Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:12 - ಕನ್ನಡ ಸತ್ಯವೇದವು J.V. (BSI)

12 ಇದಲ್ಲದೆ ಸುನ್ನತಿಯವರಲ್ಲಿ ಯಾರಾರು ಸುನ್ನತಿ ಹೊಂದಿದ್ದಲ್ಲದೆ ನಮ್ಮ ಪಿತೃವಾಗಿರುವ ಅಬ್ರಹಾಮನಿಗೆ ಸುನ್ನತಿಯಾಗುವದಕ್ಕೆ ಮುಂಚೆ ಇದ್ದ ನಂಬಿಕೆಯ ಹೆಜ್ಜೆಗಳನ್ನು ಹಿಡಿದು ನಡೆಯುತ್ತಾರೋ ಅವರಿಗೆ ಸಹ ಮೂಲ ತಂದೆಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಲ್ಲದೆ ಸುನ್ನತಿಯವರಲ್ಲಿ ಸುನ್ನತಿಹೊಂದಿದ್ದವರಿಗೆ ಮಾತ್ರವಲ್ಲದೆ, ನಮ್ಮ ಪಿತೃವಾಗಿರುವ ಅಬ್ರಹಾಮನಿಗೆ ಸುನ್ನತಿಯಾಗುವುದಕ್ಕೂ ಮೊದಲೇ ಇದ್ದ ನಂಬಿಕೆಯ ಕ್ರಮವನ್ನು ಅನುಸರಿಸಿ ನಡೆಯುತ್ತಾರೋ ಅವರಿಗೆ ಸಹ ಮೂಲ ತಂದೆಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸುನ್ನತಿ ಮಾಡಿಸಿಕೊಂಡವರಿಗೆ ಅಬ್ರಹಾಮನು ಮೂಲಪಿತನಾಗಿರುವುದು ಕೇವಲ ಸುನ್ನತಿ ಪಡೆದುದರ ಕಾರಣದಿಂದಲ್ಲ. ಆದರೆ ಅವರು ಸುನ್ನತಿಮಾಡಿಸಿಕೊಳ್ಳುವ ಮೊದಲೇ ಆತನು ಕೈಗೊಂಡ ವಿಶ್ವಾಸಮಾರ್ಗವನ್ನು ಅನುಸರಿಸಿದ್ದರಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅಲ್ಲದೆ ಸುನ್ನತಿ ಮಾಡಿಸಿಕೊಂಡಿರುವ ಜನರಿಗೂ ಸಹ ಅಬ್ರಹಾಮನು ತಂದೆಯಾಗಿದ್ದಾನೆ. ಆದರೆ ಅವನನ್ನು ಅವರ ತಂದೆಯನ್ನಾಗಿ ಮಾಡುವಂಥದ್ದು ಅವರ ಸುನ್ನತಿಯಲ್ಲ. ನಮ್ಮ ತಂದೆಯಾದ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವ ಮೊದಲು ಹೊಂದಿದ್ದ ನಂಬಿಕೆಗನುಸಾರವಾಗಿ ಅವರು ಜೀವಿಸಿದರೆ ಮಾತ್ರ ಅವನು ಅವರ ತಂದೆಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಮ್ಮ ಪಿತೃವಾದ ಅಬ್ರಹಾಮನು ಸುನ್ನತಿ ಹೊಂದಿದವರಿಗೆ ಮಾತ್ರವೇ ತಂದೆಯಾಗಿರದೆ ಅವನಿಗೆ ಸುನ್ನತಿ ಆಗುವ ಮೊದಲು ಇದ್ದ ನಂಬಿಕೆಯ ಹೆಜ್ಜೆಯಲ್ಲಿ ನಡೆಯುವವರಿಗೂ ತಂದೆಯಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅಮ್ಚ್ಯಾ ಬಾಬಾ ಅಬ್ರಾಹಾಮಾನ್ ತೆನಿ ಸುನ್ನತ್ ಹೊವ್ಲ್ಯಾ ಅದ್ದಿ ಧರಲ್ಲ್ಯಾ ವಿಶ್ವಾಸಾಚ್ಯಾ ವಾಟೆನ್ ತೆನಿ ಚಲ್ತ್ಯಾತ್ ತಸೆಮನುನ್ ತೊ ಸುನ್ನತ್‍ ಕರುನ್ ಘೆಟಲ್ಲ್ಯಾಂಚೊಬಿ ಅನಿ ಸುನ್ನತ್ ಕರುನ್ ಘೆಯ್ನಸಲ್ಲ್ಯಾಂಚೊಬಿ ಆತ್ಮಿಕ್ ಬಾಬಾ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:12
14 ತಿಳಿವುಗಳ ಹೋಲಿಕೆ  

ನಾರೀಮಣಿಯೇ, ನಿನಗೆ ಗೊತ್ತಿಲ್ಲವಾದರೆ ಹಿಂಡಿನ ಹೆಜ್ಜೆಯ ಜಾಡನ್ನು ಹಿಡಿದು ಹೋಗಿ ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು.


ಒಳ್ಳೆಯವರ ನಡತೆಯನ್ನು ಅನುಸರಿಸುವಂತೆ [ವಿವೇಕವು] ನಿನ್ನನ್ನು ಪ್ರೇರಿಸಿ ನೀತಿವಂತರ ಹಾದಿಗಳನ್ನು ಹಿಡಿಯುವ ಹಾಗೆ [ಮಾಡುವದು].


ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿಹೋದನು.


ನಿಮ್ಮ ಬಳಿಗೆ ಹೋಗುವದಕ್ಕೆ ನಾನು ತೀತನನ್ನು ಬೇಡಿಕೊಂಡು ಅವನ ಜೊತೆಯಲ್ಲಿ ಆ ಸಹೋದರನನ್ನು ಕಳುಹಿಸಿಕೊಟ್ಟೆನಷ್ಟೆ. ತೀತನು ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡನೋ; ನಾವಿಬ್ಬರೂ ಒಬ್ಬ ಆತ್ಮನಿಂದಲೇ ಪ್ರೇರಿತರಾಗಿ ಒಂದೇ ಹೆಜ್ಜೆಜಾಡಿನಲ್ಲಿ ನಡೆಯಲಿಲ್ಲವೋ?


ಅಬ್ರಹಾಮನು ನಮಗೆ ಮೂಲಪುರುಷನಲ್ಲವೇ ಎಂಬುವ ಆಲೋಚನೆಯನ್ನು ಬಿಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.


ನನ್ನ ಕಾಲುಗಳನ್ನು ಕೋಳಕ್ಕೆ ಹಾಕಿ ನನ್ನ ಮಾರ್ಗಗಳನ್ನೆಲ್ಲಾ ಕಂಡುಕೊಂಡಿದ್ದಾನೆ ಎಂದು ಆಡಿದ್ದೀಯಲ್ಲಾ.


ಜನಾಂಗಗಳಲ್ಲಿ ಶ್ರೇಷ್ಠರಾದವರು ಅಬ್ರಹಾಮನ ದೇವರ ಪ್ರಜೆಯಾಗಿರುವದಕ್ಕೆ ಕೂಡಿಬರುತ್ತಾರೆ; ಯಾಕಂದರೆ ಭೂಪಾಲಕರೆಲ್ಲಾ ದೇವರಿಗೇ ಅಧೀನರಾಗಿದ್ದಾರೆ. ಆತನೇ ಸರ್ವೋನ್ನತನು.


ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು - ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವಾಸ್ತ್ಯವಾಗಿ ಸಿಕ್ಕಿತಲ್ಲಾ; ಅದು ಬಹುಜನರಾದ ನಮಗೆ ಸ್ವಾಸ್ತ್ಯವಾಗಿ ಸಿಕ್ಕಿದ್ದು ಏನು ದೊಡ್ಡದು ಅಂದುಕೊಳ್ಳುತ್ತಿದ್ದಾರೆ.


ಆಮೇಲೆ ಸುನ್ನತಿಯೆಂಬ ಸಂಸ್ಕಾರವನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾದ ನೀತಿಗೆ ಮುದ್ರೆಯಾಗಿತ್ತು. ಹೀಗಿರುವದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾದಾಗ್ಯೂ ಮೂಲತಂದೆಯಾದನು; ಅವರೂ ನೀತಿವಂತರೆಂದು ಎಣಿಸಲ್ಪಡುವರು.


ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ. ನಂಬಿಕೆಯೆಂಬ ನೀತಿಯಿಂದ ಆದದ್ದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು