Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:4 - ಕನ್ನಡ ಸತ್ಯವೇದವು J.V. (BSI)

4 ಆತನ ಅಪಾರವಾದ ದಯಾ ಸಹನ ದೀರ್ಘಶಾಂತಿಗಳನ್ನು ಅಸಡ್ಡೆಮಾಡುತ್ತೀಯಾ? ಮನಸ್ಸನ್ನು ಬೇರೆಮಾಡಿಕೊಳ್ಳುವದಕ್ಕೆ ದೇವರ ಉಪಕಾರವು ನಿನ್ನನ್ನು ಪ್ರೇರಿಸುತ್ತದೆಂಬದು ನಿನಗೆ ಗೊತ್ತಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಥವಾ ದೇವರ ಅಪಾರ ದಯೆಯನ್ನೂ ಶಾಂತಿಸಹನೆಯನ್ನೂ ಉಪೇಕ್ಷಿಸುತ್ತೀಯೋ? ನೀನು ದೇವರಿಗೆ ಅಭಿಮುಖನಾಗಬೇಕೆಂಬ ಉದ್ದೇಶದಿಂದಲೇ ಅವರು ನಿನ್ನ ಮೇಲೆ ಅಷ್ಟು ದಯೆದಾಕ್ಷಿಣ್ಯದಿಂದ ಇದ್ದಾರೆ ಎಂಬುದು ನಿನಗೆ ತಿಳಿಯದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರು ನಿಮ್ಮ ವಿಷಯದಲ್ಲಿ ಬಹು ಕನಿಕರ ಉಳ್ಳವನಾಗಿದ್ದಾನೆ; ತಾಳ್ಮೆ ಉಳ್ಳವನಾಗಿದ್ದಾನೆ. ನೀವು ಮಾರ್ಪಾಟಾಗಬೇಕೆಂದು ದೇವರು ನಿಮಗಾಗಿ ಕಾದುಕೊಂಡಿದ್ದಾನೆ. ಆದರೆ ನೀವು ಆತನ ಕರುಣೆಯ ಬಗ್ಗೆ ಆಲೋಚಿಸುವುದೇ ಇಲ್ಲ. ನೀವು ನಿಮ್ಮ ಹೃದಯಗಳನ್ನೂ ಜೀವಿತಗಳನ್ನೂ ಮಾರ್ಪಡಿಸಿಕೊಳ್ಳಬೇಕಾಗುತ್ತದೆಯೆಂದು ದೇವರ ಕನಿಕರವನ್ನು ಅರ್ಥಮಾಡಿಕೊಳ್ಳದೆ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರ ದಯೆ, ಐಶ್ವರ್ಯ, ಸಹನೆ ಮತ್ತು ದೀರ್ಘಶಾಂತಿ ಇವುಗಳನ್ನು ತಾತ್ಸಾರ ಮಾಡುತ್ತೀಯೋ? ದೇವರ ಒಳ್ಳೆಯತನವು ನಿನ್ನನ್ನು ಪಶ್ಚಾತ್ತಾಪಕ್ಕೆ ನಡೆಸುತ್ತದೆಂಬುದು ನಿನಗೆ ತಿಳಿಯದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ನಾಹೊಲ್ಯಾರ್ ತೆಚಿ ಮೊಟಿ ದಯಾ, ಸೊಸುನ್ ಘೆತಲೆ, ಮೊಟೆ ಸಮಾದಾನ್, ಹೆ ಸಗ್ಳೆ ಕಾಯ್ಬಿ ನ್ಹಯ್ ಮನುನ್ ಚಿಂತ್ಲೆ ಕಾಯ್? ದೆವ್ ಖರೆಚ್ ದಯಾಳ್ ಮನುನ್ ತುಕಾ ಗೊತ್ತ್ ಹಾಯ್, ಕಶ್ಯಾಕ್ ಮಟ್ಲ್ಯಾರ್ ತೊ ತುಕಾ ಪರಿವರ್ತನಾಚ್ಯಾ ವಾಟೆಕ್ ಘೆವ್ನ್ ಜಾವ್ಕ್ ಬಗುಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:4
51 ತಿಳಿವುಗಳ ಹೋಲಿಕೆ  

ಕರ್ತನು ತನ್ನ ವಾಗ್ದಾನವನ್ನು ನೆರವೇರಿಸುವದಕ್ಕೆ ತಡಮಾಡುತ್ತಾನೆಂಬದಾಗಿ ಕೆಲವರು ಅರ್ಥಮಾಡಿಕೊಳ್ಳುವ ಪ್ರಕಾರ ಆತನು ತಡಮಾಡುವವನಲ್ಲ. ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.


ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಯೆಹೋವನು ಮೋಶೆಯ ಎದುರಾಗಿ ಹೋಗುತ್ತಾ ಪ್ರಕಟವಾಗಿ ಹೇಳಿದ್ದೇನಂದರೆ :- ಯೆಹೋವ, ಯೆಹೋವ ಕನಿಕರವೂ ದಯೆಯೂ ಉಳ್ಳ ದೇವರು; ದೀರ್ಫಶಾಂತನೂ ಪ್ರೀತಿಯೂ ನಂಬಿಕೆಯೂ ಉಳ್ಳವನು;


ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನಿಂದ ಕರಿಸಿಕೊಂಡವರು ನಿರೀಕ್ಷಿಸುವ ಪದವಿ ಎಂಥದೆಂಬದನ್ನೂ ದೇವಜನರೆಂಬ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ


ಮುಂದಣ ಯುಗಗಳಲ್ಲಿ ತೋರಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ ಪರಲೋಕದಲ್ಲಿ ಆತನೊಂದಿಗೆ ಕೂಡ್ರಿಸಿದ್ದಾನೆ.


ಈತನು ನಮಗೋಸ್ಕರ ತನ್ನ ರಕ್ತವನ್ನು ಸುರಿಸಿದ್ದರಿಂದ ನಮ್ಮ ಅಪರಾಧಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು. ಇದು ದೇವರ ಕೃಪಾತಿಶಯವೇ.


ಈತನು ತನ್ನ ರಕ್ತವನ್ನು ಸುರಿಸಿ ನಂಬಿಕೆಯಿದ್ದವರಿಗಾಗಿ ಕೃಪಾಧಾರವಾಗಬೇಕೆಂದು ದೇವರು ಈತನನ್ನು ಮುಂದಿಟ್ಟನು.


ಕರ್ತನೇ, ನೀನು ಕನಿಕರವೂ ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ ನಂಬಿಕೆಯೂ ಉಳ್ಳವನು.


ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ಇದೇ ಅಭಿಪ್ರಾಯಕ್ಕೆ ಸರಿಯಾಗಿ ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.


ಆಹಾ, ದೇವರ ಐಶ್ವರ್ಯವೂ ಜ್ಞಾನವೂ ವಿವೇಕವೂ ಎಷ್ಟೋ ಅಗಾಧ! ಆತನ ತೀರ್ಮಾನಗಳು ಪರಿಶೋಧನೆಗೆ ಎಷ್ಟೋ ಅಗಮ್ಯ! ಆತನ ಮಾರ್ಗಗಳು ಕಂಡುಹಿಡಿಯುವದಕ್ಕೆ ಎಷ್ಟೋ ಅಸಾಧ್ಯ!


ಆದದರಿಂದ ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನಿನ್ನ ಕಡೆಗೆ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆ; ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.


ಕರ್ತನೇ, ನೀನು ಒಳ್ಳೆಯವನೂ ಕ್ಷವಿುಸುವವನೂ ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದೀಯಲ್ಲಾ.


ಆದರೂ ಆತನು ಕರುಣಾಳುವೂ ಅಪರಾಧಿಗಳನ್ನು ಸಂಹರಿಸದೆ ಕ್ಷವಿುಸುವವನೂ ಆಗಿ ತನ್ನ ಸಿಟ್ಟನ್ನೆಲ್ಲಾ ಏರಗೊಡದೆ ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.


ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮ ಮೇಲೆ ಮಹಾ ಪ್ರೀತಿಯನ್ನಿಟ್ಟು


ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೆ ನಡೆಯದಿರುವ ಕಾರಣ ಅಪರಾಧಮಾಡಬೇಕೆಂಬ ಯೋಚನೆಯು ನರಜನ್ಮದವರ ಹೃದಯದಲ್ಲಿ ತುಂಬಿ ತುಳುಕುವದು.


ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯಮಾಡುತ್ತಾ -


ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟಿಸುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಆತನಿಗೆ ಅವಿಧೇಯರಾಗಿದ್ದವರ ಬಳಿಗೆ ಹೋಗಿ ಸುವಾರ್ತೆಯನ್ನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ಸೇರಿ ನೀರಿನ ಮೂಲಕ ರಕ್ಷಣೆಹೊಂದಿದರು.


ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ


ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಯನ್ನು ನೀಗಿಸುವನು.


[ಆ ದುಷ್ಟನು] ತನ್ನೊಳಗೆ ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವದೇ ಇಲ್ಲ ಅಂದುಕೊಳ್ಳುತ್ತಾನೆ.


ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಶಬ್ದವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟಮಾಡುವೆನು, ಅವನು ನನ್ನ ಸಂಗಡ ಊಟಮಾಡುವನು.


ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸು ಮುಖ್ಯ ಪಾಪಿಯಾದ ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘಶಾಂತಿಯನ್ನು ತೋರ್ಪಡಿಸಿದನು.


ಅನ್ಯಜನಗಳ ವಿಷಯವಾದ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ ತಿಳಿಸಲಿಕ್ಕೆ ಮನಸ್ಸು ಮಾಡಿಕೊಂಡನು. ಈ ಮರ್ಮವು ಏನಂದರೆ ಕ್ರಿಸ್ತನು ನಿಮ್ಮಲ್ಲಿದ್ದು ಪ್ರಭಾವದ ನಿರೀಕ್ಷೆಗೆ ಆಧಾರಭೂತನಾಗಿರುವದೇ.


ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪಾಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು.


ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಲಿ ಎಂದು ನಾವು ಪಾಪದಲ್ಲಿ ಇನ್ನೂ ಇರಬೇಕೋ? ಎಂದಿಗೂ ಇರಬಾರದು.


ಯೆಹೋವನೇ, ನಿನ್ನ ಕೈಕೆಲಸಗಳು ಎಷ್ಟೋ ವಿಧವಾಗಿವೆ. ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿದ್ದೀ; ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ.


ಹೇಗಂದರೆ ನೀವೆಲ್ಲರು ಪ್ರೀತಿಯಿಂದ ಹೊಂದಿಕೆಯಾಗಿದ್ದು ಬುದ್ಧಿಪೂರ್ವಕ ನಿಶ್ಚಯವೆಂಬ ಭಾಗ್ಯವನ್ನು ಪಡೆದು ದೇವರು ತಿಳಿಸಿರುವ ಮರ್ಮವನ್ನು ಅಂದರೆ ತನ್ನಲ್ಲೇ ಜ್ಞಾನವಿದ್ಯಾಸಂಬಂಧವಾದ ನಿಕ್ಷೇಪಗಳನ್ನೆಲ್ಲಾ ಅಡಗಿಸಿಕೊಂಡಿರುವ ಕ್ರಿಸ್ತನನ್ನು ತಿಳುಕೊಂಡವರಾಗಿ ಹೃದಯದಲ್ಲಿ ದೃಢವಾಗಿರಬೇಕೆಂಬ ಕುತೂಹಲವು ನನಗುಂಟು.


ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲ ಹೊಂದಿದವರಾಗುವ ಹಾಗೆಯೂ


ನಾನು ಕ್ರಿಸ್ತನ ಅಪ್ರಮೇಯವಾದ ಐಶ್ವರ್ಯದ ವಿಷಯವಾದ ಶುಭಸಮಾಚಾರವನ್ನು ಅನ್ಯಜನರಿಗೆ ಪ್ರಸಿದ್ಧಿಪಡಿಸುವ ಹಾಗೆಯೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಮರೆಯಾಗಿದ್ದ ಮರ್ಮವು ಪ್ರಕಟವಾಗುವ ವಿಧ ಎಂಥದೆಂದು ತಿಳಿಸುವ ಹಾಗೆಯೂ ದೇವಜನರೊಳಗೆ ಅತ್ಯಲ್ಪನಾದ ನನಗೆ ಅನುಗ್ರಹಿಸೋಣವಾಯಿತು.


ಈ ವಿಷಯದಲ್ಲಿ ಯೆಹೂದ್ಯನಿಗೂ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತ; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವವನಾಗಿದ್ದಾನೆ.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷವಿುಸಿಬಿಟ್ಟ ಮೇಲೆ ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿವಿುತ್ತ ಇನ್ನು ಬಾಯಿ ತೆರೆಯದಿರುವಿ. ಇದು ಕರ್ತನಾದ ಯೆಹೋವನ ನುಡಿ.


ನನ್ನ ಹೆಸರುಗೊಂಡಿರುವ ಈ ಆಲಯಕ್ಕೆ ಬಂದು ನನ್ನ ಸನ್ನಿಧಿಯಲ್ಲಿ ನಿಂತು - ನಮಗೆ ಪರಿಹಾರವಾಯಿತು ಎಂದು ಹೇಳಿ ಈ ಎಲ್ಲಾ ಅಸಹ್ಯಕಾರ್ಯಗಳನ್ನು ಇನ್ನೂ ನಡಿಸುವದಕ್ಕೆ ಅವಕಾಶ ಮಾಡಿಕೊಳ್ಳುವಿರೋ?


ಯೆಹೋವನು ದೀರ್ಘಶಾಂತನು, ಬಹು ಪ್ರೀತಿಯುಳ್ಳವನು, ಅಪರಾಧ ಪಾಪಗಳನ್ನು ಕ್ಷವಿುಸುವವನು; ಆದಾಗ್ಯೂ [ಅಪರಾಧಿಗಳನ್ನು] ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರುನಾಲ್ಕು ತಲೆಗಳವರೆಗೆ ಬರಮಾಡುವವನು ಎಂದು ಹೇಳಿದಿಯಲ್ಲಾ. ಈ ಮಾತಿಗೆ ದೃಷ್ಟಾಂತವನ್ನು ಕೊಟ್ಟು ನಿನ್ನ ಮಹಿಮೆಯನ್ನು ದೃಢಪಡಿಸಬೇಕು.


ಅವನು ಸಿಟ್ಟುಗೊಂಡು - ಯೆಹೋವಾ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವದೆಂದು ಹೇಳಿದೆನಷ್ಟೆ; ನೀನು ದಯೆಯೂ ಕನಿಕರವೂ ದೀರ್ಘಶಾಂತಿಯೂ ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ ತಾರ್ಷೀಷಿಗೆ ಓಡಿ ಹೋಗಲು ತ್ವರೆಪಟ್ಟೆನು.


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು; ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ ಆತನ ದಯೆಯನ್ನೂ ಭಯಭಕ್ತಿಯಿಂದ ಮರೆಹೊಗುವರು.


ಸದ್ಭಕ್ತರಿಗೋಸ್ಕರ ನೀನು ಇಟ್ಟುಕೊಂಡಿರುವ ಮೇಲೂ ಆಶ್ರಿತರಿಗೋಸ್ಕರ ನೀನು ಎಲ್ಲರ ಮುಂದೆ ಮಾಡಿದ ಉಪಕಾರಗಳೂ ಎಷ್ಟೋ ವಿಶೇಷವಾಗಿವೆ.


ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು;


ಆ ಸಭೆಗಳವರು ಬಹಳ ಹಿಂಸೆ ತಾಳುವವರಾದರೂ ಮತ್ತು ವಿಪರೀತವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.


ಮತ್ತು ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ದೇವರು ನಿಮಗೆ ಧಾರಾಳವಾಗಿ ಅನುಗ್ರಹಿಸುವನು.


ದೇವರ ಕಡೆಗೆ ತಿರುಗಿಕೊಳ್ಳುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ದೇವರ ಕಡೆಗೆ ತಿರುಗಿಕೊಂಡು ತನ್ನ ಜಾರತ್ವವನ್ನು ಬಿಟ್ಟುಬಿಡುವದಕ್ಕೆ ಅವಳಿಗೆ ಇಷ್ಟವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು