Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:19 - ಕನ್ನಡ ಸತ್ಯವೇದವು J.V. (BSI)

19 ಧರ್ಮಶಾಸ್ತ್ರದಲ್ಲಿ ಜ್ಞಾನ ಸತ್ಯಗಳ ಸ್ವರೂಪವೇ ನನಗೆ ಇರುವದರಿಂದ ಕುರುಡರಿಗೆ ದಾರಿತೋರಿಸುವವನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಧರ್ಮಶಾಸ್ತ್ರದಲ್ಲಿ ಜ್ಞಾನಸತ್ಯಗಳ ಸ್ವರೂಪವೇ ನಿನಗೆ ತಿಳಿದಿರುವುದರಿಂದ ಕುರುಡರಿಗೆ ದಾರಿತೋರಿಸುವವನೂ, ಕತ್ತಲೆಯಲ್ಲಿರುವವರಿಗೆ ಬೆಳಕೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನೀನು ಕುರುಡರಿಗೆ ದಾರಿ ತೋರಿಸುವವನೂ ಕತ್ತಲೆಯಲ್ಲಿರುವವರಿಗೆ ಬೆಳಕೂ ಬುದ್ಧಿಹೀನರಿಗೆ ಬೋಧಕನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಸರಿಯಾದ ಮಾರ್ಗವನ್ನು ತಿಳಿದಿಲ್ಲದ ಜನರಿಗೆ ಮಾರ್ಗದರ್ಶಕನಾಗಿಯೂ ಕತ್ತಲೆಯಲ್ಲಿರುವ ಜನರಿಗೆ ಬೆಳಕಾಗಿಯೂ ಇರುವುದಾಗಿ ನಿನ್ನ ಕುರಿತು ಭಾವಿಸಿಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಿನಗೆ ನಿಯಮದ ಜ್ಞಾನ ಮತ್ತು ಸತ್ಯವು ಇರುವುದರಿಂದ ನೀನು ಕುರುಡರಿಗೆ ಮಾರ್ಗದರ್ಶಿಯೂ ಕತ್ತಲೆಯಲ್ಲಿರುವವರಿಗೆ ಬೆಳಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತಿಯಾ ಎಕ್ಲೊ ಕುಡ್ಡ್ಯಾಕ್ ವಾಟ್ ದಾಕ್ವುತಲೊ, ಅನಿ ಕಾಳ್ಕಾತ್ ಚಲ್ತಲ್ಯಾಕ್ನಿ ಎಕ್ ಉಜ್ವೊಡ್ ಮನ್ತಲೆ ತುಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:19
23 ತಿಳಿವುಗಳ ಹೋಲಿಕೆ  

ನಾವಂತು ಕ್ರಿಸ್ತನ ನಿವಿುತ್ತ ಹುಚ್ಚರಾಗಿದ್ದೇವೆ, ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ನೀವು ಬಲಿಷ್ಠರು; ನೀವು ಮಾನಶಾಲಿಗಳು, ನಾವು ಮಾನಹೀನರು.


ಈ ಮಾತಿಗೆ ಅವರು - ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನಮಗೆ ಉಪದೇಶಮಾಡುತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.


ಅವರ ಮಾತನ್ನು ಬಿಡಿರಿ; ತಾವೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸುವದಕ್ಕೆ ಹೋಗುತ್ತಾರೆ; ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಕುಣಿಯಲ್ಲಿ ಬೀಳುವರು ಅಂದನು.


ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವದು. ಹಾಗಾದರೆ ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟೆನ್ನಬೇಕು!


ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಗುಡ್ಡದ ಮೇಲೆ ಕಟ್ಟಿರುವ ಊರು ಮರೆಯಾಗಿರಲಾರದು.


ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳುವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಗನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.


ಆತನೇ ಈಗ ಹೀಗನ್ನುತ್ತಾನೆ - ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪಕಾರ್ಯವೇ ಸರಿ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.


ಅಯ್ಯೋ, ತಮ್ಮಲ್ಲಿ ತಾವೇ ಜ್ಞಾನಿಗಳೆಂದೂ ಸ್ವಂತ ಗಣನೆಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಪಾಡು ಏನು ಹೇಳಲಿ!


ತಾನೇ ಜ್ಞಾನಿಯೆಂದೆಣಿಸಿಕೊಳ್ಳುವವನನ್ನು ನೋಡು; ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.


ಹೀಗೆ ನೀವು ನಿರ್ದೋಷಿಗಳೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.


ಯಾವನೂ ತನ್ನನ್ನು ತಾನೇ ಮೋಸಗೊಳಿಸದಿರಲಿ. ತಾನು ನಿಮ್ಮಲ್ಲಿ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವವನು ಜ್ಞಾನಿಯಾಗುವಂತೆ ಹುಚ್ಚನಾಗಲಿ.


ಅವರು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು ನನ್ನಲ್ಲಿ ನಂಬಿಕೆಯಿಡುವದರಿಂದ ಪಾಪಪರಿಹಾರವನ್ನೂ ಪವಿತ್ರರಾದವರಲ್ಲಿ ಹಕ್ಕನ್ನೂ ಹೊಂದುವಂತೆ ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು.


ಕತ್ತಲಲ್ಲಿಯೂ ಮರಣಾಂಧಕಾರದಲ್ಲಿಯೂ ವಾಸಿಸಿರುವವರಾದ ನಮಗೆ ಪ್ರಕಾಶ ಕೊಟ್ಟು ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವದು ಅಂದನು.


ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವದಿಲ್ಲವೋ ಅವನು ಅದರಲ್ಲಿ ಸೇರುವದೇ ಇಲ್ಲ ಎಂದು ಹೇಳಿ


ಕತ್ತಲಲ್ಲಿ ವಾಸಿಸಿದ ಈ ಸೀಮೆಗಳ ಜನರಿಗೆ ದೊಡ್ಡ ಬೆಳಕು ಕಾಣಿಸಿತು; ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಸೂರ್ಯೋದಯವಾಯಿತು ಎಂಬದು.


ಆತನ ಚಿತ್ತವನ್ನು ಬಲ್ಲವನೂ ಧರ್ಮಶಾಸ್ತ್ರದಿಂದ ಉಪದೇಶವನ್ನು ಹೊಂದಿ ಇದು ತಕ್ಕದ್ದು ಅದು ತಕ್ಕದ್ದಲ್ಲವೆಂದು ವಿವೇಚಿಸುವವನೂ ಆಗಿದ್ದೀ.


ಕತ್ತಲೆಯಲ್ಲಿರುವವರಿಗೆ ಬೆಳಕೂ ತಿಳುವಳಿಕೆಯಿಲ್ಲದವರಿಗೆ ಶಿಕ್ಷಕನೂ ಬಾಲಕರಿಗೆ ಉಪಾಧ್ಯಾಯನೂ ಆಗಿದ್ದೇನೆಂದು ನಂಬಿಕೊಂಡಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು