Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:10 - ಕನ್ನಡ ಸತ್ಯವೇದವು J.V. (BSI)

10 ಆದರೆ ಒಳ್ಳೆದನ್ನು ನಡಿಸುವ ಪ್ರತಿಯೊಬ್ಬನಿಗೆ ಪ್ರಭಾವವೂ ಮಾನವೂ ಮನಶ್ಶಾಂತಿಯೂ ಉಂಟಾಗುವವು - ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ ಸಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ, ಒಳ್ಳೆಯದನ್ನು ಅನುಸರಿಸುವ ಪ್ರತಿಯೊಬ್ಬನಿಗೆ ಗೌರವವೂ, ಮಾನವೂ, ಮನಶಾಂತಿಯೂ ಉಂಟಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಂತೆಯೇ, ಯೆಹೂದ್ಯರನ್ನು ಮೊದಲ್ಗೊಂಡು ಇತರರಿಗೂ ಸತ್ಕಾರ್ಯಗಳನ್ನು ಮಾಡುವ ಪ್ರತಿಯೊಬ್ಬರಿಗೂ ಮಹಿಮೆ, ಗೌರವ, ಶಾಂತಿ ಲಭಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಒಳ್ಳೆಯದನ್ನು ಮಾಡುವ ಪ್ರತಿಯೊಬ್ಬರಿಗೂ ಅಂದರೆ ಮೊದಲನೆಯದಾಗಿ ಯೆಹೂದ್ಯರಿಗೆ, ಅನಂತರ ಗ್ರೀಕರಿಗೆ ಸಹ ದೇವರು ಮಹಿಮೆಯನ್ನು, ಘನತೆಯನ್ನು ಮತ್ತು ಶಾಂತಿಯನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಒಳ್ಳೆಯದನ್ನು ನಡೆಸುವ ಪ್ರತಿಯೊಬ್ಬನಿಗೆ ಮಹಿಮೆಯೂ ಗೌರವವೂ ಸಮಾಧಾನವೂ ಉಂಟಾಗುತ್ತವೆ. ಯೆಹೂದ್ಯರಿಗೆ ಮೊದಲು, ಅನಂತರ ಯೆಹೂದ್ಯರಲ್ಲದವರಿಗೂ ಸಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಖರೆ ದೆವ್ ಬರೆ ಕರಲ್ಲ್ಯಾ ಸಗ್ಳ್ಯಾಕ್ನಿ ಪಯ್ಲೆ ಜುದೆವಾಕ್ನಿ ಅನಿ ತಸೆಚ್ ಜುದೆವ್ ನ್ಹಯ್ ಹೊತ್ತ್ಯಾಕ್ನಿ ಮಹಿಮಾ, ಮಾನ್, ಅನಿ ಶಾಂತಿ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:10
45 ತಿಳಿವುಗಳ ಹೋಲಿಕೆ  

ಧರ್ಮದಿಂದ ಸಮಾಧಾನವು ಫಲಿಸುವದು, ಶಾಂತಿ ನಿರ್ಭಯಗಳು ಧರ್ಮದ ನಿತ್ಯಪರಿಣಾಮವಾಗಿರುವವು.


ಯೆಹೋವನೇ, ನೀನು ನಮಗೆ ಸಮಾಧಾನವನ್ನು ವಿಧಿಸುವಿ, ನಾವು ನಡಿಸಿದ್ದೆಲ್ಲವೂ ನೀನು ನಮಗೋಸ್ಕರ ನಡಿಸಿದ್ದೇ ಸರಿ.


ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ ಎಂಬದೇ.


ಬಂಗಾರವು ನಾಶವಾಗುವಂಥದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟಾಹಾಕಿ ಶೋಧಿಸುವದುಂಟಷ್ಟೆ. ಬಂಗಾರಕ್ಕಿಂತ ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವ ಮಾನಗಳನ್ನು ಉಂಟುಮಾಡುವದು.


ನಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಲಕ್ಷಣವಾಗಿರುವ ಶಾಂತಗುಣದಿಂದ ಅದರ ಫಲವನ್ನು ತೋರಿಸಲಿ.


ಶರೀರಭಾವದವುಗಳ ಮೇಲೆ ಮನಸ್ಸಿಡುವದು ಮರಣ; ಪವಿತ್ರಾತ್ಮನವುಗಳ ಮೇಲೆ ಮನಸ್ಸಿಡುವದು ಜೀವವೂ ಮನಶ್ಶಾಂತಿಯೂ ಆಗಿದೆ.


ಯಾರು ಪ್ರಭಾವ ಮಾನ ನಿರ್ಲಯತ್ವಗಳನ್ನು ಹೊಂದಬೇಕೆಂದು ಒಳ್ಳೇದನ್ನು ಬೇಸರಗೊಳ್ಳದೆ ಮಾಡುತ್ತಾರೋ ಅವರಿಗೆ ನಿತ್ಯಜೀವವನ್ನು ಕೊಡುವನು.


ಕತ್ತಲಲ್ಲಿಯೂ ಮರಣಾಂಧಕಾರದಲ್ಲಿಯೂ ವಾಸಿಸಿರುವವರಾದ ನಮಗೆ ಪ್ರಕಾಶ ಕೊಟ್ಟು ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವದು ಅಂದನು.


ದೇವರ ಚಿತ್ತಕ್ಕೆ ಒಡಂಬಟ್ಟು ಸಮಾಧಾನಹೊಂದು, ಇದರಿಂದ ನಿನಗೆ ಶುಭವಾಗುವದು.


ಅವನ ನಂಬಿಕೆಯು ಕ್ರಿಯೆಗಳೊಂದಿಗೆ ಪ್ರವರ್ತಿಸಿ ಆ ಕ್ರಿಯೆಗಳಿಂದಲೇ ಸಿದ್ಧಿಗೆ ಬಂತೆಂಬದು ಕಾಣಬರುತ್ತದಲ್ಲಾ.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋಜನವಿಲ್ಲ. ಪ್ರೀತಿಯಿಂದ ಕೆಲಸ ನಡಿಸುವ ನಂಬಿಕೆಯಿಂದಲೇ ಪ್ರಯೋಜನವಾಗಿದೆ.


ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ಉಂಟಾದ ಸಮಾಧಾನದಲ್ಲಿ ಇರೋಣ.


ಕೆಟ್ಟದ್ದನ್ನು ನಡಿಸುವ ಪ್ರತಿಯೊಬ್ಬ ನರಪ್ರಾಣಿಗೆ ಕಷ್ಟವೂ ಸಂಕಟವೂ ಬರುವವು - ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ ಸಹ.


ನೀವು ನನ್ನಲ್ಲಿದ್ದು ಮನಶ್ಶಾಂತಿಯನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟ ಉಂಟು; ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ ಎಂದು ಹೇಳಿದನು.


ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವಶಾಂತಿಯು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವದು.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ - ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ದಯೆ ಉಪಕಾರ ನಂಬಿಕೆ ಸಾಧುತ್ವ ಶಮೆದಮೆ ಇಂಥವುಗಳೇ.


ನಿರೀಕ್ಷೆಯ ಮೂಲನಾದ ದೇವರು ನಂಬಿಕೆಯಿಂದುಂಟಾಗುವ ಸಂತೋಷವನ್ನೂ ಮನಶ್ಶಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಿ ನೀವು ಪವಿತ್ರಾತ್ಮನ ಬಲಗೂಡಿದವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.


ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.


ಮತ್ತು ಪ್ರಭಾವ ಹೊಂದುವದಕ್ಕೆ ತಾನು ಮುಂದಾಗಿ ಸಿದ್ಧಮಾಡಿದ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.


ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮುದ್ದೆಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?


ದೇವರು ಪಕ್ಷಪಾತಿಯಲ್ಲ, ಯಾವ ಜನರಲ್ಲಿಯಾದರೂ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.


ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ಹಿಂದೆ ಬರಲಿ; ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನು ಸಹ ಇರುವನು. ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ತಂದೆಯು ಅವನಿಗೆ ಬಹುಮಾನ ಮಾಡುವನು.


ಗಳಿಗೆ ಬಂದಾಗ ಆತನು ತನ್ನ ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಊಟಕ್ಕೆ ಕೂತುಕೊಂಡನು.


ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡರೆ ಎಷ್ಟೋ ಒಳ್ಳೇದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.


ಯಜಮಾನನು ಬಂದು ಯಾವ ಯಾವ ಆಳುಗಳು ಎಚ್ಚರವಾಗಿರುವದನ್ನು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಆತನೇ ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಹತ್ತಿರಕ್ಕೆ ಬಂದು ಅವರಿಗೆ ಸೇವೆಮಾಡುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು; ಯಾಕಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು ಎಂದು ಹೇಳಿದನು.


ಆ ಮನೆಯವರು ಯೋಗ್ಯರಾಗಿದ್ದರೆ ನಿಮ್ಮ ಆಶೀರ್ವಾದವು ಅವರಿಗೆ ಆಗಲಿ; ಅಯೋಗ್ಯರಾಗಿದ್ದರೆ ನಿಮ್ಮ ಆಶೀರ್ವಾದವು ನಿಮಗೆ ಹಿಂದಕ್ಕೆ ಬರಲಿ.


ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ ಅದಕ್ಕೆ ಸೌಖ್ಯವನ್ನು ಕೊಟ್ಟು ನಿವಾಸಿಗಳನ್ನು ಗುಣಪಡಿಸುವೆನು; ಸ್ಥೈರ್ಯಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು;


ಯೆಹೋವನು ಮನುಷ್ಯರ ಬಾಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ - ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು ಎಂದು ಹೇಳುತ್ತಾನೆ.


ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಯೆಹೋವನು ನುಡಿಯುತ್ತಾನೆ.


ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು! ನಿನ್ನ ಸುಖವು ದೊಡ್ಡ ನದಿಯಂತೆಯೂ ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು;


ಅಧರ್ಮಿಯ ಸಂಬಳವು ಜೊಳ್ಳು; ಧರ್ಮವನ್ನು ಬಿತ್ತುವವನ ಲಾಭವು ಗಟ್ಟಿ.


ನನ್ನಲ್ಲಿ ಧನಘನತೆಗಳೂ ಶ್ರೇಷ್ಠಸಂಪತ್ತೂ ನೀತಿಯೂ ಇರುತ್ತವೆ.


ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವದು.


ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು; ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು.


ಅವನು ಸಜ್ಜನನೂ ನೀತಿವಂತನೂ ಮನಃಪೂರ್ವಕವಾಗಿ ಸತ್ಯವಚನವನ್ನಾಡುವವನೂ ಆಗಿರಬೇಕು.


ನಿನ್ನ ಗೋತ್ರದವರೂ ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಾಯೇಲ್‍ದೇವರಾದ ಯೆಹೋವನೆಂಬ ನಾನು ಈಗ ತಿಳಿಸುವದೇನಂದರೆ - ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರು ತಿರಸ್ಕಾರಹೊಂದುವರು.


ಹಿರೀ ಕುರುಬನು ಪ್ರತ್ಯಕ್ಷನಾಗುವಾಗ ನೀವು ದೇವಪ್ರಭಾವವೆಂಬ ಎಂದಿಗೂ ಬಾಡದ ಜಯಮಾಲೆಯನ್ನು ಹೊಂದುವಿರಿ.


ಶಾಂತಿಯನ್ನು ನಿಮಗೆ ಬಿಟ್ಟುಹೋಗುತ್ತೇನೆ, ನನ್ನಲ್ಲಿರುವಂಥ ಶಾಂತಿಯನ್ನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಿಂದ ನಾನು ನಿಮಗೆ ಕೊಡುವದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.


ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ; ಬೆಟ್ಟಗುಡ್ಡಗಳು ನಿಮ್ಮ ಮುಂದೆ ಜಯ ಘೋಷಮಾಡುವವು, ಅಡವಿಯ ಮರಗಳೆಲ್ಲಾ ಚಪ್ಪಾಳೆಹೊಡೆಯುವವು.


ಸರ್ವಯುಗಗಳ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಏಕದೇವರಿಗೆ ಯುಗಯುಗಾಂತರಗಳಲ್ಲಿಯೂ ಮಾನಪ್ರಭಾವಗಳಿರಲಿ. ಆಮೆನ್.


ಅವನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು