ಯೆರೂಸಲೇವಿುನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ;


ಕರ್ತನು ಅವನಿಗೆ - ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ ಅರಸುಗಳಿಗೂ ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ಫಿಲೊಲೊಗನಿಗೂ ಯೂಲ್ಯಳಿಗೂ ನೇರ್ಯನಿಗೂ ಅವನ ತಂಗಿಗೂ ಒಲುಂಪನಿಗೂ ಇವರೊಂದಿಗಿರುವ ದೇವಜನರೆಲ್ಲರಿಗೂ ವಂದನೆಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು