Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:26 - ಕನ್ನಡ ಸತ್ಯವೇದವು J.V. (BSI)

26 ಹೀಗಿರಲಾಗಿ ಸುನ್ನತಿಯಿಲ್ಲದವನು ಧರ್ಮಶಾಸ್ತ್ರದ ನೇಮಗಳ ಪ್ರಕಾರ ನಡೆದರೆ ಸುನ್ನತಿಯಿಲ್ಲದವನಾಗಿದ್ದರೂ ಸುನ್ನತಿಯಿದ್ದವನಂತೆ ಎಣಿಸಲ್ಪಡುವದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಹೀಗಿರಲಾಗಿ ಸುನ್ನತಿಯಿಲ್ಲದವನು ಧರ್ಮಶಾಸ್ತ್ರದ ನೇಮಗಳ ಪ್ರಕಾರ ನಡೆದರೆ ಸುನ್ನತಿಯಿಲ್ಲದವನಾಗಿದ್ದರೂ ಸುನ್ನತಿಯಿದ್ದವನಂತೆ ಎಣಿಸಲ್ಪಡುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸುನ್ನತಿ ಮಾಡಿಸಿಕೊಳ್ಳದ ಮತ್ತೊಬ್ಬನು ಧರ್ಮಶಾಸ್ತ್ರದ ವಿಧಿಗಳನ್ನು ಪಾಲಿಸಿಕೊಂಡು ಬಂದವನಾಗಿದ್ದರೆ, ದೇವರು ಅವನನ್ನು ಸುನ್ನತಿ ಮಾಡಿಸಿಕೊಂಡವನಂತೆ ಪರಿಗಣಿಸುವುದಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೆಹೂದ್ಯರಲ್ಲದ ಜನರಿಗೆ ಸುನ್ನತಿಯಾಗಿಲ್ಲ, ಆದರೆ ಧರ್ಮಶಾಸ್ತ್ರವು ಹೇಳುವುದನ್ನು ಅವರು ಮಾಡುವುದಾದರೆ, ಅವರು ಸುನ್ನತಿಯನ್ನು ಹೊಂದಿದಂಥವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಸುನ್ನತಿಯಿಲ್ಲದವನು ನಿಯಮಗಳನ್ನು ಕೈಗೊಳ್ಳುವವರೆಗೆ ಸುನ್ನತಿಯಿಲ್ಲದವನಾಗಿದ್ದರೂ ಸುನ್ನತಿಯಿದ್ದವನಂತೆ ಎಣಿಸುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಸುನ್ನತ್ ಕರುನ್ ಘೆಯ್ನಸಲ್ಲೊ ಜುದೆವ್ ನ್ಹಯ್ ಹೊತ್ತೊ, ಖಾಯ್ದ್ಯಾಂಚ್ಯಾ ಸಾರ್ಕೆ ಚಲ್ಲೊ ತರ್ ತೊ ಸುನ್ನತ್ ಕರುನ್ ಘೆಯ್‍ನಸಲ್ಲೊ ರ್‍ಹಾಲ್ಯಾರ್‍ಬಿ ದೆವ್ ತೆಕಾ ಮಾನಿ‌ನಸ್ತಾ ರ್‍ಹಾತಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:26
16 ತಿಳಿವುಗಳ ಹೋಲಿಕೆ  

ಆತನು ಎಲ್ಲಾ ದೊರೆತನಗಳಿಗೂ ಅಧಿಕಾರಿಗಳಿಗೂ ಶಿರಸ್ಸು. ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದಿರಿ; ಈ ಸುನ್ನತಿಯು ಕೈಯಿಂದ ಮಾಡಿದ್ದಲ್ಲ, ಇದು ಪಾಪಾಧೀನಸ್ವಭಾವವನ್ನು ವಿಸರ್ಜಿಸುವದೇ; ಇದೇ ಕ್ರಿಸ್ತೀಯ ಸುನ್ನತಿ;


ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮಾನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವದಕ್ಕೆ ಮಾರ್ಗವಾಯಿತು.


ನಿಜವಾದ ಸುನ್ನತಿಯವರು ಯಾರಂದರೆ - ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವೇ.


ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ; ಶರೀರದಲ್ಲಿ ಕೈಯಿಂದ ಸುನ್ನತಿಮಾಡಿಸಿಕೊಂಡು ಸುನ್ನತಿಯವರೆನಿಸಿಕೊಳ್ಳುವವರು ನಿಮ್ಮನ್ನು ಸುನ್ನತಿಯಿಲ್ಲದವರೆಂದು ಹೇಳುತ್ತಾರೆ.


ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವದಕ್ಕೆ ಅವರ ನಂಬಿಕೆಯೇ ಆಧಾರ; ಸುನ್ನತಿಯಿಲ್ಲದವರನ್ನೂ ಹಾಗೆಯೇ ನಿರ್ಣಯಿಸುವದಕ್ಕೆ ನಂಬಿಕೆಯೇ ಕಾರಣ.


ಆಗ ಯೇಸು ಆಕೆಗೆ - ಅಮ್ಮಾ, ನಿನ್ನ ನಂಬಿಕೆ ಬಹಳ; ನಿನ್ನ ಮನಸ್ಸಿನಂತೆ ಆಗಲಿ ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥಳಾದಳು.


ನೀನು ಧರ್ಮಶಾಸ್ತ್ರಾನುಸಾರವಾಗಿ ನಡೆಯುವವನಾದರೆ ಸುನ್ನತಿಯೆಂಬ ಸಂಸ್ಕಾರವು ಪ್ರಯೋಜನಕರವಾದದ್ದೇ ಸರಿ; ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆಯುವವನಾಗಿದ್ದರೆ ನಿನಗೆ ಸುನ್ನತಿಯಿದ್ದರೂ ಇಲ್ಲದಂತಾಯಿತು.


ಅವನು ಶರೀರದಲ್ಲಿ ಸುನ್ನತಿಯಿಲ್ಲದವನಾಗಿದ್ದು ಧರ್ಮಶಾಸ್ತ್ರದಲ್ಲಿ ಹೇಳಿದ್ದನ್ನು ನೆರವೇರಿಸುವದರಲ್ಲಿ ಶಾಸ್ತ್ರವೂ ಸುನ್ನತಿಯೂ ಇದ್ದು ಧರ್ಮವನ್ನು ಮೀರಿ ನಡೆಯುವ ನಿನ್ನನ್ನು ದೋಷಿಯೆಂದು ನಿರ್ಣಯಿಸುವದಿಲ್ಲವೇ?


ಸುನ್ನತಿಯಾಗುವದರಲ್ಲಿ ಏನೂ ಇಲ್ಲ, ಸುನ್ನತಿಯಾಗದೆ ಇರುವದರಲ್ಲಿಯೂ ಏನೂ ಇಲ್ಲ; ಹೊಸ ಸೃಷ್ಟಿಯೇ ಬೇಕು.


ಅಲ್ಲಿಂದ ಬಂದ ಜನರಿಗೆಲ್ಲಾ ಸುನ್ನತಿಯಾಗಿತ್ತು. ಐಗುಪ್ತವನ್ನು ಬಿಟ್ಟನಂತರ ಅರಣ್ಯ ಪ್ರಯಾಣದಲ್ಲಿ ಹುಟ್ಟಿದವರಿಗೆ ಸುನ್ನತಿಯಾಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು