Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:10 - ಕನ್ನಡ ಸತ್ಯವೇದವು J.V. (BSI)

10 ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗುವದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವದಕ್ಕೆ ಮೊದಲೇ ಎಣಿಸಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗುವುದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವುದಕ್ಕೆ ಮೊದಲೇ ಎಣಿಸಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೀಗೆ ಪರಿಗಣಿಸಿದ್ದು ಯಾವಾಗ? ಅಬ್ರಹಾಮನಿಗೆ ಸುನ್ನತಿ ಆಗುವುದಕ್ಕೆ ಮೊದಲೋ ಅಥವಾ ಅನಂತರವೊ? ಆತನು ಸುನ್ನತಿ ಮಾಡಿಸಿಕೊಳ್ಳುವ ಮೊದಲೇ ಹೀಗೆ ಪರಿಗಣಿಸಲಾಯಿತು; ಸುನ್ನತಿಮಾಡಿಸಿಕೊಂಡ ನಂತರವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಇದು ಯಾವಾಗ ಆಯಿತು? ದೇವರು ಅಬ್ರಹಾಮನನ್ನು ಸ್ವೀಕರಿಸಿಕೊಂಡದ್ದು ಸುನ್ನತಿಯಾಗುವುದಕ್ಕಿಂತ ಮೊದಲೋ ಅಥವಾ ಸುನ್ನತಿಯಾದಮೇಲೋ? ದೇವರು ಅವನನ್ನು ಸ್ವೀಕರಿಸಿಕೊಂಡದ್ದು ಸುನ್ನತಿಯಾಗುವುದಕ್ಕಿಂತ ಮೊದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದು ಯಾವಾಗ ಎಣಿಸಲಾಯಿತು? ಅವನಿಗೆ ಸುನ್ನತಿ ಆದ ಬಳಿಕವೋ? ಅಥವಾ ಸುನ್ನತಿಯಾಗುವುದಕ್ಕೆ ಮೊದಲೋ? ಅದು ನಂತರವಲ್ಲ, ಮೊದಲೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಹೆ ಸಗ್ಳೆ ಘಡಲ್ಲೆ ಕನ್ನಾ? ಅಬ್ರಾಹಾಮಾಚಿ ಸುನ್ನತ್ ಹೊವ್ಚ್ಯಾ ಅದ್ದಿ ಕಾಯ್ ಮಾನಾ? ಹೆ ಸಗ್ಳೆ ಘಡಲ್ಲೆ ಸುನ್ನತ್ ಹೊವ್ಚ್ಯಾ ಅದ್ದಿ, ಸುನ್ನತ್ ಹೊಲ್ಲ್ಯಾ ಮಾನಾ ನೈಯ್‍.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:10
11 ತಿಳಿವುಗಳ ಹೋಲಿಕೆ  

ಸುನ್ನತಿಯಾಗುವದರಲ್ಲಿ ಏನೂ ಇಲ್ಲ, ಸುನ್ನತಿಯಾಗದೆ ಇರುವದರಲ್ಲಿಯೂ ಏನೂ ಇಲ್ಲ; ಹೊಸ ಸೃಷ್ಟಿಯೇ ಬೇಕು.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋಜನವಿಲ್ಲ. ಪ್ರೀತಿಯಿಂದ ಕೆಲಸ ನಡಿಸುವ ನಂಬಿಕೆಯಿಂದಲೇ ಪ್ರಯೋಜನವಾಗಿದೆ.


ನೀನೂ ನಿನ್ನ ಹಿಂದೆ ಬರುವ ಸಂತತಿಯವರೂ ಕೈಕೊಳ್ಳಬೇಕಾದ ನನ್ನ ನಿಬಂಧನೆಯು ಯಾವದಂದರೆ - ನಿಮ್ಮಲ್ಲಿ ಪ್ರತಿಯೊಬ್ಬ ಗಂಡಸಿಗೂ ಸುನ್ನತಿಯಾಗಬೇಕೆಂಬದೇ.


ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಯೆಹೋವನು ಅವನಿಗೆ ದರ್ಶನಕೊಟ್ಟು - ನಾನು ಸರ್ವಶಕ್ತನಾದ ದೇವರು; ನನಗೆ ನಡಕೊಂಡು ದೋಷವಿಲ್ಲದವನಾಗಿರು.


ನಿನ್ನ ಸಂತತಿಯವರು ನಾಲ್ಕನೆಯ ತಲಾಂತರದಲ್ಲಿ ಇಲ್ಲಿಗೆ ತಿರಿಗಿಬರುವರು; ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ ಎಂದು ಹೇಳಿದನು.


ಈ ಶುಭವಚನವು ಸುನ್ನತಿಯಿದ್ದವರಿಗೆ ಮಾತ್ರವೋ? ಸುನ್ನತಿಯಿಲ್ಲದವರಿಗೆ ಸಹ ಆಗುತ್ತದೋ? ನೋಡೋಣ. ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ಹೇಳುತ್ತೇವಲ್ಲಾ.


ಆಮೇಲೆ ಸುನ್ನತಿಯೆಂಬ ಸಂಸ್ಕಾರವನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾದ ನೀತಿಗೆ ಮುದ್ರೆಯಾಗಿತ್ತು. ಹೀಗಿರುವದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾದಾಗ್ಯೂ ಮೂಲತಂದೆಯಾದನು; ಅವರೂ ನೀತಿವಂತರೆಂದು ಎಣಿಸಲ್ಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು