Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:4 - ಕನ್ನಡ ಸತ್ಯವೇದವು J.V. (BSI)

4 ಅವರು ನನ್ನ ಪ್ರಾಣದ ಸಂರಕ್ಷಣೆಗಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಗುರಿಮಾಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರ ಉಪಕಾರವನ್ನು ಸ್ಮರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ನನ್ನ ಪ್ರಾಣದ ಸಂರಕ್ಷಣೆಗಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಗುರಿಮಾಡಿಕೊಂಡಿದ್ದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರ ಉಪಕಾರವನ್ನು ಸ್ಮರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರು ನನ್ನ ಪ್ರಾಣರಕ್ಷಣೆಗಾಗಿ ತಮ್ಮ ಪ್ರಾಣಗಳನ್ನೇ ಅಪಾಯಕ್ಕೆ ಈಡಾಗಿಸಿದವರು. ಅದಕ್ಕಾಗಿ ನಾನು ಅವರಿಗೆ ಚಿರಋಣಿ. ನಾನು ಮಾತ್ರವಲ್ಲ, ಯೆಹೂದ್ಯೇತರ ಸಭೆಗಳ ಎಲ್ಲರೂ ಅವರು ಮಾಡಿದ ಉಪಕಾರಕ್ಕೆ ಚಿರಋಣಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ನನ್ನ ಪ್ರಾಣವನ್ನು ಉಳಿಸುವುದಕ್ಕಾಗಿ ತಮ್ಮ ಪ್ರಾಣಗಳನ್ನೇ ಅಪಾಯಕ್ಕೆ ಈಡುಮಾಡಿದರು. ನಾನು ಅವರಿಗೆ ಕೃತಜ್ಞನಾಗಿದ್ದೇನೆ. ಯೆಹೂದ್ಯರಲ್ಲದ ಸಭೆಗಳವರೆಲ್ಲರೂ ಅವರಿಗೆ ಕೃತಜ್ಞರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ನನ್ನ ಪ್ರಾಣದ ನಿಮಿತ್ತವಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಒಡ್ಡಿದರು. ಅವರಿಗೆ ನಾನು ಮಾತ್ರವೇ ಅಲ್ಲ ಯೆಹೂದ್ಯರಲ್ಲದವರು ಎಲ್ಲಾ ಸಭೆಗಳವರೂ ಕೃತಜ್ಞರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಮಾಜೊ ಜಿವ್ ರಾಕುಸಾಟ್ನಿ ಅಪ್ನಾಚೊ ಜಿವ್ ಅಪಾಯಾತ್ ಘಾಲುಕ್ ಸೈತ್ ತೆನಿ ಫಾಟಿ-ಫಿಡೆ ಬಗುಕ್‍ನ್ಯಾತ್. ಜುದೆವ್ ನ್ಹಯ್ ಅಸಲ್ಲ್ಯಾ ಲೊಕಾಂಚೆ ದೆವಾಕ್ ವಿಶ್ವಾಸ್ ಕರಲ್ಲೆ ಸಗ್ಳೆ ತಾಂಡೆಬಿ ತೆನಿ ಕರಲ್ಲ್ಯಾ ಉಪ್ಕಾರಾಚಿ ಯಾದ್ ಕಾಡ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:4
17 ತಿಳಿವುಗಳ ಹೋಲಿಕೆ  

ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದರಲ್ಲಿಯೇ ಪ್ರೀತಿ ಇಂಥದೆಂದು ನಮಗೆ ತಿಳಿದು ಬಂದದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.


ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.


ದೇವಜನರಿಗೋಸ್ಕರ ಹಣ ವಸೂಲುಮಾಡುವದನ್ನು ಕುರಿತು ನಾನು ಹೇಳುವದೇನಂದರೆ, ಗಲಾತ್ಯದ ಸಭೆಗಳಿಗೆ ನಾನು ಹೇಳಿಕೊಟ್ಟ ಕ್ರಮದಂತೆ ನೀವೂ ಮಾಡಿರಿ.


ಆದರೂ ಕರ್ತನು ಪ್ರತಿಯೊಬ್ಬನಿಗೆ ಯಾವ ಯಾವ ಸ್ಥಿತಿಯನ್ನು ನೇವಿುಸಿದ್ದಾನೋ, ಅಂದರೆ ದೇವರು ಕರೆಯುವಾಗ ಪ್ರತಿಯೊಬ್ಬನು ಯಾವ ಯಾವ ಸ್ಥಿತಿಯಲ್ಲಿ ಇದ್ದಾನೋ ಆಯಾ ಸ್ಥಿತಿಗೆ ಸರಿಯಾಗಿ ನಡೆದುಕೊಳ್ಳಲಿ. ಹೀಗೆ ಎಲ್ಲಾ ಸಭೆಗಳಲ್ಲಿಯೂ ಆಜ್ಞಾಪಿಸುತ್ತೇನೆ.


ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವದು ಅಪರೂಪ. ಉಪಕಾರಿಗೋಸ್ಕರ ಪ್ರಾಣಕೊಡುವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು.


ಸಭೆಗಳು ಕ್ರಿಸ್ತನಂಬಿಕೆಯಲ್ಲಿ ದೃಢವಾಗುತ್ತಾ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚುತ್ತಾ ಬಂದವು.


ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ಸಂಚರಿಸುತ್ತಾ ಸಭೆಗಳನ್ನು ದೃಢಪಡಿಸಿದನು.


ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವದೂ ಇಲ್ಲ.


ಆದಕಾರಣ ಯೆಹೋವನು ಇಂತೆನ್ನುತ್ತಾನೆ - ಇಗೋ, ಈ ವಂಶಕ್ಕೆ ನಾನೇ ಕೇಡನ್ನು ಕಲ್ಪಿಸುತ್ತೇನೆ; ಅದರ ಭಾರದಿಂದ ನಿಮ್ಮ ಕುತ್ತಿಗೆಗಳನ್ನು ತಪ್ಪಿಸಿಕೊಳ್ಳಲಾರಿರಿ, ನೀವು ತಲೆಯೆತ್ತಿ ನಡೆಯುವದಕ್ಕಾಗದು; ಅದು ಕೆಟ್ಟಕಾಲವೇ ಸರಿ.


ನನ್ನ ಶತ್ರುಗಳನ್ನು ಬೆಂಗೊಟ್ಟು ಓಡಮಾಡಿದ್ದೀ; ನನ್ನ ಹಗೆಯವರನ್ನು ನಿರ್ಮೂಲ ಮಾಡುವೆನು.


ಅವರನ್ನು ತನ್ನ ಬಳಿಗೆ ತಂದಮೇಲೆ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರನ್ನು ಕರಿಸಿ ತನ್ನ ಜೊತೆಯಲ್ಲಿ ಬಂದಿದ್ದ ಸೈನ್ಯಾಧಿಪತಿಗಳಿಗೆ - ಹತ್ತಿರ ಬಂದು ಈ ಅರಸರ ಕೊರಳಿನ ಮೇಲೆ ಪಾದಗಳನ್ನಿಡಿರಿ ಎಂದು ಹೇಳಲು ಅವರು ಹತ್ತಿರ ಬಂದು ಅವರ ಕುತ್ತಿಗೆಯ ಮೇಲೆ ಕಾಲಿಟ್ಟರು.


ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವದೇನಂದರೆ - ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಾತನಿಂದ


ಹೀಗಿರಲಾಗಿ ಯೂದಾಯ ಗಲಿಲಾಯ ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಹೆಚ್ಚುತ್ತಾ ಬಂತು.


ಕ್ರಿಸ್ತ ಯೇಸುವಿನ ಸೇವೆಯಲ್ಲಿ ನನ್ನ ಜೊತೆಕೆಲಸದವರಾದ ಪ್ರಿಸ್ಕಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ಹೇಳಿರಿ.


ಅವರ ಮನೆಯಲ್ಲಿ ಕೂಡುವ ಸಭೆಗೆ ಸಹ ನನ್ನ ವಂದನೆಯನ್ನು ಹೇಳಿರಿ. ಆಸ್ಯ ಸೀಮೆಯಲ್ಲಿ ಕ್ರಿಸ್ತನಿಗೆ ಪ್ರಥಮಫಲವಾಗಿರುವ ನನ್ನ ಪ್ರಿಯನಾದ ಎಪೈನೆತನಿಗೆ ವಂದನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು