Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:27 - ಕನ್ನಡ ಸತ್ಯವೇದವು J.V. (BSI)

27 ಅವನು ಶರೀರದಲ್ಲಿ ಸುನ್ನತಿಯಿಲ್ಲದವನಾಗಿದ್ದು ಧರ್ಮಶಾಸ್ತ್ರದಲ್ಲಿ ಹೇಳಿದ್ದನ್ನು ನೆರವೇರಿಸುವದರಲ್ಲಿ ಶಾಸ್ತ್ರವೂ ಸುನ್ನತಿಯೂ ಇದ್ದು ಧರ್ಮವನ್ನು ಮೀರಿ ನಡೆಯುವ ನಿನ್ನನ್ನು ದೋಷಿಯೆಂದು ನಿರ್ಣಯಿಸುವದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನೀವು ಸುನ್ನತಿ ಮಾಡಿಸಿಕೊಂಡಿದ್ದಿರಿ; ಧರ್ಮಶಾಸ್ತ್ರವನ್ನು ಇಟ್ಟುಕೊಂಡಿದ್ದೀರಿ; ಆದರೂ ಅದನ್ನು ಮೀರಿ ನಡೆಯುತ್ತೀರಿ. ಹೀಗಿರಲಾಗಿ, ಶಾರೀರಿಕವಾಗಿ ಸುನ್ನತಿಯನ್ನು ಮಾಡಿಸಿಕೊಳ್ಳದಿದ್ದರೂ ಸ್ವಾಭಾವಿಕವಾಗಿ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರು ಸುನ್ನತಿ ಮಾಡಿಸಿಕೊಂಡಿರುವ ನಿಮಗೆ ತೀರ್ಪುಕೊಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನೀವು ಸುನ್ನತಿ ಮಾಡಿಸಿಕೊಂಡಿದ್ದೀರಿ; ಲಿಖಿತ ಧರ್ಮಶಾಸ್ತ್ರವನ್ನು ಇಟ್ಟುಕೊಂಡಿದ್ದೀರಿ; ಆದರೂ ಅದನ್ನು ಮೀರಿನಡೆಯುತ್ತೀರಿ. ಹೀಗಿರಲಾಗಿ, ಶಾರೀರಿಕವಾಗಿ ಸುನ್ನತಿಯನ್ನು ಮಾಡಿಸಿಕೊಳ್ಳದಿದ್ದರೂ ಸ್ವಾಭಾವಿಕವಾಗಿ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರು ಸುನ್ನತಿಮಾಡಿಸಿಕೊಂಡಿರುವ ನಿಮಗೆ ತೀರ್ಪುಕೊಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೆಹೂದ್ಯರಾದ ನಿಮಗೆ ಲಿಖಿತ ಧರ್ಮಶಾಸ್ತ್ರವಿದೆ ಮತ್ತು ಸುನ್ನತಿಯಾಗಿದೆ. ಆದರೆ ನೀವು ಧರ್ಮಶಾಸ್ತ್ರವನ್ನು ಮೀರಿ ನಡೆಯುತ್ತೀರಿ. ಹೀಗಿರಲು, ದೇಹದಲ್ಲಿ ಸುನ್ನತಿಯನ್ನು ಹೊಂದಿಲ್ಲದಿದ್ದರೂ ಧರ್ಮಶಾಸ್ತ್ರಕ್ಕೆ ವಿಧೇಯರಾಗುವ ಜನರು ನಿಮ್ಮನ್ನು ಅಪರಾಧಿಗಳೆಂದು ತೋರ್ಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವನು ಶಾರೀರಿಕವಾಗಿ ಸುನ್ನತಿಯಿಲ್ಲದವನಾಗಿದ್ದರೂ ನಿಯಮವನ್ನು ಅನುಸರಿಸುವುದರಿಂದ ಲಿಖಿತ ನಿಯಮವೂ ಸುನ್ನತಿಯೂ ಇದ್ದು ನಿಯಮವನ್ನು ಮೀರಿ ನಡೆಯುವ ನಿನ್ನನ್ನು ದೋಷಿಯೆಂದು ತೀರ್ಪು ಮಾಡುವನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಅಶೆ ತುಮಿ ಖಾಯ್ದೆ ಲಿವ್ನ್ ಘೆವ್ನ್ ಅನಿ ಸುನ್ನತ್ ಕರುನ್ ಘೆವ್ನ್ ರ್‍ಹಾಲ್ಯಾರ್‍ಬಿ ಖಾಯ್ದೆ ಮೊಡ್ತ್ಯಾಶಿ, ಅನಿ ತಸೆ ಮನುನ್ ಜುದೆವ್ ನ್ಹಯ್ ಹೊತ್ತಿ ಲೊಕಾ ತುಮಿ ಚುಕಿದಾರ್ ಮನುನ್ ದಾಕ್ವುನ್ ದಿತ್ಯಾತ್, ಕಶ್ಯಾಕ್ ಮಟ್ಲ್ಯಾರ್, ಆಂಗಾನಿ ತೆನಿ ಸುನ್ನತ್ ಕರುನ್ ಘೆಟಲ್ಲೆ ನಸ್ಲ್ಯಾರ್‍ಬಿ ತೆನಿ ಖಾಯ್ದೆ ಬರೆ ಕರುನ್ ಪಾಳ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:27
20 ತಿಳಿವುಗಳ ಹೋಲಿಕೆ  

ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತ ರೂಪವಾದದ್ದಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತರೂಪವಾದ ಒಡಂಬಡಿಕೆಯು ಮರಣವನ್ನುಂಟುಮಾಡುತ್ತದೆ; ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.


ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮಾನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವದಕ್ಕೆ ಮಾರ್ಗವಾಯಿತು.


ಆದರೆ ಒಳಗೆ ಯೆಹೂದ್ಯನಾಗಿರುವವನೇ ಯೆಹೂದ್ಯನು; ಮತ್ತು ಹೃದಯದಲ್ಲಿ ಆಗುವ ಸುನ್ನತಿಯೇ ಸುನ್ನತಿ. ಇದು ಬಾಹ್ಯಾಚಾರಕ್ಕೆ ಸಂಬಂಧಪಟ್ಟದ್ದಲ್ಲ, ಆತ್ಮ ಸಂಬಂಧಪಟ್ಟದ್ದೇ; ಇಂಥಾ ಸುನ್ನತಿಯಿದ್ದವನಿಗೆ ಬರುವ ಹೊಗಳಿಕೆಯು ದೇವರಿಂದಲೇ ಹೊರತು ಮನುಷ್ಯರಿಂದ ಬರುವದಲ್ಲ.


ಲೋಕಗಳು ದೇವರ ಮಾತಿನಿಂದ ನಿರ್ಮಿತವಾದವೆಂದು ನಂಬಿಕೆಯಿಂದಲೇ ನಾವು ತಿಳಿದುಕೊಂಡು ಕಾಣಿಸುವ ಈ ಜಗತ್ತು ದೃಶ್ಯ ವಸ್ತುಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.


ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ಧರ್ಮಶಾಸ್ತ್ರವೆಲ್ಲಾ ಅಡಕವಾಗಿದೆ.


ಪ್ರೀತಿಯು ಮತ್ತೊಬ್ಬರಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿಯಿಂದಲೇ ಧರ್ಮಪ್ರಮಾಣವು ನೆರವೇರುತ್ತದೆ.


ಕತ್ತಲೆಯಲ್ಲಿರುವವರಿಗೆ ಬೆಳಕೂ ತಿಳುವಳಿಕೆಯಿಲ್ಲದವರಿಗೆ ಶಿಕ್ಷಕನೂ ಬಾಲಕರಿಗೆ ಉಪಾಧ್ಯಾಯನೂ ಆಗಿದ್ದೇನೆಂದು ನಂಬಿಕೊಂಡಿದ್ದೀ.


ಆಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ಮಾಡಿ - ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನಗೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟವನ್ನೆಲ್ಲಾ ನೆರವೇರಿಸುವನು ಎಂಬದಾಗಿ ಅವನ ವಿಷಯದಲ್ಲಿ ಸಾಕ್ಷಿಹೇಳಿದನು.


ಆದರೆ ಯೇಸು ಅವನಿಗೆ - ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ಧರ್ಮವನ್ನು ನೆರವೇರಿಸತಕ್ಕದ್ದಾಗಿದೆ ಎಂದು ಹೇಳಿದಾಗ ಅವನು ಒಪ್ಪಿಕೊಂಡನು.


ಹೇಗಂದರೆ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದದೆ ಎಂಬದನ್ನು ತೋರ್ಪಡಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಯೋಚನೆಗಳು ವಾದಿಪ್ರತಿವಾದಿಗಳಂತೆ - ಇದು ತಪ್ಪೆಂದು ತಪ್ಪಲ್ಲವೆಂದು ಸೂಚಿಸುತ್ತವೆ.


ನೀನು ಧರ್ಮಶಾಸ್ತ್ರಾನುಸಾರವಾಗಿ ನಡೆಯುವವನಾದರೆ ಸುನ್ನತಿಯೆಂಬ ಸಂಸ್ಕಾರವು ಪ್ರಯೋಜನಕರವಾದದ್ದೇ ಸರಿ; ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆಯುವವನಾಗಿದ್ದರೆ ನಿನಗೆ ಸುನ್ನತಿಯಿದ್ದರೂ ಇಲ್ಲದಂತಾಯಿತು.


ಹೀಗಿರಲಾಗಿ ಸುನ್ನತಿಯಿಲ್ಲದವನು ಧರ್ಮಶಾಸ್ತ್ರದ ನೇಮಗಳ ಪ್ರಕಾರ ನಡೆದರೆ ಸುನ್ನತಿಯಿಲ್ಲದವನಾಗಿದ್ದರೂ ಸುನ್ನತಿಯಿದ್ದವನಂತೆ ಎಣಿಸಲ್ಪಡುವದಿಲ್ಲವೇ?


ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವದಕ್ಕೆ ಅವರ ನಂಬಿಕೆಯೇ ಆಧಾರ; ಸುನ್ನತಿಯಿಲ್ಲದವರನ್ನೂ ಹಾಗೆಯೇ ನಿರ್ಣಯಿಸುವದಕ್ಕೆ ನಂಬಿಕೆಯೇ ಕಾರಣ.


ಸುನ್ನತಿಯಿದ್ದರೂ ಪ್ರಯೋಜನವಿಲ್ಲ, ಸುನ್ನತಿಯಿಲ್ಲದಿದ್ದರೂ ಪ್ರಯೋಜನವಿಲ್ಲ; ದೇವರ ಕಟ್ಟಳೆಗಳನ್ನು ಅನುಸರಿಸಿ ನಡೆಯುವದೇ ಪ್ರಯೋಜನವಾಗಿದೆ.


ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ; ಶರೀರದಲ್ಲಿ ಕೈಯಿಂದ ಸುನ್ನತಿಮಾಡಿಸಿಕೊಂಡು ಸುನ್ನತಿಯವರೆನಿಸಿಕೊಳ್ಳುವವರು ನಿಮ್ಮನ್ನು ಸುನ್ನತಿಯಿಲ್ಲದವರೆಂದು ಹೇಳುತ್ತಾರೆ.


ಆ ಗ್ರಂಥಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು