Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:21 - ಕನ್ನಡ ಸತ್ಯವೇದವು J.V. (BSI)

21 ಹೀಗಿರಲಾಗಿ ಮತ್ತೊಬ್ಬನಿಗೆ ಉಪದೇಶ ಮಾಡುವ ನೀನು ನಿನಗೆ ಉಪದೇಶಮಾಡಿಕೊಳ್ಳದೆ ಇದ್ದೀಯೋ? ಕದಿಯಬಾರದೆಂದು ಬೋಧಿಸುವ ನೀನು ಕದಿಯುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮತ್ತೊಬ್ಬನಿಗೆ ಉಪದೇಶ ಮಾಡುವ ನಿನಗೆ ನೀನೇ ಉಪದೇಶಮಾಡಿಕೊಳ್ಳದೆ ಇದ್ದೀಯೋ? ಕದಿಯಬಾರದೆಂದು ಬೋಧಿಸುವ ನೀನೇ ಕಳ್ಳತನ ಮಾಡುತ್ತಿಯೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹೀಗೆ, ಇತರರಿಗೆ ಉಪದೇಶಿಸುವ ನೀನು, ನಿನಗೆ ನೀನೇ ಉಪದೇಶ ಮಾಡಿಕೊಳ್ಳಬಾರದೇನು? “ಕದಿಯಬಾರದು” ಎಂದು ಬೋಧಿಸುವ ನೀನೇ ಕಳ್ಳತನ ಮಾಡುತ್ತೀಯೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀನು ಬೇರೆಯವರಿಗೆ ಉಪದೇಶಿಸುವೆ. ಹೀಗಿರಲು ನೀನು ನಿನಗೇ ಉಪದೇಶ ಮಾಡಿಕೊಳ್ಳಬಾರದೇಕೆ? ಕದಿಯಬಾರದೆಂದು ನೀನು ಜನರಿಗೆ ಹೇಳುವೆ, ಆದರೆ ನೀನೇ ಕದಿಯುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇತರರಿಗೆ ಉಪದೇಶಿಸುವ ನೀನು, ನಿನಗೆ ನೀನೇ ಉಪದೇಶ ಮಾಡಿಕೋ. ಕದಿಯಬಾರದೆಂದು ಸಾರುವ ನೀನು ಕದಿಯುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತಿಯಾ ದುಸ್ರ್ಯಾಕ್ನಿ ಶಿಕ್ವುತೆ, ತಿಯಾ ತುಕಾಚ್ ಕಶ್ಯಾಕ್ ಶಿಕ್ವಿನೆಯ್‍? “ಚೊರುನಕೊ” ಮನುನ್ ತಿಯಾ ಶಿಕ್ವುತೆಯ್, ಖರೆ ತಿಯಾಚ್ ಚೊರ್ತೆ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:21
16 ತಿಳಿವುಗಳ ಹೋಲಿಕೆ  

ಇತರರನ್ನು ಹೋರಾಟಕ್ಕೆ ಕರೆದ ಮೇಲೆ ನಾನೇ ಅಯೋಗ್ಯನೆನಿಸಿಕೊಂಡೇನೋ ಎಂಬ ಭಯದಿಂದ ನನ್ನ ಮೈಯನ್ನು ಜಜ್ಜಿ ಸ್ವಾಧೀನ ಪಡಿಸಿಕೊಳ್ಳುತ್ತೇನೆ.


ತನ್ನ ಯಜಮಾನನ ಚಿತ್ತವನ್ನು ತಿಳಿದ ಆಳು ಸಿದ್ಧಮಾಡದೆಹೋದರೆ ಅಥವಾ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಅವನು ಬಹಳ ಪೆಟ್ಟು ತಿನ್ನುವನು.


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ, ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ, ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ; ಆದರೂ ಯೆಹೋವನ ಮೇಲೆ ಭಾರಹಾಕಿ - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು ಅಂದುಕೊಳ್ಳುತ್ತಾರೆ.


ಆತನು - ಧರ್ಮೋಪದೇಶಕರೇ, ನಿಮ್ಮ ಗತಿಯನ್ನೂ ಏನು ಹೇಳಲಿ? ನೀವು ಜನರ ಮೇಲೆ ಹೊರಲಾರದ ಹೊರೆಗಳನ್ನು ಹೊರಿಸುತ್ತೀರಿ; ನೀವಾದರೋ ಆ ಹೊರೆಗಳನ್ನು ಒಂದು ಬೆರಳಿನಿಂದಲೂ ಮುಟ್ಟುವದಿಲ್ಲ.


ಅದಕ್ಕೆ ಅವನು - ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವದನ್ನು ಎತ್ತಿಕೊಂಡು ಹೋಗುವ ಬಿತ್ತದೆಯಿರುವದನ್ನು ಕೊಯ್ಯುವ ಕಠಿನ ಮನುಷ್ಯನು ಎಂದು ತಿಳಿದಿಯಾ?


ಆತನು ಅವರಿಗೆ - ನೀವಂತೂ ವೈದ್ಯನೇ, ನಿನ್ನನ್ನೇ ವಾಸಿಮಾಡಿಕೋ ಎಂಬ ಗಾದೆಯನ್ನು ನನಗೆ ಹೇಳಿ ಕಪೆರ್ನೌವಿುನಲ್ಲಿ ಎಂಥೆಂಥ ಕಾರ್ಯಗಳು ನಡೆದವೆಂದು ನಾವು ಕೇಳಿದೆವೋ ಅಂಥವುಗಳನ್ನು ಈ ನಿನ್ನ ಸ್ವಂತ ಸ್ಥಳದಲ್ಲಿ ಮಾಡು ಅನ್ನುವಿರಷ್ಟೆ.


ಅವರಿಗೆ - ನನ್ನ ಆಲಯವು ಪ್ರಾರ್ಥನಾಲಯವೆನಿಸಿಕೊಳ್ಳುವದು ಎಂದು ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿ ಮಾಡುತ್ತೀರಿ ಎಂದು ಹೇಳಿದನು.


ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತಸುರಿಸಿ ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


ಸುನ್ನತಿಮಾಡಿಸಿಕೊಳ್ಳುವ ತಾವಾದರೂ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವದಿಲ್ಲ. ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳಪಡುವದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.


ಮತ್ತು ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾವನೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.


ನೀನು ಬಹು ವಿಷಯಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ; ಇವನ ಕಿವಿ ತೆರೆದಿದ್ದರೂ ಕೇಳನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು