Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:3 - ಕನ್ನಡ ಸತ್ಯವೇದವು J.V. (BSI)

3 ಅವರಲ್ಲಿ ಕೆಲವರು ನಂಬದೆ ಹೋಗಿದ್ದರೇನು? ಅವರು ನಂಬದೆ ಹೋದದರಿಂದ ದೇವರು ವಚನಕ್ಕೆ ತಪ್ಪುವವನಾದನೋ? ಎಂದಿಗೂ ಇಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರಲ್ಲಿ ಕೆಲವರಿಗೆ ನಂಬಿಕೆ ಇರಲಿಲ್ಲವಾದರೂ? ಅವರ ಅಪನಂಬಿಕೆಯಿಂದ ದೇವರು ನಂಬಿಕೆಗೆ ತಪ್ಪುವವನಾದಾನೋ? ಎಂದಿಗೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರಲ್ಲಿ ಕೆಲವರು ಅಪ್ರಾಮಾಣಿಕರಾಗಿ ನಡೆದುಕೊಂಡಿದ್ದರೆ ಏನಾಯಿತು? ದೇವರ ಪ್ರಾಮಾಣಿಕತನಕ್ಕೆ ಭಂಗಬರಲು ಸಾಧ್ಯವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕೆಲವು ಯೆಹೂದ್ಯರು ದೇವರಿಗೆ ನಂಬಿಗಸ್ತರಾಗಿರಲಿಲ್ಲ ಎಂಬುದೇನೊ ಸತ್ಯ. ಆದರೆ ದೇವರು ತಾನು ಮಾಡಿದ ವಾಗ್ದಾನವನ್ನು ನೆರವೇರಿಸದಂತೆ ಅದು ಮಾಡುತ್ತದೆಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರಲ್ಲಿ ಕೆಲವರು ನಂಬದೆ ಹೋಗಿದ್ದರೇನು? ಅವರ ಅಪನಂಬಿಕೆಯು ದೇವರ ಪ್ರಾಮಾಣಿಕತೆಯನ್ನು ರದ್ದುಗೊಳಿಸುವುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಖರೆ ತ್ಯೆಂಚ್ಯಾತ್ಲೆ ಉಲ್ಲೆ ಜಾನಾ ವಿಶ್ವಾಸ್‍ ನಸಲ್ಲ್ಯಾ ಸಾರ್ಕೆ ಹೊಲೆ? ಅಸೆಮನುನ್ ದೆವಾಕ್ ವಿಶ್ವಾಸಾನ್ ರ್‍ಹಾಯ್‍ ನಸ್ತಾನಾ ರ್‍ಹಾತಾ ಮನುಕ್ ಹೊತಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:3
19 ತಿಳಿವುಗಳ ಹೋಲಿಕೆ  

ನಾವು ಅಪನಂಬಿಗಸ್ತರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ತನ್ನ ಸ್ವಭಾವಕ್ಕೆ ವಿರುದ್ಧವಾಗಿ ಏನೂ ಮಾಡಲಾರನು.


ಅವರಿಗೆ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಆ ಕಾಲದಲ್ಲಿ ಕೇಳಿದವರು ನಂಬದೆಹೋದ ಕಾರಣ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.


ದೇವರು ಹೇಳಿದ ಮಾತು ತಪ್ಪಿತೆಂದು ನಾವು ಭಾವಿಸಕೂಡದು. ಯಾಕಂದರೆ ಇಸ್ರಾಯೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ;


ಹಾಗೆಯೇ ನನ್ನ ಬಾಯಿಂದ ಹೊರಟ ಮಾತು ನನ್ನ ಇಷ್ಟಾರ್ಥವನ್ನು ನೆರವೇರಿಸಿ ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವದಿಲ್ಲ.


ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಬರುತ್ತದೆ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚುತ್ತಾ ಬರುತ್ತದೆ.


ಈ ವಿಷಯದಲ್ಲಿ ಯೆಶಾಯನು - ಕರ್ತನೇ, ನಾವು ಸಾರಿದ ವಾರ್ತೆಯನ್ನು ಯಾರು ನಂಬಿದರು ಎಂದು ನುಡಿಯುತ್ತಾನೆ.


ಅವರು ಹೆಚ್ಚುಹೆಚ್ಚಾಗಿ ಬಲಹೊಂದಿ ಚೀಯೋನ್‍ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ -


ಇಸ್ರಾಯೇಲ್ಯರ ನಿತ್ಯಾಧಾರನು ಸುಳ್ಳಾಡುವವನಲ್ಲ; ಪಶ್ಚಾತ್ತಾಪಪಡುವವನಲ್ಲ; ಯಾಕಂದರೆ ಅವನು ಪಶ್ಚಾತ್ತಾಪಪಡ ಮನುಷ್ಯನಲ್ಲ ಎಂದು ಹೇಳಿದನು.


ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ; ಮಾನವನಂತೆ ಮನಸ್ಸನ್ನು ಬೇರೆ ಮಾಡಿಕೊಳ್ಳುವವನಲ್ಲ. ತಾನು ಹೇಳಿದ ಮೇರೆಗೆ ನಡೆಯುವದಿಲ್ಲವೋ; ಮಾತು ಕೊಟ್ಟನಂತರ ನೆರವೇರಿಸುವದಿಲ್ಲವೋ.


ನಾವೆಲ್ಲರೂ ಮುಸುಕುತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ಪ್ರಭಾವದಿಂದ ಅಧಿಕಪ್ರಭಾವಕ್ಕೆ ಹೋಗುತ್ತಾ ಆ ಪ್ರಭಾವದ ಸಾರೂಪ್ಯವುಳ್ಳವರೇ ಆಗುತ್ತೇವೆ; ಇದು ದೇವರಾತ್ಮನಾಗಿರುವ ಕರ್ತನ ಕೆಲಸಕ್ಕನುಸಾರವಾದದ್ದೇ.


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.


ದೇವರು ವರಗಳನ್ನು ಅನುಗ್ರಹಿಸಿದ್ದಕ್ಕೂ ಜನರನ್ನು ಕರೆದದ್ದಕ್ಕೂ ಪಶ್ಚಾತ್ತಾಪಪಡುವವನಲ್ಲ.


ನಾವೆಲ್ಲರು ಆತನ ಪರಿಪೂರ್ಣತೆಯೊಳಗಿಂದ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು