ರೋಮಾಪುರದವರಿಗೆ 3:19 - ಕನ್ನಡ ಸತ್ಯವೇದವು J.V. (BSI)19 ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೇ ಹೇಳಿವೆಯೆಂದು ಬಲ್ಲೆವಷ್ಟೆ; ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವದು, ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಧರ್ಮಶಾಸ್ತ್ರದ ಅಧೀನದಲ್ಲಿರುವ ಜನರ ವಿಷಯವಾಗಿಯೇ ಧರ್ಮಶಾಸ್ತ್ರವು ಈ ಸಂಗತಿಯನ್ನು ಹೇಳುತ್ತಿದೆ. ಆದ್ದರಿಂದ ಯೆಹೂದ್ಯರು ನೆವ ಹೇಳಲು ಸಾದ್ಯವಿಲ್ಲ. ಅಲ್ಲದೆ ಇಡೀ ಲೋಕವೇ ದೇವರ ನ್ಯಾಯತೀರ್ಪಿಗೆ ಒಳಗಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಿಯಮವು ಏನೇ ಹೇಳುವುದಾದರೂ ಅದು ನಿಯಮಕ್ಕೆ ಒಳಪಟ್ಟಿರುವವರಿಗೇ ಅನ್ವಯವಾಗುವುದೆಂದು ನಾವು ಬಲ್ಲೆವು. ಹೀಗೆ ಎಲ್ಲರ ಬಾಯಿ ಮುಚ್ಚಿಹೋಗುವುದು ಮತ್ತು ಲೋಕವೆಲ್ಲಾ ದೇವರ ತೀರ್ಪಿಗೆ ಒಳಗಾಗಿರುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಖಾಯ್ದ್ಯಾತ್ನಿ ಹೊತ್ತೆ ಸಗ್ಳೆ ಖಾಯ್ದ್ಯಾಂಚ್ಯಾ ಪರ್‍ಕಾರ್ ಚಲ್ತಲ್ಯಾ ಸಗ್ಳ್ಯಾಕ್ನಿ ಸಮಂದ್ ಪಡ್ತಾ ಮನುನ್ ಅಮ್ಕಾ ಕಳುನ್ ಯೆಲಾ, ಅಶೆ ಮಾನ್ಸಾನಿ ದಿತಲಿ ಸಗ್ಳಿ ನೆವಾನಾ ಸೊಡುನ್, ಸಗ್ಳ್ಯಾ ಜಗಾಕುಚ್ ದೆವಾಚ್ಯಾ ಇದ್ರಾಕ್ ಝಡ್ತಿಕ್ ಹಾನುನ್ ಹೊತಾ. ಅಧ್ಯಾಯವನ್ನು ನೋಡಿ |