Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:1 - ಕನ್ನಡ ಸತ್ಯವೇದವು J.V. (BSI)

1 ಆದದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಯಾವನಾದರೂ ಸರಿಯೇ, ಉತ್ತರ ಹೇಳುವದಕ್ಕೆ ನಿನಗೆ ಮಾರ್ಗವಿಲ್ಲ. ಹೇಗಂದರೆ ಮತ್ತೊಬ್ಬರಲ್ಲಿ ದೋಷವೆಣಿಸುವದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ನಡಿಸುತ್ತೀಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆದ್ದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷ ಹುಡುಕುವ ನೀನು ಯಾವನಾದರೂ ಸರಿಯೇ, ನಿನಗೆ ಅದರಿಂದ ಕ್ಷಮೆಯಿಲ್ಲ. ಯಾಕೆಂದರೆ, ಮತ್ತೊಬ್ಬರಲ್ಲಿ ದೋಷ ಹುಡುಕುವುದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ಮಾಡುತ್ತೀಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇತರರು ದೋಷಿಗಳೆಂದು ತೀರ್ಪುನೀಡುವ ಮಾನವನೇ, ನೀನು ಯಾರೇ ಆಗಿರು, ನೀನು ಮಾತ್ರ ನಿರ್ದೋಷಿಯೆಂದು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಇತರರಿಗೆ ತೀರ್ಪುನೀಡುವ ನೀನು ಅವರು ಮಾಡುವ ತಪ್ಪುಗಳನ್ನು ನೀನೂ ಮಾಡಿದೆಯಾದರೆ, ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಇತರ ಜನರಿಗೆ ತೀರ್ಪು ಮಾಡಬಲ್ಲೆವು” ಎಂದು ನಿಮ್ಮ ವಿಷಯದಲ್ಲಿ ಯೋಚಿಸಿಕೊಳ್ಳಬೇಡಿ. ಏಕೆಂದರೆ ನೀವು ಸಹ ಪಾಪಮಾಡಿ ಅಪರಾಧಿಗಳಾಗಿದ್ದೀರಿ. ನೀವೂ ಆ ಜನರಿಗೆ ತೀರ್ಪು ಮಾಡುತ್ತೀರಿ. ಆದರೆ ಅದೇ ಕಾರ್ಯಗಳನ್ನು ನೀವೂ ಮಾಡುತ್ತೀರಿ. ಆದ್ದರಿಂದ ನೀವು ಅವರಿಗೆ ತೀರ್ಪು ಮಾಡುವಾಗ, ನಿಜವಾಗಿಯೂ ನಿಮಗೇ ತೀರ್ಪು ಮಾಡಿಕೊಳ್ಳುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದ್ದರಿಂದ, ಯಾವ ಕಾರಣಕ್ಕಾಗಿ ನೀನು ಇತರರಿಗೆ ತೀರ್ಪು ಮಾಡುತ್ತಿರುವೆಯೋ ಅದನ್ನೇ ನೀನೂ ಮಾಡುತ್ತಿರುವುದರಿಂದ ನಿನ್ನನ್ನು ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು. ಇತರರ ಮೇಲೆ ತೀರ್ಪುಮಾಡುವ ನಿನಗೆ ಹೇಳುವುದಕ್ಕೆ ನೆಪವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ದುಸ್ರ್ಯಾಂಚ್ಯಾ ವಿಶಯಾತ್ನಿ ನಿರ್ನಯ್ ಕರ್‍ತಲ್ಯಾ ಮಾಜ್ಯಾ ದೊಸ್ತಾ, ತಿಯಾ ಕೊನ್ ಬಿ ರ್‍ಹಾಂವ್ದಿತ್, ತುಕಾ ಮಾಪಿ ನಾ, ಕಶ್ಯಾಕ್ ಮಟ್ಲ್ಯಾರ್, ದುಸ್ರ್ಯಾಂಚ್ಯಾ ಭುತ್ತುರ್ ಚುಕಾ ಹುಡಕ್ತಲ್ಯಾ ತುಕಾ ತಿಯಾಚ್ ಚುಕಿದಾರ್ ಮನುನ್ ನಿರ್ನಯ್ ಕರುನ್ ಘೆಟ್ಲ್ಯಾ ಸಾರ್ಕೆ ಹೊಲೆ. ಅನಿ ಎಕ್ಲ್ಯಾಂಚ್ಯಾ ಚುಕಾ ಹುಡಕ್ತಲೊ ತಿಯಾಬಿ ತೆನಿ ಕರಲ್ಲಿಚ್ ಕಾಮಾ ಕರ್ತೆಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:1
20 ತಿಳಿವುಗಳ ಹೋಲಿಕೆ  

ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವದಿಲ್ಲ; ಬಿಡಿಸಿರಿ, ಆಗ ನಿಮ್ಮನ್ನೂ ಬಿಡಿಸುವರು;


ಎಲೈ ಮನುಷ್ಯನೇ, ಅಂಥವುಗಳನ್ನು ನಡಿಸುವವರಲ್ಲಿ ದೋಷವೆಣಿಸಿ ಅವುಗಳನ್ನೇ ಮಾಡುತ್ತಿರುವ ನೀನು ದೇವರ ದಂಡನೆಯ ತೀರ್ಪಿಗೆ ತಪ್ಪಿಸಿಕೊಂಡೇನೆಂದು ಯೋಚಿಸುತ್ತೀಯಾ?


ಎಲೋ ಮನುಷ್ಯನೇ, ಹಾಗನ್ನಬೇಡ; ದೇವರಿಗೆ ಎದುರುಮಾತಾಡುವದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ - ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?


ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪುಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದ ಹಾಗಾಗುವದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ.


ಅಪ್ರಯೋಜಕನೇ, ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾಗಿದೆ ಎಂಬದಕ್ಕೆ ದೃಷ್ಟಾಂತಬೇಕೋ?


ಅದಕ್ಕೆ ಅವನು - ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವದನ್ನು ಎತ್ತಿಕೊಂಡು ಹೋಗುವ ಬಿತ್ತದೆಯಿರುವದನ್ನು ಕೊಯ್ಯುವ ಕಠಿನ ಮನುಷ್ಯನು ಎಂದು ತಿಳಿದಿಯಾ?


ಎಲೌ ಸ್ತ್ರೀಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಎಲೈ ಪುರುಷನೇ, ನಿನ್ನ ಹೆಂಡತಿಯನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು?


ಆತನು - ಎಲಾ ಮನುಷ್ಯ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇವಿುಸಿದವರಾರು ಎಂದು ಅವನನ್ನು ಕೇಳಿ


ಆದರೆ ಅಂಥವುಗಳನ್ನು ನಡಿಸುವವರ ವಿಷಯದಲ್ಲಿ ದೇವರು ಮಾಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವದೆಂದು ಬಲ್ಲೆವು.


ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಉತ್ತಮಸ್ಥಾನದಲ್ಲಿದ್ದೇವೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಬಿದ್ದವರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.


ನಿನಗಿರುವ ನಂಬಿಕೆಯು ದೇವರಿಗೆ ಮಾತ್ರ ಗೋಚರವಾಗಿ ನಿನ್ನ ಮಟ್ಟಿಗೇ ಇರಲಿ. ತಾನು ಒಪ್ಪಿದ ಕೆಲಸದ ವಿಷಯದಲ್ಲಿ ಇದು ಸರಿಯೋ ಸರಿಯಲ್ಲವೋ ಎಂದು ಸಂಶಯ ಪಡದವನೇ ಧನ್ಯನು.


ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು