Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:15 - ಕನ್ನಡ ಸತ್ಯವೇದವು J.V. (BSI)

15 ಹೇಗಂದರೆ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದದೆ ಎಂಬದನ್ನು ತೋರ್ಪಡಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಯೋಚನೆಗಳು ವಾದಿಪ್ರತಿವಾದಿಗಳಂತೆ - ಇದು ತಪ್ಪೆಂದು ತಪ್ಪಲ್ಲವೆಂದು ಸೂಚಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದರಿಂದ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರ್ಪಡಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಆಲೋಚನೆಗಳು ವಾದಿಪ್ರತಿವಾದಿಗಳಂತೆ, ಇದು ತಪ್ಪೆಂದು ಅದು ತಪ್ಪಲ್ಲವೆಂದು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಧರ್ಮಶಾಸ್ತ್ರದ ವಿಧಿನಿಯಮಗಳು ಅವರ ಹೃದಯಗಳಲ್ಲಿ ಲಿಖಿತವಾಗಿವೆಯೆಂದು ಅವರ ನಡತೆಯಿಂದಲೇ ವೇದ್ಯವಾಗುತ್ತದೆ. ಇದು ಸತ್ಯವೆಂಬುದನ್ನು ಅವರ ಮನಸ್ಸಾಕ್ಷಿಯು ಖಚಿತಪಡಿಸುತ್ತದೆ. ಅವರ ಅಂತಃಪ್ರಜ್ಞೆಯೇ ಅವರನ್ನು ದೋಷಿಗಳೆಂದೋ ಇಲ್ಲವೆ ನಿರ್ದೋಷಿಗಳೆಂದೋ ತೀರ್ಮಾನಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಧರ್ಮಶಾಸ್ತ್ರದ ಆಜ್ಞಾವಿಧಿಗಳಿಗನುಸಾರವಾಗಿ ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ತಮ್ಮ ಹೃದಯಗಳು ಬಲ್ಲವೆಂದು ಅವರು ತಮ್ಮ ನಡತೆಯಿಂದಲೇ ತೋರ್ಪಡಿಸುತ್ತಾರೆ. ಇದು ಸತ್ಯವೆಂಬುದನ್ನು ಅವರ ಮನಸ್ಸಾಕ್ಷಿಯು ಖಚಿತಪಡಿಸುತ್ತದೆ. ಅವರ ಅಂತಃಪ್ರಜ್ಞೆಯೇ ಅವರನ್ನು ದೋಷಿಗಳೆಂದೋ ಇಲ್ಲವೆ ನಿರ್ದೋಷಿಗಳೆಂದೋ ತೀರ್ಮಾನಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವರು ತಮ್ಮ ನಡತೆಯಿಂದಲೇ ನಿಯಮವು ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಾಕ್ಷಿಕೊಡುತ್ತದೆ. ಅವರ ಯೋಚನೆಗಳು ಒಂದಕ್ಕೊಂದು ಇದು ತಪ್ಪು ಅಥವಾ ತಪ್ಪಲ್ಲ ಎಂಬುದನ್ನು ಸೂಚಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತೆಂಚಿ ಚಲ್ನುಕುಚ್ ಖಾಯ್ದೆ ತೆಂಚ್ಯಾ ಮನಾತ್ನಿ ಲಿವಲ್ಲೆ ಹಾತ್ ಮನುನ್ ದಾಕ್ವುನ್ ದಿತ್ಯಾತ್, ತೆಂಚಿ ಮನಾಬಿ ಹೆ ಖರೆ ಮನುನ್ ದಾಕ್ವುನ್ ದಿತ್ಯಾತ್, ತೆಂಚ್ಯಾ ಯವ್ಜನ್ಯಾ ತೆಂಕಾ ಕನ್ನಾ-ಕನ್ನಾ ಚುಕ್ ಹಾಯ್ ನಾಹೊಲ್ಯಾರ್ ಸಮಾ ನಾ ಮನುನ್ ಸಾಂಗುನ್ ದಿತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:15
18 ತಿಳಿವುಗಳ ಹೋಲಿಕೆ  

ಕರ್ತನ ಭಯವು ನಮಗಿರುವದರಿಂದ ನಾವು ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಯಥಾರ್ಥರೆಂಬದು ದೇವರಿಗೆ ಗೊತ್ತುಂಟು; ನಿಮ್ಮ ಮನಸ್ಸಿಗೆ ಕೂಡ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.


ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲದವರಿಗೂ ಯಾವದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಮಲಿನವಾಗಿವೆ.


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ನನ್ನ ನೀತಿಯನ್ನು ಎಂದಿಗೂ ಬಿಡದೆ ಭದ್ರವಾಗಿ ಹಿಡಿದುಕೊಳ್ಳುವೆನು. ನನ್ನ ಜೀವಮಾನದ ಯಾವ ದಿನಚರ್ಯದಲ್ಲಿಯೂ ಮನಸ್ಸಾಕ್ಷಿಯು ತಪ್ಪು ತೋರಿಸುವದಿಲ್ಲ.


ಸುಳ್ಳುಬೋಧಕರು ಬಂದು ಸ್ವಂತ ಮನಸ್ಸಿನಲ್ಲಿ ಅಪರಾಧಿಗಳೆಂಬ ಬರೆಯುಳ್ಳವರಾದರೂ ತಾವು ನೀತಿವಂತರೆಂದು ತೋರ್ಪಡಿಸಿಕೊಂಡು


ನನಗೆ ಮಹಾದುಃಖವೂ ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು.


ಇದರ ದೆಸೆಯಿಂದ ದೇವರ ವಿಷಯದಲ್ಲಿಯೂ ಮನುಷ್ಯರ ವಿಷಯದಲ್ಲಿಯೂ ನಾನು ನಿರ್ದೋಷಿ ಎಂದು ಸಾಕ್ಷಿ ಹೇಳುವ ಮನಸ್ಸು ನನಗೆ ಯಾವಾಗಲೂ ಇರಬೇಕೆಂದು ಅಭ್ಯಾಸಮಾಡಿಕೊಳ್ಳುತ್ತೇನೆ.


ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ - ಸಹೋದರರೇ, ನಾನು ಈ ದಿನದವರೆಗೂ ಒಳ್ಳೇ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ ಅಂದನು.


ನೀನೂ ಅನೇಕ ವೇಳೆ ಇತರರನ್ನು ಶಪಿಸಿದ್ದೀ ಎಂಬದಕ್ಕೆ ನಿನ್ನ ಮನಸ್ಸೇ ಸಾಕ್ಷಿ.


ಇದಲ್ಲದೆ ಅರಸನು ಅವನಿಗೆ - ನೀನು ನನ್ನ ತಂದೆಯಾದ ದಾವೀದನಿಗೆ ವಿರೋಧವಾಗಿ ಮಾಡಿದ ಪಾಪಕ್ಕೆ ಮನವೇ ಸಾಕ್ಷಿ; ಯೆಹೋವನು ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವನು.


ಆ ಮನುಷ್ಯನು ಈಕೆ ತನಗೆ ತಂಗಿಯಾಗಬೇಕೆಂದು ತಾನೇ ಹೇಳಲಿಲ್ಲವೇ. ಈಕೆಯೂ ಅವನು ತನಗೆ ಅಣ್ಣನಾಗಬೇಕೆಂದು ಹೇಳಿದಳು. ನಾನು ಯರ್ಥಾರ್ಥಮನಸ್ಸಿನಿಂದಲೂ ಶುದ್ಧಹಸ್ತದಿಂದಲೂ ಇದನ್ನು ಮಾಡಿದೆನು ಅಂದನು.


ಆ ಮಾತನ್ನು ಕೇಳಿ ತಾವೇ ಪಾಪಿಗಳೆಂದು ಮನಸ್ಸಿನಲ್ಲಿ ತಿಳುಕೊಂಡು ಹಿರಿಯರು ಮೊದಲುಗೊಂಡು ಕಿರಿಯರವರೆಗೂ ಒಬ್ಬರ ಹಿಂದೊಬ್ಬರು ಹೊರಗೆ ಹೋದರು; ಯೇಸು ಒಬ್ಬನೇ ಉಳಿದನು, ಮತ್ತು ನಡುವೆ ನಿಂತಿದ್ದ ಹೆಂಗಸು ಅಲ್ಲೇ ಇದ್ದಳು.


ಧರ್ಮಶಾಸ್ತ್ರವಿಲ್ಲದ ಅನ್ಯಜನರು ಸ್ವಾಭಾವಿಕವಾಗಿ ಧರ್ಮಶಾಸ್ತ್ರದಲ್ಲಿ ಹೇಳಿದಂತೆ ನಡೆದರೆ ಅವರು ಧರ್ಮಶಾಸ್ತ್ರವಿಲ್ಲದವರಾಗಿದ್ದರೂ ತಾವೇ ತಮಗೆ ಧರ್ಮಪ್ರಮಾಣವಾಗಿದ್ದಾರೆ;


ಅವನು ಶರೀರದಲ್ಲಿ ಸುನ್ನತಿಯಿಲ್ಲದವನಾಗಿದ್ದು ಧರ್ಮಶಾಸ್ತ್ರದಲ್ಲಿ ಹೇಳಿದ್ದನ್ನು ನೆರವೇರಿಸುವದರಲ್ಲಿ ಶಾಸ್ತ್ರವೂ ಸುನ್ನತಿಯೂ ಇದ್ದು ಧರ್ಮವನ್ನು ಮೀರಿ ನಡೆಯುವ ನಿನ್ನನ್ನು ದೋಷಿಯೆಂದು ನಿರ್ಣಯಿಸುವದಿಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು