Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:8 - ಕನ್ನಡ ಸತ್ಯವೇದವು J.V. (BSI)

8 ಯಾರು ಸ್ವೇಚ್ಫೆಯುಳ್ಳವರಾಗಿ ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ ಅವರಿಗೆ ಕೋಪ ರೌದ್ರಗಳು ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯಾರು ಸ್ವಾರ್ಥಸಾಧಕರಾಗಿದ್ದು, ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ, ಅವರ ಮೇಲೆ ದೇವರ ಕೋಪ ಮತ್ತು ರೌದ್ರಗಳು ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸ್ವಾರ್ಥಸಾಧಕರಾಗಿದ್ದು, ಸತ್ಯಕ್ಕೆ ಮಣಿಯದೆ, ದುರ್ಮಾರ್ಗವನ್ನೇ ಅವಲಂಬಿಸಿ ನಡೆಯುವವರ ಮೇಲೆ ದೇವರ ಕೋಪವೂ ಆಕ್ರೋಶವೂ ಎರಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಉಳಿದ ಜನರು ಸ್ವಾರ್ಥಿಗಳಾಗಿದ್ದು, ಸತ್ಯವನ್ನು ಅನುಸರಿಸದೆ ದುಷ್ಟತ್ವವನ್ನು ಅನುಸರಿಸುವವರಾಗಿದ್ದಾರೆ. ಅವರ ಮೇಲೆ ದೇವರ ದಂಡನೆಯೂ ಕೋಪವೂ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯಾರು ಸ್ವಾರ್ಥಿಗಳಾಗಿದ್ದು ಸತ್ಯವನ್ನು ಅನುಸರಿಸದೆ ಅನೀತಿಯನ್ನು ಅನುಸರಿಸುತ್ತಾರೋ ಅವರ ವಿರುದ್ಧ ದೇವರಿಗೆ ಕೋಪವೂ ಆಕ್ರೋಶವೂ ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅನಿ ತ್ಯಾ ಹುರಲ್ಲ್ಯಾ ಚುಕ್ ಅಸಲ್ಲೆ ಕರುಸಾಟ್ನಿ, ಸ್ವಾರ್ಥಾನ್ ಬರೆ ಅಸಲ್ಲೆ ಸೊಡುನ್ ಸೊಡ್ತಲ್ಯಾ ಲೊಕಾಂಚ್ಯಾ ವರ್‍ತಿ ದೆವ್ ಅಪ್ನಾಚೊ ಮೊಟೊ ರಾಗ್ ಅನಿ ಆರ್ಬಾಟ್ ವೊತ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:8
34 ತಿಳಿವುಗಳ ಹೋಲಿಕೆ  

ಮಹಾ ಪಟ್ಟಣವು ಮೂರು ಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು. ಇದಲ್ಲದೆ ದೇವರು ದೊಡ್ಡ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಅವಳಿಗೆ ಕುಡಿಯಲು ಕೊಟ್ಟನು.


ನ್ಯಾಯವಿಚಾರಣೆಯ ಸಮಯ ಬಂದದೆ; ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಯಿತಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗಲು ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಗತಿ ಏನಾಗಬಹುದು?


ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ಒಳಪಡದವರಿಗೂ ಪ್ರತೀಕಾರವನ್ನು ಸಲ್ಲಿಸುವನು.


ಹೆಮ್ಮೆಯ ಫಲವು ಕಲಹವೇ; ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.


ಅವನು ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೆ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು; ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟ ಕೂಡಲೆ ಕರೆದಾತನ ಮಾತನ್ನು ಕೇಳಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.


ಅತ್ಯಂತ ಭಯದಿಂದ ಎದುರುನೋಡತಕ್ಕ ನ್ಯಾಯತೀರ್ಪೂ ದೇವರ ವಿರೋಧಿಗಳನ್ನು ದಹಿಸುವ ತೀಕ್ಷ್ಣವಾದ ಅಗ್ನಿಯೂ ಇವೇ ನಮ್ಮ ಮುಂದೆ ಇರುವವು.


ಇದಲ್ಲದೆ ಆತನು ಸಿದ್ಧಿಗೆ ಬಂದು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆನಿಸಿಕೊಂಡವನಾಗಿ ತನಗೆ ವಿಧೇಯರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಕಾರಣನಾದನು.


ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ಧರ್ಮಶಾಸ್ತ್ರದ ವಿಷಯವಾದ ವಾಗ್ವಾದಗಳಿಗೂ ದೂರವಾಗಿರು; ಅವು ನಿಷ್ಪ್ರಯೋಜನವೂ ವ್ಯರ್ಥವೂ ಆಗಿವೆ.


ಒಬ್ಬನು ವಾಗ್ವಾದಪ್ರಿಯನಾಗಿ ಕಾಣಿಸಿಕೊಂಡರೆ ಇಂಥ ಪದ್ಧತಿ ನಮ್ಮಲಿಲ್ಲ, ಮತ್ತು ದೇವರ ಸಭೆಗಳಲ್ಲಿಯೂ ಇಲ್ಲ ಎಂದು ತಿಳುಕೊಳ್ಳಲಿ.


ಕ್ರಿಸ್ತನು ಅನ್ಯಜನಗಳನ್ನು ತನಗೆ ಅಧೀನಮಾಡಿಕೊಳ್ಳುವದಕ್ಕಾಗಿ ನನ್ನ ಕೈಯಿಂದ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ ಸೂಚಕಕಾರ್ಯ ಅದ್ಭುತಕಾರ್ಯಗಳ ಬಲದಿಂದಲೂ ಪವಿತ್ರಾತ್ಮನ ಬಲದಿಂದಲೂ ಮಾಡಿಸಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವದಕ್ಕೆ ನನಗೆ ಧೈರ್ಯಸಾಲದು.


ಈ ವಿಷಯದಲ್ಲಿ ಯೆಶಾಯನು - ಕರ್ತನೇ, ನಾವು ಸಾರಿದ ವಾರ್ತೆಯನ್ನು ಯಾರು ನಂಬಿದರು ಎಂದು ನುಡಿಯುತ್ತಾನೆ.


ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ಸೈರಣೆಯಿಂದ ಸೈರಿಸಿಕೊಂಡಿದ್ದಾನೆ.


ಆದರೆ ನೀವು ಮುಂಚೆ ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಲ್ಪಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದದರಿಂದಲೂ


ದುಷ್ಟತನವನ್ನು ನಡಿಸಿ ಸತ್ಯವನ್ನು ಅಣಗಿಸುವವರಾದ ಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ತೋರಿಬರುತ್ತದೆ.


ಆತನ ಸಿಟ್ಟಿಗೆ ಯಾರು ತಡೆದಾರು? ಆತನ ರೋಷಾಗ್ನಿಗೆ ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ, ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.


ನಿಮ್ಮೊಳಗೆ ಯಾವನು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವನು? ಕತ್ತಲಲ್ಲಿ ನಡೆಯುತ್ತಾ ಬೆಳಕಿಲ್ಲದವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.


ನಿನ್ನ ಕೋಪದ ಬಲವನ್ನೂ ಭಯಭಕ್ತಿಗೆ ಕಾರಣವಾಗಿರತಕ್ಕ ನಿನ್ನ ರೌದ್ರವನ್ನೂ ಗ್ರಹಿಸುವವರಾರು?


ಬೆಳಕಿನ ಮೇಲೆ ತಿರುಗಿಬಿದ್ದವರು ಇದ್ದಾರೆ; ಇವರು ಹಗಲಿನ ದಾರಿಗಳನ್ನು ತಿಳಿಯದವರಾಗಿ ಅದರ ಹಾದಿಗಳಲ್ಲಿ ಇರುವದಿಲ್ಲ.


ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.


ನೀನು ಪರಲೋಕದಿಂದ ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು; ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ ಮುಯ್ಯಿತೀರಿಸು; ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡು.


ಸಜ್ಜನರ ಆಶೆಯು ಮಂಗಳಾಸ್ಪದ; ದುರ್ಜನರ ನಿರೀಕ್ಷೆಯು ರೋಷಾಸ್ಪದ.


ಕರುವನ್ನು ಸೀಳಿ ಅದರ ಹೋಳುಗಳ ನಡುವೆ ಹಾದುಹೋಗಿ ನನ್ನ ಮುಂದೆ ಮಾಡಿದ ಒಪ್ಪಂದದ ನಿಬಂಧನೆಗಳನ್ನು ಕೈಕೊಳ್ಳದೆ


ಆದಕಾರಣ ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸಮಾಡಿ ಅವರ ದುರ್ನಡತೆಯನ್ನು ಅವರ ತಲೆಗೇ ಕಟ್ಟಿದ್ದೇನೆ; ಇದು ಕರ್ತನಾದ ಯೆಹೋವನ ನುಡಿ.


ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ಜಗಳ ಹೊಟ್ಟೆಕಿಚ್ಚು ದ್ವೇಷ ಸ್ವಾರ್ಥಬುದ್ಧಿ ಚಾಡಿಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬರುವದೋ ಏನೋ ನನಗೆ ಸಂಶಯ ಉಂಟು.


ಕಕ್ಷಭೇದ ಭಿನ್ನಮತ ಮತ್ಸರ ಕುಡಿಕತನ ದುಂದೌತಣ ಇಂಥವುಗಳೇ.


ಆ ಬೇರೆ ತರದವರಾದರೋ ನಾನು ಬೇಡಿಬಿದ್ದಿರುವಾಗಲೂ ನನಗೆ ಸಂಕಟವನ್ನು ಎಬ್ಬಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಿಪಡಿಸದೆ ಕಕ್ಷಿಭಾವದಿಂದ ಪ್ರಸಿದ್ಧಿಪಡಿಸುತ್ತಾರೆ.


ಪಕ್ಷಪಾತದಿಂದಾಗಲಿ ಒಣಹೆಮ್ಮೆಯಿಂದಾಗಲಿ ಯಾವದನ್ನೂ ಮಾಡದೆ ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.


ಆದರೆ ತೀಕ್ಷ್ಣವಾದ ಮತ್ಸರವೂ ಪಕ್ಷಭೇದವೂ ನಿಮ್ಮ ಹೃದಯದೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.


ಮತ್ಸರವೂ ಪಕ್ಷಭೇದವೂ ಇರುವ ಕಡೆ ಗಲಿಬಿಲಿಯೂ ಸಕಲವಿಧ ನೀಚಕೃತ್ಯಗಳೂ ಇರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು