Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:14 - ಕನ್ನಡ ಸತ್ಯವೇದವು J.V. (BSI)

14 ಧರ್ಮಶಾಸ್ತ್ರವಿಲ್ಲದ ಅನ್ಯಜನರು ಸ್ವಾಭಾವಿಕವಾಗಿ ಧರ್ಮಶಾಸ್ತ್ರದಲ್ಲಿ ಹೇಳಿದಂತೆ ನಡೆದರೆ ಅವರು ಧರ್ಮಶಾಸ್ತ್ರವಿಲ್ಲದವರಾಗಿದ್ದರೂ ತಾವೇ ತಮಗೆ ಧರ್ಮಪ್ರಮಾಣವಾಗಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಧರ್ಮಶಾಸ್ತ್ರವಿಲ್ಲದ ಅನ್ಯಜನರು ಸ್ವಾಭಾವಿಕವಾಗಿ ಧರ್ಮಶಾಸ್ತ್ರದಲ್ಲಿ ಹೇಳಿದಂತೆ ನಡೆದುಕೊಂಡರೆ ಅವರು ಧರ್ಮಶಾಸ್ತ್ರವಿಲ್ಲದವರಾಗಿದ್ದರೂ, ತಮಗೆ ತಾವೇ ಧರ್ಮಶಾಸ್ತ್ರವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯೆಹೂದ್ಯರಲ್ಲದವರಿಗೆ, ಮೋಶೆಯ ಧರ್ಮಶಾಸ್ತ್ರ ಇರುವುದಿಲ್ಲ. ಅವರು ಅದರ ವಿಧಿನಿಯಮಗಳನ್ನು ಸ್ವಾಭಾವಿಕವಾಗಿ ಅನುಸರಿಸಿದ್ದೇ ಆದರೆ, ಅವರಿಗೆ ಧರ್ಮಶಾಸ್ತ್ರವಿಲ್ಲದಿದ್ದರೂ ಅವರ ಅಂತರಂಗವೇ ಅವರಿಗೆ ಧರ್ಮಶಾಸ್ತ್ರವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೂದ್ಯರಲ್ಲದವರು ಧರ್ಮಶಾಸ್ತ್ರವನ್ನು ಹೊಂದಿಲ್ಲ. ಆದರೆ ಅವರು ಧರ್ಮಶಾಸ್ತ್ರವನ್ನು ಸ್ವಾಭಾವಿಕವಾಗಿ ಅನುಸರಿಸಿದ್ದೇಯಾದರೆ, ಅವರಿಗೆ ಧರ್ಮಶಾಸ್ತ್ರವಿಲ್ಲದಿದ್ದರೂ ಅವರ ಅಂತರಂಗವೇ ಅವರಿಗೆ ಧರ್ಮಶಾಸ್ತ್ರವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿಯಮವಿಲ್ಲದ ಯೆಹೂದ್ಯರಲ್ಲದವರು ಸ್ವಾಭಾವಿಕವಾಗಿ ನಿಯಮದಲ್ಲಿ ಹೇಳಿದಂತೆ ನಡೆಯುವಾಗ ಅವರಿಗೆ ನಿಯಮವಿಲ್ಲದಿದ್ದರೂ ಅವರ ಅಂತರಂಗವೇ ನಿಯಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ಖಾಯ್ದೆ ನಾತ್; ಖರೆ ತೆಂಕಾ ಖಾಯ್ದೆ ನಸ್ಲ್ಯಾರ್‍ಬಿ ತೆನಿ ಖಾಯ್ದ್ಯಾತ್ನಿ ಸಾಂಗಲ್ಲ್ಯಾ ಸರ್ಕೆಚ್ ಚಲ್ತ್ಯಾತ್ ಅಶೆ ತೆಂಚೊ ಭುತ್ತುರ್‍ಲೊ ಮನುಚ್ ತೆಂಕಾ ಖಾಯ್ದೊ ಹೊವ್ನ್ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:14
16 ತಿಳಿವುಗಳ ಹೋಲಿಕೆ  

ಅವನು ಶರೀರದಲ್ಲಿ ಸುನ್ನತಿಯಿಲ್ಲದವನಾಗಿದ್ದು ಧರ್ಮಶಾಸ್ತ್ರದಲ್ಲಿ ಹೇಳಿದ್ದನ್ನು ನೆರವೇರಿಸುವದರಲ್ಲಿ ಶಾಸ್ತ್ರವೂ ಸುನ್ನತಿಯೂ ಇದ್ದು ಧರ್ಮವನ್ನು ಮೀರಿ ನಡೆಯುವ ನಿನ್ನನ್ನು ದೋಷಿಯೆಂದು ನಿರ್ಣಯಿಸುವದಿಲ್ಲವೇ?


ನೀವು ಪೂರ್ವಕಾಲದಲ್ಲಿ ಕ್ರಿಸ್ತನನ್ನು ಸೇರದವರಾಗಿದ್ದು ಇಸ್ರಾಯೇಲ್ಯ ಹಕ್ಕಿನಲ್ಲಿ ಪಾಲಿಲ್ಲದವರೂ [ಅಬ್ರಹಾಮನಿಗೆ ಉಂಟಾದ] ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಸೇರದವರೂ ಈ ಲೋಕದಲ್ಲಿ ಯಾವ ನಿರೀಕ್ಷೆಯಿಲ್ಲದವರೂ ದೇವರನ್ನರಿಯದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.


ಆ ಅಜ್ಞಾನಕಾಲಗಳನ್ನು ದೇವರು ಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಾನೆ.


ದೇವರು ಪಕ್ಷಪಾತಿಯಲ್ಲ, ಯಾವ ಜನರಲ್ಲಿಯಾದರೂ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.


ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವದಲ್ಲದೆ ಮಾಡುವವರನ್ನೂ ಅನುಮೋದಿಸುತ್ತಾರೆ.


ನಾವು ನಮ್ಮ ದೇವರಾದ ಯೆಹೋವನಿಗೆ ಮೊರೆಯಿಡುವಾಗೆಲ್ಲಾ ಆತನು ಸಮೀಪವಾಗಿಯೇ ಇದ್ದಾನಲ್ಲಾ; ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವನು?


ಪುರುಷನು ಕೂದಲು ಬೆಳಸಿಕೊಂಡರೆ ಅದು ಅವನಿಗೆ ಅವಮಾನಕರವಾಗಿದೆಯೆಂದೂ


ಕಡೇ ಮಾತೇನಂದರೆ, ಸಹೋದರರೇ, ಯಾವಾವದು ಸತ್ಯವೂ ಮಾನ್ಯವೂ ನ್ಯಾಯವೂ ಶುದ್ಧವೂ ಪ್ರೀತಿಕರವೂ ಮನೋಹರವೂ ಆಗಿದೆಯೋ, ಯಾವದು ಸದ್ಗುಣವಾಗಿದೆಯೋ, ಯಾವದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳನ್ನೂ ಲಕ್ಷ್ಯಕ್ಕೆ ತಂದುಕೊಳ್ಳಿರಿ.


ಗತಿಸಿಹೋದ ಕಾಲದಲ್ಲಿ ಆತನು ಎಲ್ಲಾ ಜನಾಂಗಗಳನ್ನು ತಮ್ಮ ತಮ್ಮ ಮನಸ್ಸಿಗೆ ತೋಚಿದ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟನು.


ಹೇಗಂದರೆ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದದೆ ಎಂಬದನ್ನು ತೋರ್ಪಡಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಯೋಚನೆಗಳು ವಾದಿಪ್ರತಿವಾದಿಗಳಂತೆ - ಇದು ತಪ್ಪೆಂದು ತಪ್ಪಲ್ಲವೆಂದು ಸೂಚಿಸುತ್ತವೆ.


ನಾನು ದೇವರ ನೇಮವಿಲ್ಲದವನಲ್ಲ, ಕ್ರಿಸ್ತ ನಿಯಮಕ್ಕೊಳಗಾದವನೇ; ಆದರೂ ನಿಯಮವಿಲ್ಲದವರನ್ನು ಸಂಪಾದಿಸಿಕೊಳ್ಳುವದಕ್ಕಾಗಿ ಅವರಿಗೆ ನಿಯಮವಿಲ್ಲದವನಂತಾದೆನು.


ನಾವೆಲ್ಲರೂ ಪೂರ್ವದಲ್ಲಿ ಅವಿಧೇಯರಾಗಿದ್ದು ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಫೆಗಳನ್ನು ನೆರವೇರಿಸುತ್ತಾ ನಡೆದು ವಿುಕ್ಕಾದವರಂತೆ ಸ್ವಭಾವಸಿದ್ಧವಾಗಿ ದೇವರ ಕೋಪಕ್ಕೆ ಗುರಿಯಾಗಿದ್ದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು