Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:5 - ಕನ್ನಡ ಸತ್ಯವೇದವು J.V. (BSI)

5 ನೀನು ನಿನ್ನ ಮೊಂಡತನವನ್ನೂ ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸುವದರಿಂದ ನಿನಗೋಸ್ಕರ ದೇವರ ಕೋಪವನ್ನು ಕೂಡಿಟ್ಟುಕೊಳ್ಳುತ್ತಾ ಇದ್ದೀ. ದೇವರ ಕೋಪವೂ ನ್ಯಾಯವಾದ ತೀರ್ಪು ಪ್ರಕಟವಾಗುವ ದಿವಸ ಬರುತ್ತದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀವು ಕಠಿಣರಾಗಿದ್ದೀರಿ ಮತ್ತು ಮೊಂಡರಾಗಿದ್ದೀರಿ. ಮಾರ್ಪಾಟಾಗಲು ನಿಮಗೆ ಇಷ್ಟವಿಲ್ಲ. ಆದ್ದರಿಂದ ನಿಮಗೆ ಬರಲಿರುವ ದಂಡನೆಯನ್ನು ನೀವು ಹೆಚ್ಚುಹೆಚ್ಚು ಮಾಡಿಕೊಳ್ಳುತ್ತಿದ್ದೀರಿ. ದೇವರು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ನಿಮಗೆ ಆ ದಂಡನೆಯಾಗುವುದು. ಆ ದಿನದಲ್ಲಿ ದೇವರ ನ್ಯಾಯವಾದ ತೀರ್ಪುಗಳನ್ನು ಜನರು ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀನು ನಿನ್ನ ಕಠಿಣವಾದ ಮತ್ತು ಪಶ್ಚಾತ್ತಾಪ ಪಡದ ಹೃದಯದಿಂದ, ನಿನಗೋಸ್ಕರ ದೇವರ ನೀತಿಯುಳ್ಳ ತೀರ್ಪು ಪ್ರಕಟವಾಗುವ ಕೋಪದ ದಿನಕ್ಕಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖರೆ ತುಮ್ಚಿ ಮನಾ ಘಟ್ ಅನಿ ಬದ್ಲಿನಸಲ್ಲಿ ಹೊವ್ನ್ ಗೆಲ್ಯಾತ್. ಅನಿ ಅಶೆ ತುಮಿ ದೆವಾಚ್ಯಾ ರಾಗಾಚ್ಯಾ ಅನಿ ಖರೆಪಾನಾಚ್ಯಾ ನಿರ್ನಯಾಚ್ಯಾ ದಿಸಿ ತುಮ್ಕಾ ಗಾವ್ತಲಿ ಶಿಕ್ಷಾ ಅನಿ ಉಲ್ಲಿ ಮೊಟಿ ಕರುನ್ ಘೆವ್ಲ್ಯಾಶಿ. ತ್ಯಾ ದಿಸಿ ತುಮ್ಕಾ ಶಿಕ್ಷಾ ದಿವ್ನ್ ಹೊತಾ ಅನಿ ದೆವಾಚೊ ರಾಗ್ ಅನಿ ನಿತಿಚೊ ನಿರ್ನಯ್ ಲೊಕಾ ಬಗ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:5
40 ತಿಳಿವುಗಳ ಹೋಲಿಕೆ  

ದುಷ್ಟತನವನ್ನು ನಡಿಸಿ ಸತ್ಯವನ್ನು ಅಣಗಿಸುವವರಾದ ಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ತೋರಿಬರುತ್ತದೆ.


ಒಳ್ಳೇದಾಗಲಿ ಕೆಟ್ಟದಾಗಲಿ ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸುವ ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.


ತಮ್ಮ ದೊರೆತನವನ್ನು ಕಾಪಾಡದೆ ತಮಗೆ ತಕ್ಕ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದಲ್ಲಿ ಆಗುವ ದಂಡನೆಯ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಇಟ್ಟಿದ್ದಾನೆ.


ಆದರೆ ಈಗಿರುವ ಭೂಮ್ಯಾಕಾಶಗಳು ಅದೇ ವಾಕ್ಯದ ಬಲದಿಂದ ಬೆಂಕಿಯ ಮೂಲಕ ನಾಶವಾಗುವದಕ್ಕೆ ಇಡಲ್ಪಟ್ಟಿವೆ; ಮತ್ತು ಭಕ್ತಿಹೀನರ ಶಿಕ್ಷಾವಿಧಿಯೂ ನಾಶವೂ ಉಂಟಾಗುವ ದಿನಕ್ಕಾಗಿ ಆ ಬೆಂಕಿ ಸಿದ್ಧವಾಗಿದೆ.


ನೀವು ಈಹೊತ್ತು ದೇವರ ಶಬ್ದಕ್ಕೆ ಕಿವಿಗೊಟ್ಟರೆ, ನಿಮ್ಮ ಹಿರಿಯರು ದೇವರ ಕೋಪವನ್ನೆಬ್ಬಿಸಿದ ಸ್ಥಳದಲ್ಲಿ ಮಾಡಿದಂತೆ ನಿಮ್ಮ ಹೃದಯಗಳನ್ನು ಕಠಿನಮಾಡಿಕೊಳ್ಳಬೇಡಿರಿ


ಇದನ್ನೆಲ್ಲಾ ಮುದ್ರೆಹಾಕಿ ನನ್ನ ಉಗ್ರಾಣದಲ್ಲಿಟ್ಟುಕೊಂಡಿದ್ದೇನೆ.


ಕರ್ತನು ಭಕ್ತರನ್ನು ಕಷ್ಟಗಳೊಳಗಿಂದ ತಪ್ಪಿಸುವದಕ್ಕೂ ದುರ್ಮಾರ್ಗಿಗಳನ್ನು ನ್ಯಾಯತೀರ್ಪಿನ ದಿನದ ತನಕ ಶಿಕ್ಷಾನುಭವದಲ್ಲಿ ಇಡುವದಕ್ಕೂ ಬಲ್ಲವನಾಗಿದ್ದಾನೆ.


ಬಹುಕಾಲ ಹೋದನಂತರ ಆತನು ದಾವೀದನ ಬಾಯಿಂದ ಮಾತಾಡಿ ಈಹೊತ್ತೇ ಎಂದು ಒಂದಾನೊಂದು ದಿವಸವನ್ನು ಗೊತ್ತು ಮಾಡುತ್ತಾನೆ; ಹೇಗಂದರೆ - ನೀವು ಈಹೊತ್ತು ದೇವರ ಶಬ್ದಕ್ಕೆ ಕಿವಿಗೊಟ್ಟರೆ ನಿಮ್ಮ ಹೃದಯಗಳನ್ನು ಕಠಿನಮಾಡಿಕೊಳ್ಳಬೇಡಿರಿ ಎಂದು ಮೇಲ್ಕಂಡ ವಚನದಲ್ಲಿ ಹೇಳುತ್ತಾನಷ್ಟೆ.


ನಿಮ್ಮಲ್ಲಿ ಒಬ್ಬರಾದರೂ ಪಾಪದಿಂದ ಮೋಸಹೋಗಿ ಕಠಿನರಾಗದಂತೆ ಈಹೊತ್ತು ಎಂಬ ಕಾಲವು ಇರುವ ತನಕ ಪ್ರತಿನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.


ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ಸೈರಣೆಯಿಂದ ಸೈರಿಸಿಕೊಂಡಿದ್ದಾನೆ.


ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿ ರಾಜರನ್ನು ಖಂಡಿಸುವನು.


ಈಗ ನಿಮ್ಮ ಪಿತೃಗಳಂತೆ ಆಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡ ಪವಿತ್ರಾಲಯಕ್ಕೆ ಬಂದು ಆತನನ್ನು ಸೇವಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವದು.


ಐಗುಪ್ತ್ಯರಂತೆಯೂ ಫರೋಹನಂತೆಯೂ ನಿಮ್ಮ ಹೃದಯಗಳನ್ನು ಕಠಿಣಪಡಿಸಿಕೊಳ್ಳುವದೇಕೆ? ಇಸ್ರಾಯೇಲ್ಯರನ್ನು ಕಳುಹಿಸಲೊಲ್ಲದ ಇವರನ್ನು ಯೆಹೋವನು ಎಷ್ಟೋ ವಿಧವಾಗಿ ಬಾಧಿಸಬೇಕಾಯಿತಲ್ಲಾ.


ಅವರ ಕೋಪವು ಕಾಣಿಸುವ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.


ಆ ಮಣ್ಣೇ ನಿಮಗೆ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ನುಂಗಿಬಿಡುವದು. ಅಂತ್ಯದಿವಸಗಳು ಬಂದರೂ ದ್ರವ್ಯವನ್ನು ಕೂಡಿಸಿ ಇಟ್ಟುಕೊಂಡಿದ್ದೀರಿ.


ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬದಾಗಿ ಎಣಿಸಿಕೊಳ್ಳದಂತೆ ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ; ಅದೇನಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವದು;


ಹೀಗೆ ಅವನ ಹೃದಯವು ಉಬ್ಬಿ ಅವನ ಸ್ವಭಾವವು ಜಡವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ ಮಾನವನ್ನು ತೆಗೆದುಬಿಟ್ಟನು;


ಇಸ್ರಾಯೇಲ್ ವಂಶದವರೋ ನಿನಗೆ ಕಿವಿಗೊಡಲೊಲ್ಲರು; ನನಗೂ ಕಿವಿಗೊಡಲೊಲ್ಲರು; ಅವರೆಲ್ಲರೂ ನಾಚಿಕೆಗೆಟ್ಟವರೂ ಹಟಗಾರರೂ ಆಗಿದ್ದಾರಲ್ಲಾ.


ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು;


ಬಹಳವಾಗಿ ಗದರಿಸಿದರೂ ತಗ್ಗದವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ಧನವು ಕೋಪದ ದಿನದಲ್ಲಿ ವ್ಯರ್ಥ; ಧರ್ಮವು ಮರಣವಿಮೋಚಕ.


ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ ಮಸ್ಸಾದಿನದಲ್ಲಿ ಮಾಡಿದಂತೆ ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.


ಆಪತ್ತಿನ ದಿನದಲ್ಲಿ ದುಷ್ಟನು ಉಳಿದು ಕೋಪವು ತುಂಬಿ ತುಳುಕುವ ದಿವಸದಲ್ಲಿ ತಪ್ಪಿಸಲ್ಪಡುವನು ಎಂಬದು ನಿಮಗೆ ಗೊತ್ತಾಗಲಿಲ್ಲವೋ?


ಇದಲ್ಲದೆ ನೆಬೂಕದ್ನೆಚ್ಚರನಿಗೆ ಒಳಗಾಗುತ್ತೇನೆಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದ್ದರೂ ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ಇಸ್ರಾಯೇಲ್‍ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲೊಲ್ಲದೆ ಹಟಹಿಡಿದು ಮನಸ್ಸನ್ನು ಕಠಿನಮಾಡಿಕೊಂಡನು.


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲ್ಯರು ಅವರೆಲ್ಲರನ್ನೂ ಕರುಣೆಯಿಲ್ಲದೆ ಸಂಹರಿಸಿಬಿಡುವ ಹಾಗೆ ಆತನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರಮಾಡಿದನು.


ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿವ್ಮಿುಂದ ಸೋತುಹೋಗಬೇಕೆಂಬದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪ; ಅದು ಈಗಾಗಲೇ ನೆರವೇರಿತಲ್ಲಾ.


ಆದರೆ ಫರೋಹನು ಉಪಶಮನವಾಯಿತೆಂದು ತಿಳಿದಾಗ ತನ್ನ ಹೃದಯವನ್ನು ಮೊಂಡುಮಾಡಿಕೊಂಡನು. ಯೆಹೋವನು ಹೇಳಿದ್ದಂತೆಯೇ ಅವನು ಅವರ ಮಾತನ್ನು ಕೇಳದೆ ಹೋದನು.


ತಮ್ಮ ಉಪ್ಪರಿಗೆಗಳಲ್ಲಿ ಬಾಧೆಕೊಳ್ಳೆಗಳಿಂದ ಸಂಪಾದಿಸಿದ್ದನ್ನು ಕೂಡಿಸಿಟ್ಟುಕೊಂಡಿರುವವರು ನ್ಯಾಯವಾಗಿ ನಡೆಯಲು ಅರಿಯರು; ಇದು ಯೆಹೋವನ ನುಡಿ.


ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನಾದದರಿಂದ ಅವರು ಇವರ ಹಿಂದೆ ಸಮುದ್ರದೊಳಗೆ ಹೋಗುವರು; ಆಗ ನಾನು ಫರೋಹನಲ್ಲಿಯೂ ಅವನ ಸಮಸ್ತ ಸೈನ್ಯದಲ್ಲಿಯೂ ರಥಗಳಲ್ಲಿಯೂ ಕುದುರೆಗಳಲ್ಲಿಯೂ ಪ್ರಖ್ಯಾತಿಗೊಳ್ಳುವೆನು.


ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡಿಸಿಕೊಂಡು ಹೋಗು. ನನ್ನ ದೂತನು ನಿನ್ನ ಮುಂದುಗಡೆಯಲ್ಲಿ ನಡೆಯುವನು. ಆದರೂ ನಾನು ಅವರನ್ನು ಶಿಕ್ಷಿಸುವಾಗ ಅವರ ಪಾಪಕ್ಕೆ ತಕ್ಕಂತೆ ಶಿಕ್ಷಿಸುವೆನು.


ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವದಕ್ಕೆ ಹೊಂಚುಹಾಕುತ್ತಾರೆ, ಸ್ವಜೀವವನ್ನು ತೆಗೆದುಕೊಳ್ಳುವದಕ್ಕೆ ಕಾದಿರುತ್ತಾರೆ.


ಭಯದಿಂದ ನಡೆದುಕೊಳ್ಳುವವನು ಧನ್ಯನು; ಕಠಿನಹೃದಯನು ಕೇಡಿಗೆ ಸಿಕ್ಕಿಬೀಳುವನು.


ಆತನು ಅದನ್ನೇ ಬರಮಾಡಿ ತನ್ನ ಮಾತನ್ನು ನೆರವೇರಿಸಿದ್ದಾನೆ; ನೀವು ಯೆಹೋವನ ಧ್ವನಿಗೆ ಕಿವಿಗೊಡದೆ ಆತನಿಗೆ ಪಾಪಮಾಡಿದ್ದರಿಂದಲೇ ಇದು ನಿಮಗೆ ಸಂಭವಿಸಿದೆ.


ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು;


ಎಫ್ರಾಯೀವಿುನ ಅಧರ್ಮವು ಗಂಟುಕಟ್ಟಿದೆ, ಅದರ ಪಾಪವು ಭದ್ರಪಡಿಸಿದೆ.


ಯಾಕಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೇದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾಗಿ ಪ್ರತಿಫಲವನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕು.


ದೇವರು ನ್ಯಾಯವಾದ ತೀರ್ಪುಮಾಡುತ್ತಾನೆಂಬದಕ್ಕೆ ನಿಮ್ಮ ತಾಳ್ಮೆಯು ಸ್ಪಷ್ಟವಾದ ನಿದರ್ಶನವಾಗಿದೆ. ಯಾವ ದೇವರಾಜ್ಯಕ್ಕೋಸ್ಕರ ನೀವು ಕಷ್ಟವನ್ನನುಭವಿಸುತ್ತೀರೋ ಅದಕ್ಕೆ ನೀವು ಯೋಗ್ಯರಾಗಬೇಕೆಂಬದೇ ದೇವರ ಅಭಿಪ್ರಾಯ.


ದೇವರ ಕಡೆಗೆ ತಿರುಗಿಕೊಳ್ಳುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ದೇವರ ಕಡೆಗೆ ತಿರುಗಿಕೊಂಡು ತನ್ನ ಜಾರತ್ವವನ್ನು ಬಿಟ್ಟುಬಿಡುವದಕ್ಕೆ ಅವಳಿಗೆ ಇಷ್ಟವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು