Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:26 - ಕನ್ನಡ ಸತ್ಯವೇದವು J.V. (BSI)

26 ದೇವರು ಹಿಂದಿನ ಕಾಲದ ಪಾಪಗಳನ್ನು ದಂಡಿಸದೆ ಸಹಿಸಿಕೊಂಡಿರಲಾಗಿ ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿಸ್ವರೂಪನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತರೆಂದು ನಿರ್ಣಯಿಸುವವನಾಗಿಯೂ ಕಾಣಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೇಸುಕ್ರಿಸ್ತನಲ್ಲಿ ನಂಬಿಕೆ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯು ತಾನು ಸತ್ಯಸ್ವರೂಪನೂ, ನೀತಿವಂತನೂ ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಹೀಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯೂ ತಾವು ಸತ್ಯಸ್ವರೂಪರು ಮತ್ತು ನ್ಯಾಯವಂತರು ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಈ ರೀತಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಹೀಗೆ ದೇವರು ತಾನೇ ನೀತಿವಂತನೆಂಬುದನ್ನು ಮತ್ತು ಯೇಸುವಿನಲ್ಲಿ ನಂಬಿಕೆಯಿಡುವ ಯಾವನನ್ನೇ ಆಗಲಿ ನೀತಿವಂತನನ್ನಾಗಿ ಮಾಡುತ್ತೇನೆಂಬದನ್ನು ನಿರೂಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಈಗಿನ ಕಾಲದಲ್ಲಿ ದೇವರು ತಮ್ಮ ನೀತಿಯನ್ನು ತೋರ್ಪಡಿಸಲೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕಾಗಿಯೂ ದೀರ್ಘಶಾಂತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಖರೆ ಹ್ಯಾ ಎಳಾರ್ ತೊ ಅಪ್ನಿ ಖರೆಚ್ ಖರ್ಯ್ಯಾ ವಾಟೆನ್ ಚಲ್ನಾರೊ, ಅನಿ ಕ್ರಿಸ್ತಾ ವರ್‍ತಿ ವಿಶ್ವಾಸ್ ಥವ್ತಲ್ಯಾಕ್ನಿ ಅಪ್ನಿ ನಿತಿವಂತ್ ಮನುನ್ ಠರ್ವುತಾ ಮನುನ್ ದಾಕ್ವುನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:26
16 ತಿಳಿವುಗಳ ಹೋಲಿಕೆ  

ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.


ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡಿಸುವದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಯಥಾರ್ಥನೂ ಆಗಿದ್ದಾನೆ.


ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವದಕ್ಕೆ ಅವರ ನಂಬಿಕೆಯೇ ಆಧಾರ; ಸುನ್ನತಿಯಿಲ್ಲದವರನ್ನೂ ಹಾಗೆಯೇ ನಿರ್ಣಯಿಸುವದಕ್ಕೆ ನಂಬಿಕೆಯೇ ಕಾರಣ.


ದೇವರು ಆದುಕೊಂಡವರ ಮೇಲೆ ಯಾರು ತಪ್ಪುಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ.


ಅದರ ಮಧ್ಯೆ ನೆಲೆಗೊಂಡಿರುವ ಯೆಹೋವನು ನ್ಯಾಯಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಬೆಳಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡನು.


ಯೆಹೋವನು ಧರ್ಮಸ್ವರೂಪನಾಗಿರುವದರಿಂದ ಧರ್ಮೋಪದೇಶವನ್ನು ಘನಪಡಿಸಿ ಮಹತ್ತಿಗೆ ತರಬೇಕೆಂದು ಇಷ್ಟಪಟ್ಟನು.


ದೇವರ ದಾಸನಾದ ಮೋಶೆಯ ಹಾಡನ್ನೂ ಯಜ್ಞದ ಕುರಿಯಾದಾತನ ಹಾಡನ್ನೂ ಹಾಡುತ್ತಾ - ದೇವರಾದ ಕರ್ತನೇ, ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಸರ್ವಜನಾಂಗಗಳ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ;


ನಿನಗೆ ವಿಧಿಸಿದ ದಂಡನೆಗಳನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವದಕ್ಕೆ ಮುಂಚೆ ಯಾರು ತಿಳಿಸಿದರು? ಯೆಹೋವನೆಂಬ ನಾನಲ್ಲವೆ. ನಾನು ಹೊರತು ಇನ್ನು ಯಾವ ದೇವರೂ ಇಲ್ಲ, ನನ್ನ ವಿನಹ ಸತ್ಯಸ್ವರೂಪನೂ ರಕ್ಷಕನೂ ಆದ ದೇವರು ಇಲ್ಲವೇ ಇಲ್ಲ.


ಆ ಬಾಲಕನು ಬೆಳೆದು ಆತ್ಮದಲ್ಲಿ ಬಲವುಳ್ಳವನಾದನು ಮತ್ತು ಇಸ್ರಾಯೇಲ್ ಜನರಿಗೆ ತನ್ನನ್ನು ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯ ಪ್ರದೇಶಗಳಲ್ಲಿ ಇದ್ದನು.


ಈತನು ತನ್ನ ರಕ್ತವನ್ನು ಸುರಿಸಿ ನಂಬಿಕೆಯಿದ್ದವರಿಗಾಗಿ ಕೃಪಾಧಾರವಾಗಬೇಕೆಂದು ದೇವರು ಈತನನ್ನು ಮುಂದಿಟ್ಟನು.


ಹಾಗಾದರೆ ಹೊಗಳಿಕೊಳ್ಳುವದಕ್ಕೆ ಆಸ್ಪದವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಪ್ರಮಾಣದಿಂದ? ಕರ್ಮಮಾರ್ಗವನ್ನು ಅನುಸರಿಸುವದರಿಂದಲೋ? ಅಲ್ಲ; ವಿಶ್ವಾಸ ಮಾರ್ಗವನ್ನು ಅನುಸರಿಸುವದರಿಂದಲೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು