Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:3 - ಕನ್ನಡ ಸತ್ಯವೇದವು J.V. (BSI)

3 ಎಲೈ ಮನುಷ್ಯನೇ, ಅಂಥವುಗಳನ್ನು ನಡಿಸುವವರಲ್ಲಿ ದೋಷವೆಣಿಸಿ ಅವುಗಳನ್ನೇ ಮಾಡುತ್ತಿರುವ ನೀನು ದೇವರ ದಂಡನೆಯ ತೀರ್ಪಿಗೆ ತಪ್ಪಿಸಿಕೊಂಡೇನೆಂದು ಯೋಚಿಸುತ್ತೀಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇದನ್ನು ಪರಿಗಣಿಸು ಎಲೈ ಮನುಷ್ಯನೇ, ಅಂಥವುಗಳನ್ನು ಅನುಸರಿಸುವವರಲ್ಲಿ ದೋಷಹುಡುಕಿ, ನೀನು ಅವುಗಳನ್ನೇ ಮಾಡುತ್ತಿರುವಲ್ಲಿ ದೇವರ ದಂಡನೆಯ ತೀರ್ಪನ್ನು ತಪ್ಪಿಸಿಕೊಂಡೇನೆಂದು ಯೋಚಿಸುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹೀಗಿರುವಾಗ, ಇತರರಿಗೆ ಯಾವ ಅಪರಾಧಕ್ಕಾಗಿ ತೀರ್ಪುನೀಡಿದೆಯೋ ಅಂಥ ಅಪರಾಧವನ್ನೇ ನೀನೂ ಮಾಡುತ್ತಿರುವೆಯಲ್ಲಾ! ದೇವರು ಕೊಡುವ ನ್ಯಾಯತೀರ್ಪಿನಿಂದ ನೀನು ಮಾತ್ರ ತಪ್ಪಿಸಿಕೊಳ್ಳುವಿಯೆಂದು ನೆನೆಸುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ಅಪರಾಧಗಳನ್ನು ಮಾಡುವ ಜನರಿಗೆ ನೀವು ಸಹ ತೀರ್ಪು ಮಾಡುತ್ತೀರಿ. ಆದರೆ ನೀವೇ ಆ ಅಪರಾಧಗಳನ್ನು ಮಾಡುತ್ತೀರಿ. ಹೀಗಿರಲು ದೇವರ ದಂಡನೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಮನುಷ್ಯನೇ, ಅಂಥವುಗಳನ್ನು ನಡೆಸುವವರ ಮೇಲೆ ತೀರ್ಪುಮಾಡುತ್ತಿರುವ ನೀನು ದೇವರ ತೀರ್ಪಿನಿಂದ ತಪ್ಪಿಸಿಕೊಂಡೇನೆಂದು ನೆನಸುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಖರೆ ತಿಯಾ ಮಾಜ್ಯಾ ದೊಸ್ತಾ, ಹಿ ಸಗ್ಳಿ ಬುರ್ಶಿ ಕಾಮಾ ಕರ್ತೆಯ್ ಅನಿ ದುಸ್ರ್ಯಾಂಚ್ಯಾ ವಿಶಯಾತ್ನಿ ನಿರ್ನಯಾ ಕರ್ತೆಯ್! ತುಕಾ ದೆವಾಚ್ಯಾ ನಿರ್ನಯಾತ್ನಾ ಚುಕ್ವುನ್ ಘೆವ್ಕ್ ಹೊತಾ ಮನುನ್ ಚಿಂತ್ಲೆ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:3
22 ತಿಳಿವುಗಳ ಹೋಲಿಕೆ  

ಅಹಂಕಾರಿಗಳೆಲ್ಲಾ ಯೆಹೋವನಿಗೆ ಅಸಹ್ಯ; ಅವರಿಗೆ ದಂಡನೆ ಖಂಡಿತ.


ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವದಲ್ಲದೆ ಮಾಡುವವರನ್ನೂ ಅನುಮೋದಿಸುತ್ತಾರೆ.


ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಆತನು - ಎಲಾ ಮನುಷ್ಯ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇವಿುಸಿದವರಾರು ಎಂದು ಅವನನ್ನು ಕೇಳಿ


ತುಸು ಹೊತ್ತಿನ ಮೇಲೆ ಒಬ್ಬನು ಅವನನ್ನು ಕಂಡು - ನೀನು ಸಹ ಅವರಲ್ಲಿ ಒಬ್ಬನು ಅನ್ನಲು ಪೇತ್ರನು - ಅಲ್ಲಪ್ಪಾ ಅಂದನು.


ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆಂದೂ ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವದಿಲ್ಲವೆಂದೂ ನೆನಸುತ್ತೀಯಾ?


ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಗೆ ಹೇಗೆ ತಪ್ಪಿಸಿಕೊಂಡೀರಿ?


ಆಮೇಲೆ ಆ ಪುರುಷನು ನನಗೆ - ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು ಎಂದು ಹೇಳಿದನು. ಅವನು ಆ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು - ಎನ್ನೊಡೆಯನೇ, ಮಾತಾಡು; ನನ್ನನ್ನು ಬಲಗೊಳಿಸಿದ್ದೀ ಎಂದರಿಕೆಮಾಡಲು


ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಡಂಬಡಿಕೆಯನ್ನು ಮೀರಿದನಲ್ಲವೇ; [ಕೈಯ ಮೇಲೆ] ಕೈ ಇಟ್ಟರೇನು? ಇದನ್ನೆಲ್ಲಾ ಮಾಡಿಬಿಟ್ಟನಲ್ಲವೇ? ಇವನು ಪಾರಾಗನು.


ಆದರೆ ಅವನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದು ಕುದುರೆಗಳನ್ನೂ ಬಹುಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಐಗುಪ್ತಕ್ಕೆ ರಾಯಭಾರಿಗಳನ್ನು ಕಳುಹಿಸಿದನು. ಇವನು ಸಮೃದ್ಧನಾಗಿಯೇ ಇರುವನೋ? ಇಂಥಾ ಕೃತ್ಯಗಳನ್ನು ನಡಿಸಿದವನು ಪಾರಾಗುವನೋ? ಒಡಂಬಡಿಕೆಯನ್ನು ಮೀರಿದವನು ತಪ್ಪಿಸಿಕೊಂಡಾನೇ?


ದುಷ್ಟನಿಗೆ ದಂಡನೆ ಖಂಡಿತ; ಶಿಷ್ಟವಂಶಕ್ಕೆ ರಕ್ಷಣೆ.


ನೀವು ಹೀಗೆ ಮಾಡಿದರೂ ನಾನು ಸುಮ್ಮನೆ ಇದ್ದದರಿಂದ ದೇವರೂ ನಮ್ಮಂಥವನೇ ಎಂದು ನೆನಸಿಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.


[ನೀತಿಯಿಂದ] ನನಗೇನು ಪ್ರಯೋಜನವಾಯಿತು. ಪಾಪಮಾಡದೆ ಇದ್ದದರಿಂದ ನನಗಾದ ಹೆಚ್ಚು ಲಾಭವೇನು ಅಂದುಕೊಳ್ಳುವದು


ಅಲ್ಲಿನ ಪ್ರಭುಗಳು ತಮ್ಮ ಒಡೆಯನಾದ ಹಾನೂನನಿಗೆ - ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನಾಗಿದ್ದಾನೆಂದು ತಿಳಿಯುತ್ತೀಯೋ? ಪಟ್ಟಣವನ್ನು ಸಂಚರಿಸಿ ನೋಡಿ ಅದನ್ನು ಸ್ವಾಧೀನ ಮಾಡಿಕೊಳ್ಳಬೇಕೆಂದು ತನ್ನ ಆಳುಗಳನ್ನು ಕಳುಹಿಸಿದ್ದಾನೆ ಎಂದು ಹೇಳಿದರು.


ನೀವು ಮಾತಾಡುತ್ತಿರುವಾತನ ಮಾತನ್ನು ಕೇಳಲೊಲ್ಲೆವೆಂದು ಹೇಳಬಾರದು. ಭೂವಿುಯ ಮೇಲೆ ದೈವೋಕ್ತಿಗಳನ್ನಾಡಿದವನಿಗೆ ಕಿವಿಗೊಡ ಮನಸ್ಸಿಲ್ಲದೆ ಇದ್ದ ಇಸ್ರಾಯೇಲ್ಯರು ದಂಡನೆಗೆ ತಪ್ಪಿಸಿಕೊಳ್ಳದಿದ್ದರೆ ಪರಲೋಕದಿಂದ ಮಾತಾಡುವವನಿಗೆ ನಾವು ಕಿವಿಗೊಡ ಮನಸ್ಸಿಲ್ಲದೆ ತೊಲಗಿದರೆ ಹೇಗೆ ತಪ್ಪಿಸಿಕೊಂಡೇವು?


ಈ ಅತ್ಯಂತ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು; ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು;


ಆದರೆ ಪೇತ್ರನು - ನೀನು ಹೇಳುವದೇನೋ ನಾನರಿಯೆನಪ್ಪಾ ಅಂದನು. ಅವನು ಈ ಮಾತನ್ನು ಆಡುತ್ತಿರುವಾಗಲೇ ಕೋಳಿ ಕೂಗಿತು.


ಇಂಥ ಅನ್ಯಾಯಗಾರರು ತಪ್ಪಿಸಿಕೊಳ್ಳಬಹುದೋ? ದೇವರೇ, ರೌದ್ರದಿಂದ ಜನಾಂಗಗಳನ್ನು ಉರುಳಿಸಿಬಿಡು.


ಆದದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಯಾವನಾದರೂ ಸರಿಯೇ, ಉತ್ತರ ಹೇಳುವದಕ್ಕೆ ನಿನಗೆ ಮಾರ್ಗವಿಲ್ಲ. ಹೇಗಂದರೆ ಮತ್ತೊಬ್ಬರಲ್ಲಿ ದೋಷವೆಣಿಸುವದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ನಡಿಸುತ್ತೀಯಲ್ಲಾ.


ಆದರೆ ಅಂಥವುಗಳನ್ನು ನಡಿಸುವವರ ವಿಷಯದಲ್ಲಿ ದೇವರು ಮಾಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವದೆಂದು ಬಲ್ಲೆವು.


ಎಲೋ ಮನುಷ್ಯನೇ, ಹಾಗನ್ನಬೇಡ; ದೇವರಿಗೆ ಎದುರುಮಾತಾಡುವದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ - ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು